ಕಂಪನಿ ಹೆಸರಲ್ಲಿ ಭೂಮಿ ಪಡೆದು ರಿಯಲ್ ಎಸ್ಟೇಟ್ ವ್ಯವಹಾರ ನಡೆಸಲು ಅವಕಾಶ ಕೊಡಲ್ಲ: ಸಿದ್ದರಾಮಯ್ಯ

Date:

ರೈತರಿಗೆ ಅನ್ಯಾಯ ಆಗಲು ಬಿಡುವುದಿಲ್ಲ. ಕಂಪನಿ ಹೆಸರಲ್ಲಿ ಭೂಮಿ ಪಡೆದು ರಿಯಲ್ ಎಸ್ಟೇಟ್ ವ್ಯವಹಾರ ನಡೆಸಲು ಅವಕಾಶ ಕೊಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಡೂರಿನ ರೈತ ನಿಯೋಗಕ್ಕೆ ತಿಳಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಸಂಡೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಕುಡುತಿನಿಯಲ್ಲಿ ಆರ್ಸೆಲರ್‌ ಮಿತ್ತಲ್‌ ಇಂಡಿಯಾ ಲಿ,; ಉತ್ತಮ್‌ ಗಾಲ್ವಾ ಫೆರೋಸ್‌ ಕಂಪನಿ ಲಿ. ಹಾಗೂ ಮೆ. ಕರ್ನಾಟಕ ವಿಜಯನಗರ ಸ್ಟೀಲ್ಸ್‌ ಲಿಮಿಟೆಡ್‌ ಕಾರ್ಖಾನೆಗಳನ್ನು ಪ್ರಾರಂಭಿಸುವ ಕುರಿತು ಸಂಡೂರು ಶಾಸಕ ಇ.ತುಕಾರಾಮ್ ನೇತೃತ್ವದ ನಿಯೋಗದ ಜತೆ ಸಭೆ ನಡೆಸಿದ ಬಳಿಕ ತಿಳಿಸಿದರು.

ಈ ಉದ್ದೇಶಿತ ಕಾರ್ಖಾನೆಗಳಿಗಾಗಿ ಭೂಸ್ವಾಧೀನ ಸಂದರ್ಭದಲ್ಲಿ ದರ ನಿಗದಿಯಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯ ಸಮಿತಿಯು ಅನ್ಯಾಯವೆಸಗಿದೆ ಎಂಬ ರೈತರ ಆರೋಪದ ಕುರಿತಂತೆ ಪರಿಶೀಲಿಸಿ, ಸಮಸ್ಯೆ ಬಗೆಹರಿಸುವುದಾಗಿ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಅವರು ಸಭೆಯಲ್ಲೇ ಭರವಸೆ ನೀಡಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಆರ್ಸೆಲರ್‌ ಮಿತ್ತಲ್‌ ಕಾರ್ಖಾನೆಗಾಗಿ ನಡೆಸಿರುವ ಭೂಸ್ವಾಧೀನ ಕುರಿತಂತೆ, ರೈತರಿಗೆ ನೀಡಿರುವ ಪರಿಹಾರಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಸುಪ್ರೀಂ ಕೋರ್ಟಿನ ತೀರ್ಪಿನ ಬಗ್ಗೆ ಅಡ್ವೊಕೇಟ್‌ ಜನರಲ್‌ ಅವರ ಜೊತೆಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು” ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಸಭೆಯಲ್ಲಿ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ, ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ನಾಗೇಂದ್ರ, ಸಂಡೂರು ಶಾಸಕ ಇ.ತುಕಾರಾಮ್, ಜಿಲ್ಲೆಯ ಶಾಸಕರುಗಳಾದ ಕಂಪ್ಲಿ ಗಣೇಶ್, ನಾ.ರಾ.ಭರತ್ ರೆಡ್ಡಿ, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್‌, ಕಾರ್ಯದರ್ಶಿ ಡಾ.ಕೆ.ವಿ. ತ್ರಿಲೋಕಚಂದ್ರ, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ.ಎಸ್. ಸೆಲ್ವಕುಮಾರ್‌ ಮತ್ತು ಇತರ ಹಿರಿಯ ಅಧಿಕಾರಿಗಳು, ಭೂಮಿ ಕಳೆದುಕೊಂಡ ರೈತ ಪ್ರತಿನಿಧಿಗಳು ಸಭೆಯಲ್ಲಿ ಭಾಗವಹಿಸಿದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೇಂದ್ರದಲ್ಲಿ ಕಾಂಗ್ರೆಸ್ ಬಂದ್ರೆ ಮನೆಯ ಯಜಮಾನಿಗೆ ರೂ. 1 ಲಕ್ಷ ಜಮೆ, ರೈತರ ಸಾಲ ಮನ್ನಾ: ಸಿಎಂ ಸಿದ್ದರಾಮಯ್ಯ

"ಪ್ರತಿ ಬಾರಿ ರಾಜ್ಯಕ್ಕೆ ಬಂದಾಗಲೆಲ್ಲಾ ಮೋದಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ....

ಮೋದಿ ಸುಳ್ಳುಗಳು: ಭಾಗ 2 | ಬೇಟಿ ಬಚಾವೋ ಬೇಟಿ ಪಡಾವೋ ಎನ್ನುವ ಮೋದಿ ಮಹಿಳೆಯರ ರಕ್ಷಣೆಗೆ ನಿಂತಿದ್ದಾರೆಯೇ?

ಮಣಿಪುರದಲ್ಲಿ ಕುಕಿ ಬುಡಕಟ್ಟು ಸಮುದಾಯದ ಮೂವರು ಮಹಿಳೆಯರನ್ನು ಬೆತ್ತಲುಗೊಳಿಸಿ, ಲೈಂಗಿಕ ದೌರ್ಜನ್ಯ...

ಬೆಂಗಳೂರು | ತಾಯಿಯ ಫೋಟೋ ವೈರಲ್ ಮಾಡುವುದಾಗಿ ಬೆದರಿಸಿ ಮಗಳ ನಗ್ನ ಫೋಟೋ ಪಡೆದ ಕಾಮುಕ

ಅಶ್ಲೀಲವಾಗಿ ಎಡಿಟ್ ಮಾಡಿದ ತಾಯಿ ಫೋಟೋಗಳನ್ನು ಮಗಳಿಗೆ ಕಳುಹಿಸಿ ವೈರಲ್ ಮಾಡುವುದಾಗಿ...

ಹಾಸನ ಪೆನ್‌ಡ್ರೈವ್ ಪ್ರಕರಣ | ಎಸ್‌ಐಟಿ ತಂಡದ ಮುಖ್ಯಸ್ಥರಾಗಿ ಎಡಿಜಿಪಿ ಬಿಜಯ್ ಕುಮಾರ್ ಸಿಂಗ್ ನೇಮಕ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಿನ್ನೆ ವಿಶೇಷ ತನಿಖಾ...