ಪರಿಷತ್ 7 ಕ್ಷೇತ್ರಗಳಿಗೆ ಮತದಾರರ ಕರಡು ಪಟ್ಟಿ ಪ್ರಕಟ: ಈಶಾನ್ಯ ಪದವೀಧರರ ಕ್ಷೇತ್ರದಲ್ಲಿ ಹೆಚ್ಚು ಮತದಾರರು

Date:

ರಾಜ್ಯ ವಿಧಾನ ಪರಿಷತ್‌ 7 ಸ್ಥಾನಗಳಿಗೆ 2024ರ ಜೂನ್‌ನಲ್ಲಿ ನಡೆಯಲಿರುವ ಚುನಾವಣೆಗೆ ಸಂಬಂಧಿಸಿದಂತೆ ಕರಡು ಮತದಾರರ ಪಟ್ಟಿಯನ್ನು ರಾಜ್ಯ ಚುನಾವಣಾ ಆಯೋಗ ಪ್ರಕಟಿಸಿದೆ. 7 ಕ್ಷೇತ್ರಗಳಲ್ಲಿ ಈಶಾನ್ಯ ಪದವೀಧರರ ಕ್ಷೇತ್ರದಲ್ಲಿ 1,40,423 ಪದವೀಧರರು ನೋಂದಾಯಿಸಿಕೊಂಡಿದ್ದಾರೆ.

- Advertisement -

ಇನ್ನುಳಿದಂತೆ ಬೆಂಗಳೂರು ಪದವೀಧರರ ಕ್ಷೇತ್ರ 67,787, ಕರ್ನಾಟಕ ನೈಋತ್ಯ ಪದವೀಧರರ ಕ್ಷೇತ್ರ 65,566, ಶಿಕ್ಷಕರ ಕ್ಷೇತ್ರಗಳ ಪೈಕಿ ಕರ್ನಾಟಕ ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ 20,465, ಕರ್ನಾಟಕ ನೈರುತ್ಯ ಶಿಕ್ಷಕರ ಕ್ಷೇತ್ರ 16,950, ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರ 14,206 ಹಾಗೂ ಬೆಂಗಳೂರು ಶಿಕ್ಷಕರ ಕ್ಷೇತ್ರದಲ್ಲಿ 10,022 ಶಿಕ್ಷಕರು ಮತದಾನ ಮಾಡಲು ಅರ್ಹರಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ವಿಧಾನ ಪರಿಷತ್‌ ಚುನಾವಣೆಗೆ ಸಂಬಂಧಿಸಿದಂತೆ ರಾಜ್ಯ ಚುನಾವಣಾ ಆಯೋಗವು ಮತದಾರರ ಪಟ್ಟಿ ಕರಡು ಸಿದ್ದಪಡಿಸಲು ಸೆಪ್ಟೆಂಬರ್ 30 ರಿಂದ ನವೆಂಬರ್ 6ರವರೆಗೆ ಮತದಾರರ ಅರ್ಜಿಗಳನ್ನು ಸ್ವೀಕರಿಸಿತ್ತು. ನ.6ರವರೆಗೆ ಅರ್ಜಿಗಳನ್ನು ಸಲ್ಲಿಸಿದ ಎಲ್ಲ ಅರ್ಜಿದಾರರು ನಿಗದಿಪಡಿಸಿದ ಸಂಬಂಧಿತ ಪದವೀಧರ / ಶಿಕ್ಷಕರ ಕ್ಷೇತ್ರಗಳ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ಪರಿಶೀಲಿಸಲು ಮತ್ತು ಹಕ್ಕುಗಳು ಮತ್ತು ಆಕ್ಷೇಪಣೆಗಳು ಇದ್ದಲ್ಲಿ ಡಿ.12ರೊಳಗೆ ನಮೂನೆ 18 ಮತ್ತು 19 ರಲ್ಲಿ ಸಂಬಂಧಪಟ್ಟ ಚುನಾವಣಾ ನೋಂದಣಿ ಅಧಿಕಾರಿಗಳಿಗೆ ಸಲ್ಲಿಸುವಂತೆ ಕೋರಲಾಗಿದೆ.

ಈ ಸುದ್ದಿ ಓದಿದ್ದೀರಾ? ಸುಪ್ರೀಂ ಕೋರ್ಟ್‌ನ ಮೊದಲ ಮಹಿಳಾ ನ್ಯಾಯಮೂರ್ತಿ ಫಾತಿಮಾ ಬೀವಿ ನಿಧನ

ಡಿ.25 ರಂದು ಆಕ್ಷೇಪಣೆಗಳ ವಿಲೇವಾರಿ ನಡೆಯಲಿದೆ. ಡಿ.30 ರಂದು ಅಂತಿಮವಾಗಿ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುತ್ತದೆ ಎಂದು ಆಯೋಗ ತಿಳಿಸಿದೆ.

2024ರ ಜೂನ್ ತಿಂಗಳಲ್ಲಿ ಆರು ಮಂದಿಯ ಸದಸ್ಯತ್ವ ಮುಕ್ತಾಯ

ಜೆಡಿಎಸ್ ತೊರೆದು ಕಾಂಗ್ರೆಸ್‌ ಸೇರಿರುವ ಶಿಕ್ಷಕರ ಕ್ಷೇತ್ರದ ಪುಟ್ಟಣ್ಣ ಸ್ಥಾನಕ್ಕೆ ಉಪಚುನಾವಣೆ ನಡೆಯಲಿದೆ. ಹೀಗಾಗಿ ಒಟ್ಟು ಏಳು ಸ್ಥಾನಕ್ಕೆ ಚುನಾವಣೆ ನಡೆಯಲಿದೆ.

ಈಶಾನ್ಯ ಪದವೀಧರ ಕ್ಷೇತ್ರದಿಂದ ಆಯ್ಕೆಯಾಗಿರುವ ಡಾ.ಚಂದ್ರಶೇಖರ್ ಬಿ. ಪಾಟೀಲ್, ನೈರುತ್ಯ ಪದವೀಧರ ಕ್ಷೇತ್ರದಿಂದ ಆಯ್ಕೆಯಾಗಿರುವ ಆಯನೂರು ಮಂಜುನಾಥ್, ಬೆಂಗಳೂರು ಪದವೀಧರ ಕ್ಷೇತ್ರದಿಂದ ಆಯ್ಕೆಯಾಗಿರುವ ಎ.ದೇವೇಗೌಡ, ಕರ್ನಾಟಕ ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ಆಯ್ಕೆಯಾಗಿರುವ ಡಾ.ವೈ.ಎ ನಾರಾಯಣಸ್ವಾಮಿ, ನೈರುತ್ಯ ಶಿಕ್ಷಕರ ಕ್ಷೇತ್ರದಿಂದ ಆಯ್ಕೆಯಾಗಿರುವ ಎಸ್.ಎಲ್ ಭೋಜೇಗೌಡ, ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಆಯ್ಕೆಯಾಗಿರುವ ಮರಿತಿಬ್ಬೇಗೌಡ ಅವರ ಅವಧಿ 2024ರ ಜೂನ್ ತಿಂಗಳಿಗೆ ಮುಕ್ತಾಯವಾಗಲಿದೆ.

ಈ ಕ್ಷೇತ್ರಗಳಿಗೆ ಕಾಂಗ್ರೆಸ್‌ನಿಂದ ಬೆಂಗಳೂರು ಪದವೀಧರರ ಕ್ಷೇತ್ರಕ್ಕೆ ರಾಮೋಜಿ ಗೌಡ, ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಪುಟ್ಟಣ್ಣ, ನೈರುತ್ಯ ಶಿಕ್ಷಕರ ಕ್ಷೇತ್ರಕ್ಕೆ ಕೆ.ಕೆ. ಮಂಜುನಾಥ್, ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ಡಿ.ಟಿ ಶ್ರೀನಿವಾಸ್, ಈಶಾನ್ಯ ಪದವೀಧರರ ಕ್ಷೇತ್ರಕ್ಕೆ ಡಾ. ಚಂದ್ರಶೇಖರ್ ಬಿ ಪಾಟೀಲ್ ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಾಂಧೀಜಿ ಹೆಸರು, ವಿಚಾರಧಾರೆ ಅಳಿಸಲು ಯಾರಿಂದಲೂ ಸಾಧ್ಯವಿಲ್ಲ: ಡಿ.ಕೆ. ಶಿವಕುಮಾರ್

"ಮಹಾತ್ಮ ಗಾಂಧೀಜಿ ಭಾರತದ ಆತ್ಮವಿದ್ದಂತೆ. ಅವರ ಹೆಸರು ಹಾಗೂ ವಿಚಾರಧಾರೆಯನ್ನು ಅಳಿಸಿಹಾಕಲು...

ಧರ್ಮಸ್ಥಳದ ಸಾವಿನ ಪ್ರಮಾಣದಲ್ಲಿ ವ್ಯತ್ಯಾಸ; ನಿಜ ಪತ್ತೆಗೆ ಎಸ್‌ಐಟಿಗೆ ಸರ್ಕಾರದಿಂದ ಪೂರಕ ಬೆಂಬಲ ಅಗತ್ಯ: ಮಹಿಳಾ ಆಯೋಗದ ಅಧ್ಯಕ್ಷೆ

ಧರ್ಮಸ್ಥಳ ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಸಾವುಗಳು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ ಮತ್ತು ಮೇಕೆ

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು...

ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು, ಪಿತೃಪ್ರಧಾನತೆಯ ಭೀತಿ ಮೀರಿ, ಲಕ್ಷ್ಮಣ ರೇಖೆ ದಾಟಿ: ಆರ್ ಸುನಂದಮ್ಮ

ಮಹಿಳೆಯರು ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು. ಪಿತೃಪ್ರಧಾನತೆಯ ಭೀತಿ ಮೀರಿ,...