ಬಳ್ಳಾರಿ ಜಿಲ್ಲಾ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ

Date:

Advertisements

ಬಳ್ಳಾರಿ ಜಿಲ್ಲಾ ಆಸ್ಪತ್ರೆಯಲ್ಲಿ ಸಂಭವಿಸಿದ ಬಾಣಂತಿಯರ ಸಾವು ಪ್ರಕರಣ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಡಾ.ನಾಗಲಕ್ಷ್ಮಿ ಚೌದರಿ ಅವರು, ಗುರುವಾರ ಬಳ್ಳಾರಿ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಜಿಲ್ಲಾ ಆಸ್ಪತ್ರೆಯ ಹೆರಿಗೆ ವಿಭಾಗ, ಹೆರಿಗೆ ಕೋಣೆಗಳ ಸಮುಚ್ಚಯ, ಶಸ್ತ್ರ ಚಿಕಿತ್ಸೆ ಕೊಠಡಿ, ಬಾಣಂತಿಯರಿಗೆ ಮೂಲ ಸೌಕರ್ಯಗಳಾದ ಕುಡಿಯುವ ನೀರು, ಶೌಚಾಲಯ, ಬಿಸಿ ನೀರಿನ ವ್ಯವಸ್ಥೆ ಮತ್ತು ಆರೈಕೆ ಕ್ರಮಗಳ ಕುರಿತು ಚರ್ಚೆ ನಡೆಸಿ, ಮಾಹಿತಿ ಪಡೆದುಕೊಂಡರು.

ಬಳಿಕ ಮಾತನಾಡಿದ ಅವರು, ಈ ಹಿಂದೆ ಜಿಲ್ಲಾ ಆಸ್ಪತ್ರೆಯಲ್ಲಿ ಈ ತರಹದ ಘಟನೆ ಸಂಭವಿಸಲಿರಲಿಲ್ಲ, ಬಾಣಂತಿಯರ ಸಾವಿಗೆ ಐವಿ ರಿಂಗರ್ ದ್ರಾವಣ ಕೂಡ ಕಾರಣವಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿರುವ ಹಿನ್ನಲೆಯಲ್ಲಿ ಆಗ ಸರಬರಾಜು ಆದ ಎಲ್ಲಾ ಐವಿ ರಿಂಗರ್ ಲ್ಯಾಕ್ಟೇಟ್ ದ್ರಾವಣ ಬ್ಯಾಚ್‌ಗಳನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು. ಬಳಿಕ ಪಾಸಿಟಿವ್ ವರದಿ ಬಂದಿದೆ. ಈಗಾಗಲೇ ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಅವರು, ಐವಿ ದ್ರಾವಣ ಔಷಧ ಸರಬರಾಜು ಸ್ಥಗಿತಗೊಳಿಸಿದ್ದಾರೆಠ ಎಂದು ತಿಳಿಸಿದರು.

ಮೃತ ಹೊಂದಿದ ಬಾಣಂತಿಯರಿಗೆ ಘೋಷಿಸಿದ ಪರಿಹಾರದಲ್ಲಿ ರೂ.2 ಲಕ್ಷದಿಂದ 5 ಲಕ್ಷದವರೆಗೆ ಹೆಚ್ಚಿಸಲಾಗಿದೆ. ಮಕ್ಕಳ ಬೆಳವಣಿಗೆಗೆ ಹಾಗೂ ಅವರ ವಿದ್ಯಾಭ್ಯಾಸ ಸೇರಿದಂತೆ ಸಂಪೂರ್ಣ ಜವಾಬ್ದಾರಿ ಸರ್ಕಾರ ವಹಿಸಬೇಕು. ಈ ಕುರಿತು ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗುವುದು ಎಂದರು.

ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ.ವಿ.ಜೆ., ಜಿಪಂ ಸಿಇಒ ರಾಹುಲ್ ಶರಣಪ್ಪ ಸಂಕನೂರ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎನ್.ಬಸರೆಡ್ಡಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು, ಬಿಮ್ಸ್ ನಿರ್ದೇಶಕ ಡಾ.ಗಂಗಾಧರ ಗೌಡ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ವಿಜಯ್ ಕುಮಾರ್, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಜಲಾಲಪ್ಪ, ಬಳ್ಳಾರಿ ತಾಲ್ಲೂಕು ತಹಶೀಲ್ದಾರ ಗುರುರಾಜ ಸೇರಿದಂತೆ ಜಿಲ್ಲಾಸ್ಪತ್ರೆಯ ಆಡಳಿತ ವೈದ್ಯಾಧಿಕಾರಿಗಳು, ಶುಶೂಶ್ರಕರು ಇದ್ದರು.

Advertisements
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದರೋಡೆ ಮಾಡಿ ಕೊಡುಗೆ ನೀಡುವ ಮಾಡರ್ನ್ ರಾಬಿನ್ ಹುಡ್- ಮೋದಿ!

ಇಂಗ್ಲೆಂಡಿನ ಜನಪದ ಕಳ್ಳ ರಾಬಿನ್ ಹುಡ್ ಶ್ರೀಮಂತರ ಬಂಗಲೆಗಳನ್ನು ದರೋಡೆ ಮಾಡಿ...

ಚಿತ್ರದುರ್ಗ | ಜಮೀನಿನಲ್ಲಿ ಗೊಬ್ಬರ ಹಾಕುವಾಗ ಚಿರತೆ ದಾಳಿ, ಮಹಿಳೆ ಪ್ರಾಣಾಪಾಯಾದಿಂದ ಪಾರು

ಜಮೀನಿನಲ್ಲಿ ಮುಸುಕಿನ ಜೋಳಕ್ಕೆ ಗೊಬ್ಬರ ಹಾಕುತ್ತಿರುವ ಸಮಯ ಮಹಿಳೆ ಮೇಲೆ ಚಿರತೆ...

ದಾವಣಗೆರೆ | ದಲಿತ ಸಂಘಟನೆಗಳ ಒಳಮೀಸಲಾತಿ ಪ್ರತಿಭಟನೆ; ಎಸಿ ಕಛೇರಿಗೆ ಬೀಗ

"ಸರ್ವೋಚ್ಚ ನ್ಯಾಯಾಲಯ ಆದೇಶ ನೀಡಿ ಒಂದು ವರ್ಷವಾದರೂ ಒಳಮೀಸಲಾತಿಯನ್ನು ಜಾರಿ ಮಾಡುವಲ್ಲಿ...

ಕರ್ನಾಟಕದಲ್ಲಿ ಒಂದು ವಾರ ಭಾರೀ ಮಳೆ: ಕರಾವಳಿ, ಒಳನಾಡಿನ ಜಿಲ್ಲೆಗಳಿಗೆ ರೆಡ್, ಆರೆಂಜ್ ಅಲರ್ಟ್

ಕರ್ನಾಟಕದಾದ್ಯಂತ ಆಗಸ್ಟ್ 17ರಿಂದ 21ರವರೆಗೆ ಭಾರೀ ಮಳೆಯ ಮುನ್ಸೂಚನೆಯನ್ನು ಭಾರತೀಯ ಹವಾಮಾನ...

Download Eedina App Android / iOS

X