ರಾಜ್ಯದಲ್ಲಿ 5 ಸಾವಿರ ಗಡಿ ದಾಟಿದ ಡೆಂಗ್ಯೂ ಪ್ರಕರಣ

Date:

Advertisements

ಮಳೆಗಾಲ ಶುರುವಾಗುತ್ತಿದ್ದಂತೆಯೇ ಡೆಂಗ್ಯೂ ಹಾವಳಿ ಆರಂಭವಾಗಿದ್ದು, ರಾಜ್ಯದಲ್ಲಿ ಪ್ರಕರಣಗಳ ಸಂಖ್ಯೆ 5 ಸಾವಿರ ಗಡಿ ದಾಟಿದೆ. ರಾಜ್ಯದಲ್ಲಿ ಜನವರಿಯಿಂದ ಇಲ್ಲಿಯವರೆಗೆ ಒಟ್ಟು 5187 ಡೆಂಗ್ಯೂ ಕೇಸ್ ಪತ್ತೆ ಆಗಿವೆ.

ಬೆಂಗಳೂರು ಸೇರಿದಂತೆ ನಾನಾಕಡೆ ಡೆಂಗ್ಯೂ ಜ್ವರ ಹಾವಳಿಯಿಂದ ಜನ ಹೈರಾಣಾಗಿದ್ದಾರೆ. ಜ್ವರ, ನೆಗಡಿಯಿಂದ ಬಳಲುತ್ತಿದ್ದಾರೆ. ಬಿಬಿಎಂಪಿ ವ್ಯಾಪ್ತಿಯಲ್ಲಿ 1,230 ರಾಜ್ಯದಲ್ಲಿ 3,975 ಪ್ರಕರಣ ಪತ್ತೆಯಾಗಿದೆ. ಜೂನ್ ತಿಂಗಳಲ್ಲಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಏರಿಕೆ ಕಂಡಿದೆ.

ರಾಜ್ಯದಲ್ಲಿ 37,144 ಜನರ ರಕ್ತ ಮಾದರಿ ಪಡೆಯಲಾಗಿದೆ. 3,975 ಮಂದಿಗೆ ಪಾಸಿಟಿವ್ ಕಂಡುಬಂದಿದೆ. ಇದುವರೆಗೆ 5,187 ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿವೆ.

Advertisements

ಇನ್ನು ಬೆಂಗಳೂರಿನಲ್ಲಿ 1,230 ಪ್ರಕರಣ ಕಂಡುಬಂದಿದೆ. ಹಾವೇರಿಯಲ್ಲಿ 389 ಜನರಲ್ಲಿ ಸೋಂಕು ಪತ್ತೆಯಾಗಿದ್ದು, 12 ಜನರಿಗೆ ಚಿಕಿತ್ಸೆ ಮುಂದುವರೆದಿದೆ. ಮೈಸೂರಿನಲ್ಲಿ 358, ಚಿಕ್ಕಮಗಳೂರು 346, ಕಲಬುರಗಿ ಜಿಲ್ಲೆಯಲ್ಲಿ 153 ಡೆಂಗ್ಯೂ ಪ್ರಕರಣಗಳು ವರದಿಯಾಗಿವೆ. ಯಾದಗಿರಿಯಲ್ಲಿ ಕೇವಲ 4 ಪ್ರಕರಣಗಳು ಮಾತ್ರ ಕಂಡು ಬಂದಿವೆ. ಡೆಂಗ್ಯೂ ನಿಯಂತ್ರಣಕ್ಕಾಗಿ ಈಗಾಗಲೇ ಆರೋಗ್ಯ ಇಲಾಖೆಯಿಂದ ಎಲ್ಲ ರೀತಿಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ.

“ಡೆಂಗ್ಯೂ ಪೀಡಿತರಲ್ಲಿ ಸಾವಿನ ಪ್ರಮಾಣ ಕಡಿಮೆ ಇದೆ. ಡೆಂಗ್ಯೂ ನಿಯಂತ್ರಣಕ್ಕೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಇದರ ನಡುವೆ ಜನರು ಸಹ ಮುನ್ನೆಚ್ಚರಿಕೆ ವಹಿಸಬೇಕು. ನೀರು ನಿಂತರೆ ಡೆಂಗ್ಯೂ ಹರಡುವ ಸೊಳ್ಳೆಗಳು ಹೆಚ್ಚಾಗುತ್ತವೆ. ಹಾಗಾಗಿ ಮನೆಯ ಮುಂದೆ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ಆ ಮೂಲಕ ಸಾರ್ವಜನಿಕರು ಡೆಂಗ್ಯೂ ನಿಯಂತ್ರಣಕ್ಕೆ ಸಹಕರಿಸಬೇಕು” ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ದರ್ಶನ್ ಪ್ರಕರಣ | ಜುಲೈ 4ರವರೆಗೆ ಪರಪ್ಪನ ಅಗ್ರಹಾರಕ್ಕೆ ಆರೋಪಿ ನಟ

ಆರೋಗ್ಯ ಇಲಾಖೆ ಡೆಂಗ್ಯೂ ಕಂಟ್ರೋಲ್​ಗೆ ಹಲವು ಕ್ರಮ ಕೈಗೊಂಡಿದೆ. ಜನರು ತಮ್ಮ ಮನೆಗಳ ಸುತ್ತಮುತ್ತ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ಸೊಳ್ಳೆಗಳ ಸಂತಾನೋತ್ಪತ್ತಿಗೆ ಅವಕಾಶ ನೀಡದಂತೆ ಸ್ವಚ್ಛತೆ ಕಾಪಾಡಿಕೊಳ್ಳಿ. ಸಂಜೆ, ರಾತ್ರಿ ವೇಳೆ ಸೊಳ್ಳೆ ಕಚ್ಚದಂತೆ ನೋಡಿಕೊಳ್ಳಬೇಕು ಅಂತ ಜನರಲ್ಲಿ ಮನವಿ ಮಾಡಿದೆ.

ಇಲಾಖೆಯಿಂದ ಸೊಳ್ಳೆಗಳ ಕಂಟ್ರೋಲ್​ಗೆ ಫಾಗಿಂಗ್, ಆಶಾ ಕಾರ್ಯಕರ್ತೆಯರಿಂದ ಜಾಗೃತಿ ಮೂಡಿಸೋ ಕೆಲಸ ಜತೆಗೆ, ನೀರು ಸಂಗ್ರಹಣ ತೊಟ್ಟಿಗಳಲ್ಲಿ ಗಪ್ಪಿ ಅಥವಾ ಲಾರ್ವಾಹಾರಿ ಮೀನುಗಳನ್ನ ಬಿಟ್ಟು ಸೊಳ್ಳೆಗಳ ಉತ್ಪತ್ತಿ ತಡೆಗೆ ಮುಂದಾಗಿದೆ. ಆರೋಗ್ಯ ಕೇಂದ್ರಗಳಲ್ಲಿ ಡೆಂಗ್ಯೂ ಪರೀಕ್ಷೆಗೆ ವ್ಯವಸ್ಥೆ ಮಾಡಲಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

Download Eedina App Android / iOS

X