ದೇವೇಗೌಡರ ʼಮಾನಸ ಪುತ್ರʼ ವೈ ಎಸ್‌ ವಿ ದತ್ತ ಮರಳಿ ಜೆಡಿಎಸ್‌ ಗೂಡಿಗೆ

Date:

  • ಡಿಕೆಶಿ ಕುರಿತು ವಿವಾದಿತ ಹೇಳಿಕೆ ನೀಡಿ ಟಿಕೆಟ್‌ ವಂಚಿತರಾಗಿದ್ದ ದತ್ತ
  • ಪಕ್ಷ ಸೇರಿ ಮೂರು ತಿಂಗಳು ಕಳೆಯುವ ಮುನ್ನವೇ ಕಾಂಗ್ರೆಸ್‌ಗೆ ಗುಡ್‌ ಬೈ

ಒಂದು ಕಾಲದ ಜೆಡಿಎಸ್‌ ಮೇಷ್ಟ್ರು, ಮಾಜಿ ಪ್ರಧಾನಿ ದೇವೇಗೌಡರ ಮಾನಸ ಪುತ್ರ ಅಂತಲೇ ಹೆಸರಾಗಿದ್ದ ವೈ ಎಸ್‌ ವಿ ದತ್ತ ಮತ್ತೆ ಜೆಡಿಎಸ್‌ಗೆ ಮರಳಿದ್ದಾರೆ.

- Advertisement -

ಕಡೂರು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಟಿಕೆಟ್‌ ಬಯಸಿ ಜೆಡಿಎಸ್‌ ತೊರೆದಿದ್ದರು. ಜನವರಿ 15ರಂದು ಕಾಂಗ್ರೆಸ್‌ ಸೇರಿದ್ದ ದತ್ತ ಈಗ ಮೂರು ತಿಂಗಳು ಕಳೆಯುವ ಮುನ್ನವೇ ಕಾಂಗ್ರೆಸ್ಸಿಗೂ ಗುಡ್‌ ಬೈ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

‌ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಕುರಿತು ದತ್ತ ಅವರು ವಿವಾದಿತ ಹೇಳಿಕೆ ನೀಡಿದ್ದೆ ಟಿಕೆಟ್‌ ತಪ್ಪಲು ಕಾರಣವಾಗಿದೆ ಎನ್ನುವ ಮಾತುಗಳು ಕಾಂಗ್ರೆಸ್ ವಲಯದಲ್ಲೇ ಕೇಳಿಬಂದಿವೆ. ಕಡೂರು ಕ್ಷೇತ್ರಕ್ಕೆ ಕೆ ಎಸ್‌ ಆನಂದ್‌ ಅವರಿಗೆ ಕಾಂಗ್ರೆಸ್ ಮಣೆ ಹಾಕಿದೆ. ಇದರಿಂದ ಮುನಿಸಿಕೊಂಡ ದತ್ತ ತನ್ನ ಬೆಂಬಲಿಗರೊಂದಿಗೆ ಸಭೆ ಕರೆದು ಮುಂದಿನ ರಾಜಕೀಯ ನಡೆ ಬಗ್ಗೆ ಚರ್ಚಿಸಿದ್ದರು.

ಈ ಸುದ್ದಿ ಓದಿದ್ದೀರಾ? ನಾಮಪತ್ರ ಸಲ್ಲಿಕೆಯ ಮೊದಲ ದಿನವೇ ಉಮೇದುವಾರಿಕೆ ಸಲ್ಲಿಸಿ ಗಮನ ಸೆಳೆದ ಅಭ್ಯರ್ಥಿಗಳು

ಆ ಸಭೆ, ಚರ್ಚೆಯ ನಂತರ ಬೆಂಗಳೂರಿನ ಪದ್ಮನಾಭನಗರದ ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿದ್ದ ದತ್ತ ಅವರು, “ಕಾಂಗ್ರೆಸ್‌ನಲ್ಲಿ ಅನ್ಯಾಯ ಆಗೋಯ್ತು” ಅಂತ ಅಳಲು ತೋಡಿಕೊಂಡು, ಪಕ್ಷಕ್ಕೆ ವಾಪಾಸ್ ಆಗುವ ಅಭಿಲಾಷೆ ವ್ಯಕ್ತಪಡಿಸಿದ್ದರು ಎಂದು ತಿಳಿದುಬಂದಿದೆ.

ದೇವೇಗೌಡರೊಂದಿಗಿನ ಮಾತುಕತೆ ಬಳಿಕ ಎಚ್‌ ಡಿ ರೇವಣ್ಣ ಮತ್ತು ಪುತ್ರ ಪ್ರಜ್ವಲ್‌ ರೇವಣ್ಣ ಅವರು ಗುರುವಾರ ವೈ ಎಸ್‌ ವಿ ದತ್ತ ಅವರ ಮನೆಗೆ ಭೇಟಿ ನೀಡಿ, ಅಧಿಕೃತವಾಗಿ ಅವರನ್ನು ಮರಳಿ ಜೆಡಿಎಸ್‌ಗೆ ಬರಮಾಡಿಕೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜಸ್ಥಾನ | ಬಿಜೆಪಿಗೆ ಮುಖಭಂಗ; ಮಾಜಿ ಸಿಎಂ ಭದ್ರಕೋಟೆ ಭೇದಿಸಿದ ಕಾಂಗ್ರೆಸ್

ರಾಜಸ್ಥಾನದಲ್ಲಿ ನಡೆದ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ...

ಭಾರತದ ಇತರ ಭಾಷೆಗಳನ್ನು ಗೌರವಿಸಿ, ರಕ್ಷಿಸಿದಾಗ ಮಾತ್ರ ಹಿಂದಿಯ ಪ್ರಗತಿಗೆ ಅರ್ಥ: ಅಮಿತ್ ಶಾ

ಭಾರತೀಯ ಇತರ ಭಾಷೆಗಳ ಗೌರವ, ಪ್ರಚಾರ ಮತ್ತು ರಕ್ಷಣೆಯನ್ನು ಖಚಿತಪಡಿಸಿಕೊಳ್ಳುವ ಮೂಲಕ...

ಬಂಗಾಳದ 252 ಮದರಸಾಗಳು ಬಂದ್; ಭಯೋತ್ಪಾದಕರ ಆಶ್ರಯತಾಣ ಎಂದ ಸಚಿವ: ಬಿಜೆಪಿ ಸರ್ಕಾರಕ್ಕೆ ಮುಸ್ಲಿಮರೇ ಗುರಿಯೇ?

ಪಶ್ಚಿಮ ಬಂಗಾಳದಲ್ಲಿ ಆಡಳಿತಾರೂಢ ಬಿಜೆಪಿ ಸರ್ಕಾರವು ರಾಜ್ಯಾದ್ಯಂತ ಕಾರ್ಯಾಚರಣೆ ನಡೆಸುತ್ತಿರುವ ಮದರಸಾಗಳ...

ಬಿಜೆಪಿಯಲ್ಲಿ ಆಂತರಿಕ ಕುಸ್ತಿ; ಪ್ರತಾಪ್ ಸಿಂಹ – ನಾಗೇಂದ್ರ‌ ಬೀದಿ ಕಾಳಗ

ಮೈಸೂರು ಜಿಲ್ಲೆಯ ಟಿ. ನರಸೀಪುರ ಗಣೇಶೋತ್ಸವ ಮೆರವಣಿಗೆ ವಿಚಾರವಾಗಿ ಇನ್ಸ್‌ಪೆಕ್ಟರ್ ಧನಂಜಯ್‌...