ಬೆಂಗಳೂರು | ₹44 ಲಕ್ಷ ಮೌಲ್ಯದ ಮಾದಕ ವಸ್ತು ವಶ, 6 ಜನರ ಬಂಧನ

Date:

ಬೆಂಗಳೂರು ನಗರ ಸಿಸಿಬಿಯ ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿ ಮತ್ತು ಸಿಬ್ಬಂದಿಗಳ ತಂಡ ಕಾರ್ಯಾಚರಣೆ ನಡೆಸಿ 6 ಜನ ಮಾದಕವಸ್ತು ಮಾರಾಟಗಾರರನ್ನು ಬಂಧಿಸಿ, ಬರೋಬ್ಬರಿ ₹44 ಲಕ್ಷ ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದೆ” ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ ಹೇಳಿದ್ದಾರೆ.

- Advertisement -

ಮಂಗಳವಾರ ವಾರದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಮೂರು ವಿದೇಶಿ ಮೂಲದ ಡ್ರಗ್ ಪೆಡ್ಲರ್‌ ಹಾಗೂ ಹೊರ ರಾಜ್ಯದ 3 ಡ್ರಗ್ ಪೆಡ್ಲರ್‌ಗಳು ಸೇರಿದಂತೆ ಒಟ್ಟು 6 ಜನರನ್ನು ವಶಕ್ಕೆ ಪಡೆಯಲಾಗಿದೆ. ಅವರಿಂದ ಒಟ್ಟು ₹44 ಲಕ್ಷ ಮೌಲ್ಯದ 54 ಗ್ರಾಂ ಎಂ.ಡಿ.ಎಂಎ ಕ್ರಿಸ್ಟೆಲ್, 410 ಗ್ರಾಂ ಹೈಡ್ರೋ ಗಾಂಜಾ. 18 ಕೆಜಿ. ಗಾಂಜಾ ಹಾಗೂ ಕೃತ್ಯಕ್ಕೆ ಬಳಸಲಾಗುತ್ತಿದ್ದ 4 ಮೊಬೈಲ್ ಫೋನ್‌ಗಳು ಹಾಗೂ 4 ಎಲೆಕ್ಟ್ರಾನಿಕ್ ತೂಕದ ಯಂತ್ರಗಳನ್ನು ವಶಪಡಿಸಿಕೊಂಡಿದ್ದಾರೆ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

“ಫೆಬ್ರುವರಿ 29ರಂದು ಕುಮಾರ್‌ ಸ್ವಾಮಿ ಲೇಔಟ್ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದ ಸರಣಿ ಚಿನ್ನಾಭರಣಗಳ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಕೈಗೊಂಡು ಆರು ವ್ಯಕ್ತಿಗಳನ್ನು ಬಂಧಿಸಿದ್ದಾರೆ. ಆರೋಪಿಗಳು ಕುಮಾರಸ್ವಾಮಿ ಲೇಔಟ್ ಠಾಣೆಯಲ್ಲಿ ದಾಖಲಾದ 8 ಕಳ್ಳತನದ ಪ್ರಕರಣಗಳಲ್ಲಿ ಭಾಗಿಯಾಗಿದ್ದರು ಎಂಬುದು ಹೆಚ್ಚಿನ ತನಿಖೆಯಿಂದ ತಿಳಿದುಬಂದಿದೆ. ಅವರುಗಳಿಂದ ₹16,00,000 ಬೆಲೆ ಬಾಳುವ 383 ಗ್ರಾಂ ಚಿನ್ನದ ಸರಗಳನ್ನು ಮತ್ತು ಚಿನ್ನದ ಮಾಂಗಲ್ಯ ಸರಗಳನ್ನು ವಶಪಡಿಸಿಕೊಳ್ಳಲಾಗಿದೆ” ಎಂದು ಮಾಹಿತಿ ನೀಡಿದ್ದಾರೆ.

“ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆಯ ಪೊಲೀಸರು ಲ್ಯಾಪ್ ಟಾಪ್ ಮತ್ತು ಕ್ರೋಮ್ ಬಾಕ್ಸ್‌ಗಳು ಕಳ್ಳತನದ ಪ್ರಕರಣಕ್ಕೆ ಸಂಬಂಧಿಸಿದಂತೆ ಫೆ.16 ರಂದು ಐವರನ್ನು ಬಂದಿಸಿದ್ದಾರೆ. ಈ ಪೈಕಿ ಇಬ್ಬರು ವ್ಯಕ್ತಿಗಳು ಅದೇ ಕಂಪನಿಯಲ್ಲಿ ಲ್ಯಾಪ್‌ಟಾಪ್ ಟೆಕ್ನಿಷಿಯನ್ ಆಗಿ ಕೆಲಸ ಮಾಡಿಕೊಂಡಿದ್ದರು. ಉಳಿದ ಮೂರು ವ್ಯಕ್ತಿಗಳು ಇವರ ಸಹಚರರಾಗಿದ್ದಾರೆ. ಒಟ್ಟು ₹16,00,000 ಮೌಲ್ಯದ ನಾನಾ ಕಂಪನಿಯ 29 ಲ್ಯಾಪ್ ಟಾಪ್‌ ಮತ್ತು 59 ಕ್ರೋಮ್ ಬಾಕ್ಸ್‌ಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ” ಎಂದು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? 5, 8, 9ನೇ ತರಗತಿಗಳ ಬೋರ್ಡ್ ಪರೀಕ್ಷೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ

“ಬೆಂಗಳೂರಿನ ಜೆ.ಪಿ.ನಗರ ಪೊಲೀಸ್ ಠಾಣೆಯಲ್ಲಿ ಮಾರ್ಚ್ 9ರಂದು ಎರಡು ಪ್ರತ್ಯೇಕ ಮನೆ ದರೋಡೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಮೂವರು ವ್ಯಕ್ತಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಅವರಿಂದ 414 ಗ್ರಾಂ ಚಿನ್ನದ ಒಡವೆ, 104ಗ್ರಾಂ ತೂಕದ ಬೆಳ್ಳಿ ವಸ್ತು ಹಾಗೂ 4 ವಿದೇಶಿ ಬ್ರ್ಯಾಂಡ್‌ನ ವಾಚ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ವಸ್ತುಗಳ ಒಟ್ಟು ಮೌಲ್ಯ ₹28,00.000 ಆಗಿದೆ” ಎಂದು ವಿವರಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಹಿರಿಯ ಸಾಹಿತಿ ಎ.ಎಸ್.ಎನ್. ಹೆಬ್ಬಾರ್ ಅವರಿಗೆ ಸೂಕ್ತ ರಕ್ಷಣೆ ನೀಡಲು ಜಿಲ್ಲಾಧಿಕಾರಿಗೆ ಮನವಿ

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸ್ಥಾಪಕ ಅಧ್ಯಕ್ಷರು, ಹಿರಿಯ ವಕೀಲರು...

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....