ಧರ್ಮಸ್ಥಳ ಪ್ರಕರಣ | ಮಾಧ್ಯಮಗಳ ಮೇಲೆ ನಿರ್ಬಂಧವನ್ನು ಪ್ರಶ್ನಿಸಿದ ಹೈಕೋರ್ಟ್‌

Date:

ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತು ಹಾಕಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಆ ಕ್ಷೇತ್ರದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರ ಸಹೋದರ ಹರ್ಷೇಂದ್ರ ಕುಮಾರ್ ಡಿ ಅವರ ವಿರುದ್ಧ ಯಾವುದೇ ಮಾನಹಾನಿ ವಿಷಯ ಪ್ರಸಾರ ಮಾಡದಂತೆ ಮಾಧ್ಯಮಗಳಿಗೆ ನಿರ್ಬಂಧವನ್ನು ವಿಧಿಸಿರುವ ಆದೇಶವನ್ನು ಕರ್ನಾಟಕ ಹೈಕೋರ್ಟ್‌ ಪ್ರಶ್ನಿಸಿದೆ.

- Advertisement -

ಮಾಧ್ಯಮಗಳಿಗೆ ನಿರ್ಬಂಧ ವಿಧಿಸಿರುವ ಆದೇಶವನ್ನು ಪ್ರಶ್ನಿಸಿ ಡಿಜಿಟಲ್‌ ಮಾಧ್ಯಮ ಸಂಸ್ಥೆ ಕುಡ್ಲ ರ‍್ಯಾಂಪೇಜ್‌ ಪ್ರಧಾನ ಸಂಪಾದಕ ಅಜಯ್‌ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ನಡೆಸಿದ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ, “ನಿರ್ಲಜ್ಜವಾಗಿ ಎಲ್ಲರನ್ನು ನಿರ್ಬಂಧಿಸುವ ಇದೆಂಥಾ ಆದೇಶ” ಎಂದು ಹರ್ಷೇಂದ್ರ ಕುಮಾರ್‌ ಪರ ವಕೀಲರನ್ನು ಪ್ರಶ್ನಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಇದನ್ನು ಓದಿದ್ದೀರಾ? ಧರ್ಮಸ್ಥಳ ಪ್ರಕರಣ | ದೂರುದಾರನ ಮಾಹಿತಿ ಬಹಿರಂಗಪಡಿಸಿದವರ ವಿರುದ್ಧ ಪ್ರತ್ಯೇಕ ತನಿಖೆ: ಎಸ್‌ಪಿ

ವಾದ ಮಂಡಿಸಿದ ಅರ್ಜಿದಾರರ ಪರ ವಕೀಲ ಎ ವೇಲನ್‌, “ಎಫ್‌ಐಆರ್‌ನಲ್ಲಿನ ಅಂಶಗಳ ಬಗ್ಗೆ ಮಾತನಾಡದಂತೆ 390 ಮಾಧ್ಯಮಗಳನ್ನು ನಿರ್ಬಂಧಿಸಲಾಗಿದೆ. 9,000 ಯುಆರ್‌ಎಲ್‌ಗಳನ್ನು ಡಿಲೀಟ್‌ ಮಾಡಬೇಕು ಎಂದು ವಿಚಾರಣಾಧೀನ ನ್ಯಾಯಾಲಯ ಮೂರು ಗಂಟೆಗಳಲ್ಲಿ ಆದೇಶಿಸಿದೆ. ಇದರಿಂದಾಗಿ ಅರ್ಜಿದಾರರ ಮೂಲಭೂತ ಹಕ್ಕಿಗೆ ಹಾನಿಯಾಗಿದೆ. ಈ ನ್ಯಾಯಾಲಯಕ್ಕೆ ವ್ಯಾಪ್ತಿ ಇದೆ ಎಂಬುದಕ್ಕೆ ಸುಪ್ರೀಂ ಕೋರ್ಟ್‌ ತೀರ್ಪಿದ್ದು, ಅದನ್ನು ಸಾಬೀತುಪಡಿಸಲಾಗುವುದು” ಎಂದರು.

“ಮಾಧ್ಯಮಗಳನ್ನು ನಿರ್ಬಂಧಿಸಿರುವ ಆದೇಶ ಪ್ರಶ್ನಿಸಲಾಗಿದೆ ಎಂಬುದು ತಿಳಿದಿದೆ. ವಿಚಾರಣಾಧೀನ ನ್ಯಾಯಾಲಯ ಪರಿಗಣಿಸದಿದ್ದರೆ ನೀವು ಇಲ್ಲಿ ಬರಬಹುದಿತ್ತು. ಆದರೆ ಇದು ಈ ನ್ಯಾಯಾಲಯದ ವ್ಯಾಪ್ತಿಯಲ್ಲ. ನಿಮ್ಮ ವಾದ ಆಲಿಸಲಾಗುವುದು. ಆದರೆ ಮೊದಲು ಈ ಪ್ರಕರಣ ಈ ನ್ಯಾಯಾಲಯದ ವ್ಯಾಪ್ತಿಗೆ ಬರುತ್ತದೆ ಎಂಬುದನ್ನು ಸಾಬೀತುಪಡಿಸಬೇಕು” ಎಂದು ಪೀಠ ಹೇಳಿದೆ. ಇದಕ್ಕೆ ಪ್ರತಿಕ್ರಿಯಿಸಿದ ಅರ್ಜಿದಾರರ ಪರ ವಕೀಲರು, “ಈ ನ್ಯಾಯಾಲಯಕ್ಕೆ ವಿಚಾರಣಾ ವ್ಯಾಪ್ತಿ ಇದೆ ಎಂಬುದನ್ನು ಮನನ ಮಾಡಿಕೊಡಲಾಗುವುದು” ಎಂದು ತಿಳಿಸಿದ್ದಾರೆ.

ವಿಚಾರಣೆಯನ್ನು ಜುಲೈ 29ಕ್ಕೆ ಮುಂದೂಡಿತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಿಕ್ಕು ತೋಚದೆ ತಬ್ಬಿಬ್ಬಾಗಿರುವ ಚುನಾವಣಾ ಆಯೋಗ: ದಿನೇ ದಿನೆ ಕುಸಿಯುತ್ತಿರುವ ವಿಶ್ವಾಸಾರ್ಹತೆ

ಸೆಪ್ಟೆಂಬರ್ 23ರ 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯ ವರದಿಯ ನಂತರ ಆಯೋಗ...

ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಅಪಪ್ರಚಾರ ವಿಡಿಯೋ: ಇಬ್ಬರು ಪೊಲೀಸ್ ವಶಕ್ಕೆ

ಕಾಂಗ್ರೆಸ್ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತೇಜೋವಧೆ ಮಾಡುವ ಉದ್ದೇಶದಿಂದ...

ಅಲ್ಲಾವುದ್ದೀನನ ಅದ್ಭುತ ದೀಪದಂತೆ ಜಿಎಸ್‌ಎಸ್;‌ ʼಹಣತೆಯಿಂದ ಹಣತೆಗೆʼ ಸಂವಾದದಲ್ಲಿ ಮೇಷ್ಟ್ರು ನೆನಪು

ಒಂದು ಹಣತೆಯಿಂದ ಮತ್ತೊಂದು ಹಣತೆಯನ್ನು ಹಚ್ಚಿದಾಗ ಮೊದಲ ಹಣತೆಯ ಬೆಳಕು ಕಡಿಮೆಯಾಗುವುದಿಲ್ಲ,...