ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಎ ಎಂ ಬಸವರಾಜು ಸಸ್ಪೆಂಡ್

Date:

Advertisements

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಎ ಎಂ ಬಸವರಾಜು ಅವರನ್ನು ಸೇವೆಯಿಂದ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರಾಗಿ ಈ ಹಿಂದೆ ಬೆಳಗಾವಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಬಸವರಾಜು ವಿರುದ್ಧ ಜಿಲ್ಲಾ ಕಚೇರಿ ಸಿಬ್ಬಂದಿಗಳಿಗೆ ಹಾಗೂ ಜಿಲ್ಲೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಗೆ ಕಿರುಕುಳ, ಮಾನಸಿಕ ಹಿಂಸೆ, ಮಹಿಳಾ ಸಿಬ್ಬಂದಿಗಳ ಜೊತೆ ದುರ್ನಡತೆ, ದಬ್ಬಾಳಿಕೆ ಹಾಗೂ ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪ ಕೇಳಿಬಂದಿದ್ದು, ಸಾರ್ವಜನಿಕರ ಮುಂದೆ ಸಿಬ್ಬಂದಿಗಳನ್ನು ಅವಮಾನಿಸುತ್ತಿದ್ದರು ಎನ್ನುವ ಆರೋಪಗಳಿವೆ.

ಅಲ್ಲದೇ ಕಚೇರಿ ಸಮಯ ಮುಗಿದ ನಂತರವೂ ಅವಶ್ಯಕತೆ ಇಲ್ಲದಿದ್ದರೂ ಮಹಿಳಾ ಸಿಬ್ಬಂದಿಗಳನ್ನು ರಾತ್ರಿ 8-9 ಗಂಟೆವರೆಗೆ ಕಚೇರಿಯಲ್ಲಿ ಉಳಿಯುವಂತೆ ಆದೇಶಿಸಿದ್ದರು. ಮನೆಗೆ ಹೋದ ಬಳಿಕವೂ ಸಿಬ್ಬಂದಿಗಳಿಗೆ ರಾತ್ರಿ 10-11 ಗಂಟೆಗೆ ಕರೆ ಮಾಡಿ ಕೆಲಸ ಹೇಳುತ್ತಿದ್ದರು. ಇಲಾಖೆಯ ಕಾರ್ಯಕ್ರಮ ನಡೆಯುತ್ತಿದ್ದಾಗ ಬೇರೆ ಇಲಾಖೆ ಅಧಿಕಾರಿಗಳ ಎದುರಿಗೆ ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗಳು, ಸಿಬ್ಬಂದಿಗಳನ್ನು ಕೆಟ್ಟ ಶಬ್ದಗಳಿಂದ ಬೈದು ಅವಮಾನಿಸುತ್ತಿದ್ದರು.

Advertisements

ಸಿಬ್ಬಂದಿಗಳಿಗೆ ಯೋಗ್ಯತೆ ಇಲ್ಲ, ದನ ಕಾಯೋನು, ಯೂಸ್ ಲೆಸ್ ಫೆಲೋ, ಕತ್ತೆ ಮೇಯಿಸೋಕೆ ಹೋಗಿ ಎಂದು ಬಾಯಿಗೆ ಬಂದಂತೆ ಮಾತನಾಡುತ್ತಿದ್ದರು. ಕಾಲಕಾಲಕ್ಕೆ ಕಡತಗಳನ್ನು ಸಿಬ್ಬದಿಗಳು ತಯಾರಿಸಿಕೊಟ್ಟರೂ ಮೇಲಧಿಕಾರಿಗಳ ಬಳಿ ಹೋಗಿ ಕಡತಕ್ಕೆ ಸಹಿ ಹಾಕಿಸಿಕೊಂಡು ಬರದೇ ಕೆಲಸದಲ್ಲಿ ವಿಳಂಬ ಧೋರಣೆ ಅನುಸರಿಸುತ್ತ ಕಿರುಕುಳ ನೀಡುತ್ತಿದ್ದರು. ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ಹಾಗೂ ಕಚೇರಿ ಸಿಬ್ಬಂದಿಗಳು ಬಸವರಾಜು ವಿರುದ್ಧ ಕ್ರಮಕ್ಕೆ ಮನವಿ ಮಾಡಿದ್ದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ದೂಷಣೆ ಬಿಡಲಿ, ಆತ್ಮಹತ್ಯೆಯಿಂದ ರೈತರನ್ನು ದೂರ ಮಾಡಲಿ

ಅಲ್ಲದೇ ಚಿಕ್ಕೋಡಿ ಸಂಸದ ಅಣ್ಣಸಾಹೇಬ ಜೊಲ್ಲೆ ಸೇರಿದಂತೆ ಹಲವರು ಎ ಎಂ ಬಸವರಾಜು ವಿರುದ್ಧ ಬೆಳಗಾವಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೂ ದೂರು ಸಲ್ಲಿಸಿದ್ದರು. ಮಾತ್ರವಲ್ಲ ಬಸವರಾಜು ಅವರನ್ನು ಬೆಳಗಾವಿ ಜಿಲ್ಲೆಯಿಂದ ಬೇರೆ ಕಡೆಗೆ ವರ್ಗಾವಣೆ ಮಾಡಬಹುದಾಗಿದೆ ಅಥವಾ ಚುನಾವಣಾ ಕರ್ತವ್ಯದಿಂದ ನಿರ್ಬಂಧಿಸಬಹುದಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳು ರಾಜ್ಯ ಮುಖ್ಯ ಚುನಾವಣಾಧಿಕಾರಿಗಳಿಗೆ ಪತ್ರ ಬರೆದಿದ್ದರು.

ಇತ್ತೀಚೆಗೆ ಬೆಳಗಾವಿಯಲ್ಲಿ ಅಧಿವೇಶನ ನಡೆಯುತ್ತಿದ್ದ ಸಂದರ್ಭದಲ್ಲಿ ಮತ್ತೆ ಬೆಳಗಾವಿಗೆ ಆಗಮಿಸಿ ಹಾಲಿ ಉಪನಿರ್ದೇಶಕ ನಾಗರಾಜ ಅವರು ಸುವರ್ಣ ವಿಧಾನಸೌಧದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ತನಗೆ ನ್ಯಾಯಾಲಯದಿಂದ ಆದೇಶವಾಗಿದೆ ಎಂದು ಹೇಳಿ ಕಚೇರಿಗೆ ಹಾಜರಾಗಿ ಸಿಬ್ಬಂದಿಯನ್ನು ಅವಾಚ್ಯವಾಗಿ ಬೈದು, ಅನುಚಿತವಾಗಿ ವರ್ತಿಸಿದ್ದರು ಎನ್ನುವ ಆರೋಪ ಬಸವರಾಜು ಮೇಲಿದೆ.

ಪರಿಶಿಷ್ಟ ಜಾತಿಯ ನೌಕರರಿಗೆ ಜಾತಿ ನಿಂದನೆ ಮಾಡಿದ ಆರೋಪ, ಮಹಿಳಾ ಸಿಬ್ಬಂದಿ ಮೇಲೆ ದೌರ್ಜನ್ಯ ಮೊದಲಾದ ಆರೋಪಗಳು ಸಹ ಇವರ ಮೇಲಿದೆ. ಈ ಹಿನ್ನೆಲೆಯಲ್ಲಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧೀನ ಕಾರ್ಯದರ್ಶಿ ರಶ್ಮಿ ಅವರು ಎಂ ಎಸ್ ಬಸವರಾಜು ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಮತ್ತು ಸೌಜನ್ಯ, ಮುಂತಾದ...

Download Eedina App Android / iOS

X