ಲೋಕಸಭೆ ಚುನಾವಣೆಯಲ್ಲಿ ಗೆಲ್ಲುವವರೆಗೂ ವಿಶ್ರಾಂತಿ ಬೇಡ: ಬಿ ವೈ ವಿಜಯೇಂದ್ರ ಕರೆ

Date:

  • ವಿರೋಧಿಗಳನ್ನು ಹಗುರವಾಗಿ ಪರಿಗಣಿಸದೆ ಲೋಕಸಭಾ ಚುನಾವಣೆ ಎದುರಿಸಿ
  • ಕರ್ನಾಟಕ ದಕ್ಷಿಣ ಭಾರತದ ಬಿಜೆಪಿಯ ಭದ್ರಕೋಟೆಯಲ್ಲ, ಸುಭದ್ರ ಕೋಟೆ

ರಾಜ್ಯ ಮತ್ತು ದೇಶದಲ್ಲಿ ಬಿಜೆಪಿ ಪರ ಅಲೆ ಇದೆ. ಆದರೂ, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ಆಡಳಿತ ನಡೆಸುವ ಸಂದರ್ಭದಲ್ಲಿ ನಮ್ಮ ವಿರೋಧಿಗಳನ್ನು ಹಗುರವಾಗಿ ಪರಿಗಣಿಸದಿರಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ ವೈ ವಿಜಯೇಂದ್ರ ಹೇಳಿದರು.

- Advertisement -

ಬೆಂಗಳೂರಿನ ಮಲ್ಲೇಶ್ವರಂನ ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಬುಧವಾರ ರಾಜ್ಯದ ನೂತನ ಪದಾಧಿಕಾರಿಗಳ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, “ಪ್ರತಿಯೊಂದು ಚುನಾವಣೆಯಲ್ಲೂ ಕೂಡ ವಿವಿಧ ರೀತಿಯ ಸವಾಲುಗಳಿರುತ್ತವೆ. ಆ ಸವಾಲುಗಳನ್ನು ಯಶಸ್ವಿಯಾಗಿ ಮೆಟ್ಟಿ ನಿಂತು ಸಾಧನೆ ಮಾಡಲು ನಮ್ಮ ಎದುರಾಳಿಗಳನ್ನು ನಾವು ಹಗುರವಾಗಿ ಪರಿಗಣಿಸಬಾರದು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

“ನಮ್ಮ ಪಕ್ಷದ ಕಾರ್ಯಕರ್ತರಿಗೆ ಬಲ ತುಂಬುವ ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್ ಚುನಾವಣೆ, ಬಿಬಿಎಂಪಿ ಚುನಾವಣೆ, ವಿಧಾನಪರಿಷತ್ ಚುನಾವಣೆಗಳನ್ನು ಗಂಭೀರವಾಗಿ ಪರಿಗಣಿಸಿ ಮುಂದಕ್ಕೆ ಹೆಜ್ಜೆ ಇಡಬೇಕು” ಎಂದು ಸೂಚಿಸಿದರು.

“ಅತ್ಯಂತ ಪ್ರಮುಖ ಕಾಲಘಟ್ಟದಲ್ಲಿ ಈ ಹೊಣೆಗಾರಿಕೆ ಅತ್ಯಂತ ಪ್ರಮುಖ ಕಾಲಘಟ್ಟದಲ್ಲಿ ನಮಗೆಲ್ಲರಿಗೂ ರಾಜ್ಯ ಪದಾಧಿಕಾರಿಗಳಾಗಿ ಕೆಲಸ ಮಾಡುವ ಜವಾಬ್ದಾರಿ ಲಭಿಸಿದೆ. ನಾವೆಲ್ಲರೂ ಹೊಣೆಯರಿತು ಕರ್ತವ್ಯ ನಿರ್ವಹಿಸಬೇಕು. ನಮಗೆ ಹೊಣೆಗಾರಿಕೆ ಯಾವ ಕಾಲಘಟ್ಟದಲ್ಲಿ ಲಭಿಸಿದೆ ಎಂಬುದು ಅತ್ಯಂತ ಪ್ರಮುಖವಾದುದು. ಅಯೋಧ್ಯೆಯಲ್ಲಿ ಭಗವಾನ್ ಶ್ರೀರಾಮನ ಭವ್ಯ ಮಂದಿರ ನಿರ್ಮಾಣ ಆಗಬೇಕೆಂಬ ಕಳೆದ ಹಲವಾರು ದಶಕಗಳ ಎಲ್ಲ ಹಿಂದೂ ಕಾರ್ಯಕರ್ತರ ಕನಸು, ಹೋರಾಟ ಇದೀಗ ನನಸಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರಿಂದ ಲೋಕಾರ್ಪಣೆ ಆಗಲಿದೆ” ಎಂದರು.

“ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಒಂದಾಗಿ ಚುನಾವಣೆ ಎದುರಿಸಿ ರಾಜ್ಯದಲ್ಲಿ 28ಕ್ಕೆ 28 ಲೋಕಸಭಾ ಸ್ಥಾನಗಳನ್ನು ಗೆಲ್ಲುವ ಗುರಿ ನಮ್ಮ ಎದುರಿಗಿದೆ. ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಪಕ್ಷವು ಅಧಿಕಾರದ ಅಮಲಿನಲ್ಲಿ ತೇಲುತ್ತಿದೆ. ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಉತ್ತರ ಕೊಡುವುದು; ಅದಕ್ಕಿಂತ ಹೆಚ್ಚಾಗಿ ನರೇಂದ್ರ ಮೋದಿಯವರ ಕೈ ಬಲಪಡಿಸುವ ಕೆಲಸ ಕರ್ನಾಟಕದಿಂದ ಆಗಬೇಕಿದೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕೆಂಪೇಗೌಡ ವಿಮಾನನಿಲ್ದಾಣ ಸೀಮೆ- ರೈತರ ಕೊರಳ ಬಿಗಿದಿರುವ ಭೂಮಾಫಿಯಾ, ಕುಣಿಕೆ ಕಳಚಲಿ ಕಾಂಗ್ರೆಸ್ ಸರ್ಕಾರ

“ಕರ್ನಾಟಕವು ಕೇವಲ ದಕ್ಷಿಣ ಭಾರತದ ಬಿಜೆಪಿಯ ಭದ್ರಕೋಟೆಯಲ್ಲ; ಅದೊಂದು ಸುಭದ್ರ ಕೋಟೆಯಾಗಿದೆ ಎಂಬ ಸಂದೇಶವನ್ನು ನಾವು ನೀಡಬೇಕಿದೆ. ನಮ್ಮ ಮುಂದಿರುವ ಸವಾಲು ದೊಡ್ಡದೇನಲ್ಲ. ಮೋದಿ ಅವರ ಪರವಾದ ವಾತಾವರಣ ದೇಶ ಮತ್ತು ರಾಜ್ಯದಲ್ಲಿದೆ. ಅಪಾರ ಜನಪ್ರಿಯತೆಯೂ ಅವರಿಗೆ ಇದೆ. ಅವರ ಜನಪ್ರಿಯತೆಯನ್ನು ಮತಗಳನ್ನಾಗಿ ಪರಿವರ್ತಿಸುವುದು ಹೇಗೆ ಎಂಬ ಸವಾಲಿಗೆ ಉತ್ತರ ಕಂಡುಕೊಂಡು ಕಾರ್ಯಪ್ರವೃತ್ತರಾಗಬೇಕು” ಎಂದು ಸಲಹೆ ನೀಡಿದರು.

“ವಿಶ್ರಾಂತಿ ಪಡೆಯುವ ಪ್ರಶ್ನೆ ಉದ್ಭವ ಆಗಬಾರದು. ಮುಂದಿನ ಲೋಕಸಭಾ ಚುನಾವಣೆ ಮುಗಿಯುವ ವರೆಗೆ ನಮಗೆ ಭಾನುವಾರ, ಹಬ್ಬ, ಹರಿದಿನ ಎಂಬುದಿರಬಾರದು. ಕುಟುಂಬ ಎಲ್ಲವನ್ನೂ ಬದಿಗಿಡಿ. ಲೋಕಸಭಾ ಚುನಾವಣೆಯ ಗುರಿ ಮುಟ್ಟುವತನಕ ನಾವು ವಿಶ್ರಾಂತಿ ಪಡೆಯುವ ಪ್ರಶ್ನೆ ಉದ್ಭವ ಆಗಬಾರದು” ಎಂದರು.

ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಜಿ.ವಿ, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಸುನೀಲ್ ಕುಮಾರ್, ಪಿ. ರಾಜೀವ್, ಪ್ರೀತಮ್ ಗೌಡ, ನಂದೀಶ್ ರೆಡ್ಡಿ ಮತ್ತು ನೂತನ ಪದಾಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹವಾಮಾನ | ರಾಜ್ಯದಲ್ಲಿ ಮುಂದಿನ 2 ದಿನ ಭಾರಿ ಮಳೆ: 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮುಂದಿನ ಎರಡು ದಿನಗಳ ಕಾಲ ಬಿರುಗಾಳಿ ಸಹಿತ...

ರಾಜ್ಯದಲ್ಲಿ SIR ಭೌತಿಕ ವಿಚಾರಣೆ ಸ್ಥಗಿತ: ಬಿಎಲ್ಒಗಳಿಂದ ಮನೆ ಬಾಗಿಲಿಗೆ ತೆರಳಿ ದಾಖಲೆ ಸಂಗ್ರಹ

ಹಿಂದಿನ ದತ್ತಾಂಶ ಲಭ್ಯವಿಲ್ಲದ ಹಾಗೂ ಮಾಹಿತಿಯಲ್ಲಿ ಹೊಂದಾಣಿಕೆಯಾಗದ ಕಾರಣಕ್ಕೆ ನೋಟಿಸ್ ಸ್ವೀಕರಿಸಿರುವ...

‘ಪಿತೃಪ್ರಭುತ್ವವನ್ನು ಧ್ವಂಸ ಮಾಡಿ’: ಮನುವಾದ ಮತ್ತು ಫ್ಯಾಸಿಸಂ ವಿರುದ್ಧ ರಾಹುಲ್ ಗಾಂಧಿ ಸಮರ!

ಸ್ವತಂತ್ರ ಭಾರತ 80 ವರ್ಷಗಳನ್ನು ಪೂರೈಸುತ್ತಿರುವಾಗ, ನಾವು ಕೇಳಬೇಕಾಗಿದೆ, ಆ ಮನಸ್ಥಿತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ...