ʼಈದಿನ.ಕಾಮ್ʼ ನ್ಯೂಸ್ ಬೀದರ್ ಸಹಾಯವಾಣಿ ಬಿಡುಗಡೆಗೊಳಿಸಿದ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ

Date:

ಕಲುಷಿತವಾದ ವಾತಾವರಣದಲ್ಲಿ ಸಮಾಜದ ಉನ್ನತಿಗಾಗಿ ವಸ್ತುನಿಷ್ಠ, ಪ್ರಾಮಾಣಿಕತೆ, ದಕ್ಷತೆ ಹಾಗೂ ನಿರ್ಭಡೆಯಿಂದ ಕಂಡದ್ದು ಕಂಡ ಹಾಗೇ ಜನಪರ ಸುದ್ದಿಗಳನ್ನು ಜನಸಾಮಾನ್ಯರಿಗೆ ತಲುಪಿಸುವ ಮೂಲಕ ಸಮಾಜದ ಪರಿವರ್ತನೆಗಾಗಿ ʼಈದಿನ.ಕಾಮ್‌ʼ ಮಾಧ್ಯಮ ಶ್ರಮಿಸುತ್ತಿದೆ ಎಂದು ಅರಣ್ಯ, ಜೈವಿಕ ಮತ್ತು ಪರಿಸರ ಖಾತೆ ಹಾಗೂ ಬೀದರ್‌ ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ ಖಂಡ್ರೆ ಅವರು ಹೇಳಿದರು.

ಭಾನುವಾರ ಬೀದರ್‌ ಜಿಲ್ಲೆಯ ಭಾಲ್ಕಿಯ ತಮ್ಮ ಗೃಹ ಕಚೇರಿಯಲ್ಲಿ ʼಈದಿನ.ಕಾಮ್‌ʼ ಮಾಧ್ಯಮದ ಬೀದರ್‌ ಜಿಲ್ಲೆಯ ಸಹಾಯವಾಣಿ ಪೋಸ್ಟರ್‌ ಬಿಡುಗಡೆಗೊಳಿಸಿ ಅವರು ಮಾತನಾಡಿ, “ಈ ಭಾಗದ ಸರ್ವತೋಮುಖ ಅಭಿವೃದ್ದಿಗಾಗಿ ಈದಿನ ಮಾಧ್ಯಮ ಹೆಚ್ಚಿನ ಶ್ರಮವಹಿಸಲಿ” ಎಂದು ಸರ್ಕಾರದ ಪರವಾಗಿ ಹಾರೈಸಿದರು.

“ಬೀದರ್‌ ಜಿಲ್ಲೆಯ ಜನಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸಲು ಸಹಾಯವಾಣಿ ನಾನು ಉದ್ಘಾಟಿಸಿದ್ದು ತುಂಬಾ ಸಂತಸ ನೀಡಿದೆ. ರಾಜ್ಯ ಹಾಗೂ ಜಿಲ್ಲೆಯಲ್ಲಿ ಶೋಷಿತರು, ಬಡವರು, ಕಾರ್ಮಿಕರು, ರೈತರು ಅನೇಕ ಸಮಸ್ಯೆಗಳಿಂದ ಕಷ್ಟ ಅನುಭವಿಸುತ್ತಿದ್ದಾರೆ. ಸರ್ಕಾರ ಅನೇಕ ಯೋಜನೆಗಳನ್ನು ರೂಪಿಸಿದರೂ ಅದನ್ನು ಜನಸಾಮಾನ್ಯರಿಗೆ ತಲುಪಬೇಕಾದರೆ ಮಾಧ್ಯಮಗಳ ಪಾತ್ರ ಪ್ರಮುಖವಾಗಿದೆ” ಎಂದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ರಾಜ್ಯಾದ್ಯಂತ ಜನರ ದನಿಯಾಗಿ ಸಮಾಜದ ಉನ್ನತಿಗಾಗಿ ನಿಷ್ಪಕ್ಷಪಾತ ವಿಶೇಷ ಸುದ್ದಿಗಳನ್ನು ನೀಡುವ ಮೂಲಕ ಜನರ ಹೆಮ್ಮೆಗೆ ಪಾತ್ರರಾಗಿದ್ದಾರೆ. ʼಈದಿನʼ ಸಹಾಯವಾಣಿ ಮೂಲಕ ಜಿಲ್ಲೆಯ ಗ್ರಾಮೀಣ ಭಾಗದ ಜನರ ಜ್ವಲಂತ ಸಮಸ್ಯೆಗಳಿಗೆ ಧ್ವನಿಯಾಗಲಿ” ಎಂದು ನುಡಿದರು.

ನೊಂದವರ ನೋವಿಗೆ ಸ್ಪಂದಿಸುವ ‌ʼಈದಿನ.ಕಾಮ್ʼ ಮಾಧ್ಯಮ:

ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರು ಹಾಗೂ ಗುರುಬಸವ ಪಟ್ಟದ್ದೇವರು ʼಈದಿನʼ ಬೀದರ್ ಸಹಾಯವಾಣಿ ಪೋಸ್ಟರ್‌ ಬಿಡುಗಡೆಗೊಳಿಸಿದರು.

ಸಮಾಜದಲ್ಲಿ ಶೋಷಿತರ, ನಿರ್ಗತಿಕರ ನೋವು, ಸಮಸ್ಯೆಗಳಿಗೆ ಸ್ಪಂದಿಸುವ ಪ್ರಾಮಾಣಿಕ ಪ್ರಯತ್ನ ʼಈದಿನ.ಕಾಮ್‌ʼ ನ್ಯೂಸ್‌ ಮಾಡುತ್ತಿದೆ. ಇದೇ ನಿಜವಾದ ಜನಪರ ಮಾಧ್ಯಮದ ಸೇವಾ ಕಾರ್ಯ ಎಂದು ಬಸವಕಲ್ಯಾಣ ಅನುಭವ ಮಂಟಪ ಟ್ರಸ್ಟ್‌ ಅಧ್ಯಕ್ಷರು ಹಾಗೂ ಭಾಲ್ಕಿ ಹಿರೇಮಠದ ನಾಡೋಜ ಡಾ. ಬಸವಲಿಂಗ ಪಟ್ಟದ್ದೇವರು ಹೇಳಿದರು.

ಭಾಲ್ಕಿ ತಾಲೂಕಿನ ಕರಡ್ಯಾಳದ ಶ್ರೀ ಚನ್ನಬಸವೇಶ್ವರ ಗುರುಕುಲ ಸಭಾಂಗಣದಲ್ಲಿ  ಭಾನುವಾರ ಈದಿನ.ಕಾಮ್‌ ಮಾಧ್ಯಮದ ಬೀದರ್‌ ಜಿಲ್ಲೆಯ ಸಹಾಯವಾಣಿ ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು.

“ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಅಸಂಖ್ಯಾತ ಜನರು ಸಮಾಜದಲ್ಲಿದ್ದಾರೆ. ಅಂತವರನ್ನು ಗುರುತಿಸಿದರೆ ಮತ್ತೊಬ್ಬರಿಗೆ ಪ್ರೇರಣಾದಾಯಕವಾಗುತ್ತದೆ. ಸಂಕಷ್ಟದಲ್ಲಿರುವ ಜನರ ಮನೆ ಬಾಗಿಲಿಗೆ ತೆರಳಿ ಅವರ ಸಮಸ್ಯೆಗಳಿಗೆ ಸ್ಪಂದಿಸಿ ಸುದ್ದಿ ಬಿತ್ತರಿಸಿದರೆ ಹೆಚ್ಚಿನ ಜನರ ಬದುಕಿಗೆ ನಿಮ್ಮ ಮಾಧ್ಯಮ ಬೆಳಕಾಗುತ್ತದೆ” ಎಂದು ಸಲಹೆ ನೀಡಿದರು.

“ಅತ್ಯುತ್ತಮ ವಿಶ್ಲೇಷಣೆಯ ಸುದ್ದಿಗಳ ಮುಖಾಂತರ ಈಗಾಗಲೇ ಜನಪ್ರಿಯ ಸಮಾಜಮುಖಿ ಮಾಧ್ಯಮ ಎನಿಸಿಕೊಳ್ಳುತ್ತಿರುವ ʼಈದಿನ.ಕಾಮ್‌ʼ ಮಾಧ್ಯಮ ಸಂಸ್ಥೆ ಮುಂದಿನ ದಿನಗಳಲ್ಲಿ ಹೀಗೆ ವಿಸ್ತಾರಗೊಳ್ಳಿʼ ಎಂದು ಶುಭ ಹಾರೈಸಿದರು.

ಬೀದರ್‌ ಜಿಲ್ಲೆಯ ಸುದ್ದಿ, ವಿಡಿಯೋಗಳನ್ನು ಈದಿನ.ಕಾಮ್‌ ನ್ಯೂಸ್‌ ಬೀದರ್‌ ಸಹಾಯವಾಣಿ ಸಂಖ್ಯೆ 9035053805 ಗೆ ವ್ಯಾಟ್ಸಪ್‌ ಮೂಲಕ ಕಳುಹಿಸಬಹುದು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಸತ್ಯ, ಸಮಾನತೆಯ ಮತ್ತೊಂದು ಪ್ರತಿರೂಪವೇ ಶ್ರೀರಾಮ: ಡಾ. ಜಿ ಪರಮೇಶ್ವರ್

ಸತ್ಯ, ಸಮಾನತೆಯ ಮತ್ತೊಂದು ಪ್ರತಿರೂಪವೇ ಶ್ರೀರಾಮ ಎಂದು ಗೃಹಸಚಿವ ಡಾ. ಜಿ.ಪರಮೇಶ್ವರ್...

ರಾಜ್ಯದಲ್ಲಿ 20 ಕ್ಷೇತ್ರ ಗೆಲ್ಲುತ್ತೇವೆ; ಯಾವ ಅನುಮಾನವೂ ಇಲ್ಲ: ಡಿ ಕೆ ಶಿವಕುಮಾರ್‌ ವಿಶ್ವಾಸ

ಹಾಸನ, ಬೆಂಗಳೂರು ಗ್ರಾಮಾಂತರ, ಮಂಡ್ಯ, ಕೋಲಾರ ಈ ನಾಲ್ಕು ಕ್ಷೇತ್ರಗಳಲ್ಲಿ ಕಾಂಗ್ರೆಸ್...

ಪ್ರಧಾನಿ ಮೋದಿ, ಅಮಿತ್ ಶಾ, ಯೋಗಿ ಆದಿತ್ಯನಾಥ್ ಅವರ ರಾಜ್ಯ ಪ್ರವಾಸ ನಿಗದಿ

ಪ್ರಧಾನಿ ಮೋದಿಯವರ ಚಿಕ್ಕಬಳ್ಳಾಪುರ ಮತ್ತು ಕೋಲಾರ ಲೋಕಸಭಾ ಕ್ಷೇತ್ರಗಳ ಚುನಾವಣಾ ಪ್ರಚಾರ...

ಮತದಾನದ ದಿನ ಐಟಿ–ಬಿಟಿ ಸಿಬ್ಬಂದಿಗೆ ರಜೆ ನೀಡಲು ಸೂಚನೆ : ತುಷಾರ್ ಗಿರಿನಾಥ್

ಬೆಂಗಳೂರು ವ್ಯಾಪ್ತಿಯಲ್ಲಿರುವ ಎಲ್ಲ ಐಟಿ-ಬಿಟಿ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗೆ ಮತದಾನದ ದಿನ...