ಬೆಂಗಳೂರು | 4 ಜಲಾಶಯಗಳಲ್ಲಿ 34 ಟಿಎಂಸಿ ನೀರು ಸಂಗ್ರಹವಿದೆ, ಆತಂಕ ಬೇಡ : ಜಲಮಂಡಳಿ ಅಧ್ಯಕ್ಷ

Date:

”ಬೆಂಗಳೂರಿನ ಜನತೆ ನೀರಿನ ಸಮಸ್ಯೆ ಬಗ್ಗೆ ಯಾವುದೇ ಆತಂಕ ಪಡುವುದು ಬೇಡ. ಏಕೆಂದರೆ, ನಮ್ಮ ಬಳಿ ಇರುವ ನಾಲ್ಕು ಜಲಾಶಯಗಳಲ್ಲಿ 34 ಟಿಎಂಸಿ ನೀರು ಸಂಗ್ರಹವಿದೆ” ಎಂದು ಬೆಂಗಳೂರು ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿ ಅಧ್ಯಕ್ಷ ರಾಮ್ ಪ್ರಸಾದ್ ಮನೋಹರ್ ಹೇಳಿದ್ದಾರೆ.

ಮಾರ್ಚ್‌ 9ರಂದು ತುರ್ತು ಸುದ್ದಿಗೋಷ್ಠಿ ನಡೆಸಿದ ಅವರು, ”ಇತ್ತೀಚೆಗೆ ಕೆಲ ಸುದ್ದಿಗಳು ಹರಿದಾಡುತ್ತಿದೆ. ಅದರಲ್ಲಿ ಕೆಲವು ಸತ್ಯವಾಗಿದ್ದು, ಕೆಲವು ಸುಳ್ಳು ಇರಬಹುದು. ಅದರ ಬಗ್ಗೆ ಸ್ಪಷ್ಟನೆ ಕೊಡಲು ಸುದ್ದಿಗೋಷ್ಠಿ ಕರೆದಿದ್ದೇವೆ” ಎಂದರು.

“ಜನರು ನೀರನ್ನು ಮಿತವ್ಯಯವಾಗಿ ಬಳಸಬೇಕು. ನಗರದಲ್ಲಿರುವ ಹಲವು ಅಪಾರ್ಟ್ಮೆಂಟ್ಗಳು ಬೋರ್‌ವೆಲ್‌ ನೀರನ್ನೇ ಅವಲಂಬಿಸಿವೆ. ಈ ಅಪಾರ್ಟ್‌ಮೆಂಟ್‌ಗಳು ಕಾವೇರಿ ನೀರು ಅವಲಂಬಿಸಿಲ್ಲ. ಈಗ ಅಂತರ್ಜಲ ಮಟ್ಟ ಕುಸಿದ ಕಾರಣ ಬೋರ್ವೆಲ್ಬತ್ತಿ ಹೋಗಿವೆ. ಇದೀಗ ಕಾವೇರಿ ನೀರಿನ ಮೇಲೆ ಅವಲಂಬಿತವಾಗಿವೆ. ಇದರಿಂದ, ಬೆಂಗಳೂರು ನಗರದ ಹೊರವಲಯದಲ್ಲಿ ಹೆಚ್ಚಾಗಿ ನೀರಿನ ಸಮಸ್ಯೆ ಉಂಟಾಗುತ್ತಿದೆ. ಸದ್ಯ ಅಂತರ್ಜಲ ಮಟ್ಟ ಹೆಚ್ಚಿಸುವುದಕ್ಕೆ ತಜ್ಞರ ಜತೆಗೆ ಚರ್ಚಿಸಿದ್ದೇವೆ” ಎಂದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

”ನಮ್ಮ ಬಳಿ ಇರುವ ನಾಲ್ಕು ಜಲಾಶಯಗಳಲ್ಲಿ 34 ಟಿಎಂಸಿ ನೀರು ಸಂಗ್ರಹವಿದೆ. ಇನ್ನು 1470 ಎಂಎಲ್ಡಿ ನೀರು ಪಂಪ್ಮಾಡಲು ಅವಕಾಶವಿದೆ. ನಮ್ಮ ಸಾಮರ್ಥ್ಯಕ್ಕಿಂತ 20 ಟಿಎಂಸಿ ನೀರು ಹೆಚ್ಚಿಗೆ ಪಂಪ್ ಮಾಡುತ್ತಿದ್ದೇವೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಡ್ಯಾನ್ಸ್‌ ಮಾಡುವಾಗ ಮೈ ತಾಗಿದಕ್ಕೆ ಯುವಕನ ಕೊಲೆ: ಬಂಧನ

1992 ರಿಂದ ಕಾವೇರಿ ನೀರು ತರಲು 4 ಹಂತದ ಪ್ರಾಜೆಕ್ಟ್ ಮಾಡಿದ್ದೇವೆ. 1450 ಮಿಲಿಯನ್ ಲೀಟರ್ ನೀರು ಪಂಪ್ ಮಾಡುತ್ತಿದ್ದೇವೆ. ಜುಲೈವರೆಗೆ 8 ಟಿಎಂಸಿ ನೀರಿನ ಅವಶ್ಯಕತೆಯಿದೆ. 1.54 ಟಿಎಂಸಿ ಪ್ರತಿ ತಿಂಗಳು ಅವಶ್ಯಕತೆಯಿದೆ. ಜುಲೈ ತಿಂಗಳವರೆಗೆ 17 ಟಿಎಂಸಿ ಅವಶ್ಯಕತೆ ಇದೆ” ಎಂದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಗಬ್ಬೂರು ಗ್ರಾಮಕ್ಕೆ ಪದವಿ ಕಾಲೇಜು ನೀಡುವಂತೆ ಪ್ರಗತಿಪರ ಸಂಘಟನೆಗಳ ಒತ್ತಾಯ

ಸರ್ಕಾರ, ನಿರ್ಲಕ್ಷ್ಯ ಧೋರಣೆ ಬಿಟ್ಟು ಗಬ್ಬೂರು ಗ್ರಾಮಕ್ಕೆ ಪದವಿ ಕಾಲೇಜು ನೀಡುವಂತೆ...

ಕಲಬುರಗಿ | ಸಿಮೆಂಟ್‌ ಕಾರ್ಖಾನೆಯಲ್ಲಿ ಕಾರ್ಮಿಕ ಸಾವು; 2 ತಿಂಗಳಲ್ಲಿ 4ನೇ ದುರಂತ

ಸಿಮೆಂಟ್‌ ಕಾರ್ಖಾನೆಯಲ್ಲಿ ಬೃಹತ್ ಟ್ಯಾಂಕರ್ ಕಟ್ಟಡ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದ ವೇಳೆ,...

ಬೀದರ್‌ | ವಿದ್ಯುತ್‌ ಸ್ಪರ್ಶ: ಸ್ಥಳದಲ್ಲೇ ವ್ಯಕ್ತಿ ಸಾವು

ವಿದ್ಯುತ್‌ ತಂತಿ ತಗುಲಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಬಸವಕಲ್ಯಾಣ ತಾಲೂಕಿನ ಲಾಡವಂತಿ...

ವಿಜಯಪುರ | ಮರಗೂರ ಮೊರಾರ್ಜಿ ದೇಸಾಯಿ ವಸತಿಶಾಲೆ ಅವ್ಯವಸ್ಥೆ ಸರಿಪಡಿಸುವಂತೆ ಡಿಎಸ್‌ಎಸ್‌ ಮನವಿ 

ವಿಜಯಪುರ ಜಿಲ್ಲೆಯ ಮರಗೂರ ಮೊರಾರ್ಜಿ ದೇಸಾಯಿ ವಸತಿಶಾಲೆಯ ಅವ್ಯವಸ್ಥೆಗೆ ಕಾರಣರಾಗಿರುವ ಅಧಿಕಾರಿಗಳ...