ರಾಜ್ಯದಲ್ಲಿ ಶೇ.60 ರಷ್ಟು ಡೆಂಗ್ಯೂ ಪ್ರಕರಣ ಏರಿಕೆ

Date:

Advertisements

2023ಕ್ಕೆ ಹೋಲಿಕೆ ಮಾಡಿದರೇ ರಾಜ್ಯದಲ್ಲಿ ಈ ಬಾರಿ ಶೇ.60 ರಷ್ಟು ಡೆಂಗ್ಯೂ ಪ್ರಕರಣಗಳು ಏರಿಕೆಯಾಗಿವೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಆರೋಗ್ಯ ಇಲಾಖೆಯ ಅಂಕಿ ಅಂಶಗಳ ಪ್ರಕಾರ, 2023ರ ಜೂನ್​ನಲ್ಲಿ ಒಟ್ಟು 2,003 ಪ್ರಕರಣಗಳು ವರದಿಯಾಗಿದ್ದವು. ಆದರೆ, ಈ ವರ್ಷ ಜೂನ್​ನಲ್ಲಿ​ 4,886 ಡೆಂಗ್ಯೂ ಪ್ರಕರಣಗಳು ವರದಿಯಾಗಿವೆ. ಬಿಬಿಎಂಪಿ ವ್ಯಾಪ್ತಿಯಲ್ಲಿ 1,230 ಡೆಂಗ್ಯೂ ಪ್ರಕರಣಗಳು ಕಂಡುಬಂದಿದೆ.

ಇನ್ನು ಬೆಂಗಳೂರಿನಲ್ಲಿಯೂ ಕೂಡ ಡೆಂಗ್ಯೂ ಪ್ರಕರಣಗಳ ಏರಿಕೆಯಾಗಿದೆ. ರಾಜ್ಯದಲ್ಲಿ ಶೇ.60 ರಷ್ಟು ಜನರಿಗೆ ಡೆಂಗ್ಯೂ ಬಂದಿದೆ. ಜತೆಗೆ ಇನ್ನಿತರ ಜ್ವರದ ಪ್ರಕರಣ​ಗಳು ಏರಿಕೆ ಕಂಡಿವೆ. ಕಳೆದ ಮೇ ತಿಂಗಳಿನಲ್ಲಿ ಇದ್ದ 727 ಡೆಂಗ್ಯೂ ಪ್ರಕರಣಗಳು ಕಳೆದ 20 ದಿನದಲ್ಲಿ 1,230 ಪ್ರಕರಣಗಳು ವರದಿಯಾಗಿವೆ. ಜೂನ್‌ನಲ್ಲಿಯೇ ಡೆಂಗ್ಯೂ ಸಂಖ್ಯೆ ಏರಿಕೆಯಾಗಿದೆ.

Advertisements

ಈ ಸುದ್ದಿ ಓದಿದ್ದೀರಾ? ಬೆಂಗಳೂರು | 17 ವರ್ಷದ ಬಾಲಕನ ತಲೆಗೆ ರಾಡ್‌ನಿಂದ ಹೊಡೆದು ಕೊಲೆ

ಜನವರಿಯಿಂದ ಜೂ.24ರ ವರೆಗೆ 2,457 ಕೇಸ್ ಪತ್ತೆಯಾಗಿವೆ. ಇನ್ನು ರಾಜ್ಯದಲ್ಲಿ ಜನವರಿಯಿಂದ ಜೂನ್ 20ರವರೆಗೆ 7,343ಕ್ಕೂ ಹೆಚ್ಚು ಜನರಿಗೆ ಡೆಂಗ್ಯೂ ಕಂಡುಬಂದಿದೆ. ಈ ಮೂಲಕ ಶೇ.60 ರಷ್ಟು ಡೆಂಗ್ಯೂ ಪ್ರಕರಣಗಳು ಏರಿಕೆ ಕಂಡಿವೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

ಬೆಂಗಳೂರಿನಲ್ಲಿ ಬೈಕ್‌ ಟ್ಯಾಕ್ಸಿ ಪುನರಾರಂಭ; ಸೀಮಿತ ಆ್ಯಪ್‌ಗಳಲ್ಲಿ ಮಾತ್ರ ಲಭ್ಯ

ಬೆಂಗಳೂರಿನಲ್ಲಿ ಗುರುವಾರದಿಂದ (ಆಗಸ್ಟ್‌ 21) ಮತ್ತೆ ಬೈಕ್‌ ಟ್ಯಾಕ್ಸಿ ಸೇವೆಗಳು ಪುನಾರಂಭವಾಗಿವೆ....

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

Download Eedina App Android / iOS

X