ಇಡಿ, ಸಿಬಿಐ, ಐಟಿ – ಎಲ್ಲವೂ ಪ್ರಧಾನಿಗಳ ಗುಲಾಮರಾಗಿ ಕೆಲಸ ಮಾಡುತ್ತಿವೆ: ಡಾ. ಮುಖ್ಯಮಂತ್ರಿ ಚಂದ್ರು

Date:

Advertisements

“ಜಾರಿ ನಿರ್ದೇಶನಾಲಯ, ಸಿಬಿಐ, ತೆರಿಗೆ ಇಲಾಖೆ ಮತ್ತಿತರ ಸ್ವತಂತ್ರ ಸಂಸ್ಥೆಗಳ ಅಧಿಕಾರಿಗಳು ಸ್ವತಂತ್ರ ಅಧಿಕಾರಿಗಳಾಗಿ ಕೆಲಸ ಮಾಡುತ್ತಿಲ್ಲ. ಬದಲಾಗಿ ಪ್ರಧಾನಿ ನರೇಂದ್ರ ಮೋದಿ ಅವರ ಗುಲಾಮರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ” ಎಂದು ಆಮ್‌ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷ ಡಾ. ಮುಖ್ಯಮಂತ್ರಿ ಚಂದ್ರು ಆಕ್ರೋಶ ವ್ಯಕ್ತಪಡಿಸಿದರು.

ಆಮ್‌ ಆದ್ಮಿ ಪಾರ್ಟಿ ಸಂಸ್ಥಾಪಕ, ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರನ್ನು ಅಕ್ರಮವಾಗಿ ಬಂಧಿಸಿರುವುದನ್ನು ವಿರೋಧಿಸಿ ನಗರದ ಸ್ವತಂತ್ರ ಉದ್ಯಾನವನದಲ್ಲಿ ಮುಖ್ಯಮಂತ್ರಿ ಚಂದ್ರು ನೇತೃತ್ವದಲ್ಲಿ ‘ಇಂಡಿಯಾ’ ಒಕ್ಕೂಟವು ಬೃಹತ್‌ ಶಾಂತಿಯುತ ಪ್ರತಿಭಟನೆ ನಡೆಸಿತು.

ಈ ವೇಳೆ, ಮಾತನಾಡಿದ ಮುಖ್ಯಮಂತ್ರಿ ಚಂದ್ರು ಅವರು, “ಕಳೆದ 10 ವರ್ಷಗಳಲ್ಲಿ ನಾವು ನೋಡಿದ್ದು ಪ್ರಜಾಪ್ರಭುತ್ವದ ಕಗ್ಗೋಲೆ, ವಿವಿಧತೆಯಲ್ಲಿ ಏಕತೆಯಿಂದಿರುವ ಭಾರತದ ನಾಶ, ಜನತಂತ್ರ ವ್ಯವಸ್ಥೆಯ ಸರ್ವನಾಶ, ಸಂವಿಧಾನ ಬದಲಿಸುವ ಪ್ರಯತ್ನ, ಪಾರದರ್ಶಕತೆ ಇಲ್ಲದ ಆಡಳಿತ, ಕೋಮುಗಲಭೆಗಳಾಗಿವೆ” ಎಂದರು.

“ಬಿಜೆಪಿಯೇತರ ಆಡಳಿತವಿರುವ ರಾಜ್ಯಗಳಲ್ಲಿ ರಾಜ್ಯಪಾಲರ ಮೂಲಕ ಕಡಿವಾಣ ಹಾಕುತ್ತಿದ್ದಾರೆ. ದೆಹಲಿಯಲ್ಲಿ ಲೆಫ್ಟಿನೆಂಟ್‌ ಗವರ್ನರ್‌ ಮೂಲಕ ರಾಜ್ಯದ ಆಡಳಿತವನ್ನು ಹತೋಟಿಯಲ್ಲಿಡಲು ಯತ್ನಿಸುತ್ತಿದ್ದಾರೆ. ಜೈಲಿನಲ್ಲಿರಬೇಕಾದ ಕಡು ಭ್ರಷ್ಟರನ್ನು ತಮ್ಮ ಪಕ್ಷಕ್ಕೆ ಸೇರಿಸಿಕೊಂಡು ಮಂತ್ರಿ, ಮುಖ್ಯಮಂತ್ರಿಗಳನ್ನಾಗಿಸುತ್ತಿದ್ದಾರೆ. ರಾಜಕೀಯ ಎದುರಾಳಿಗಳನ್ನು ಇಡಿ, ಸಿಬಿಐ, ತೆರಿಗೆ ಇಲಾಖೆ ಮತ್ತಿತರ ತನಿಖಾ ಸಂಸ್ಥೆಗಳ ಮೂಲಕ ಸುಳ್ಳು ಪ್ರಕರಣಗಳಡಿ ಆರೋಪಿಗಳಾಗಿಸಿ ಕಿರುಕುಳ ಕೊಡುತ್ತಿದ್ದಾರೆ. ಈ ದೇಶ ಉಳಿಯಬೇಕೆಂದರೇ ಸರ್ವಾಧಿಕಾರಿಯ ಆಡಳಿತಕ್ಕೆ ಅಂತ್ಯ ಹಾಡಬೇಕು” ಎಂದು ಮುಖ್ಯಮಂತ್ರಿ ಚಂದ್ರು ಕರೆ ನೀಡಿದರು.

“ದುಡ್ಡು ಇರುವವರ ಹತ್ತಿರ ಇ.ಡಿ ಹೋಗುತ್ತೆ. ಆಮೇಲೆ ಒಳಗೆ ಹೋಗ್ತಿರಾ, ಹೊರಗೆ ಇರ್ತಿರಾ ಎಂದು ಕೇಳುತ್ತೆ. ಹೊರಗಿರಬೇಕಾದ್ರೆ ಬಿಜೆಪಿ ಹುಂಡಿಗೆ ಕಾಸು ಹಾಕಿ. ಇಲ್ದೇ ಹೋದ್ರೆ ಒಳಗೋಗಿ. ಇದು ನೂರಾರು ಉದ್ಯಮಿಗಳ ಪರಿಸ್ಥಿತಿಯಾಗಿದೆ. ಸಾವಿರಾರು ಕೋಟಿ ರೂ. ಅಕ್ರಮ ಹಣವನ್ನು ಚುನಾವಣಾ ಬಾಂಡ್‌ ಮೂಲಕ ತನ್ನ ಹುಂಡಿಗೆ ಹಾಕಿಸಿಕೊಂಡು ಸಕ್ರಮ ಮಾಡುತ್ತಿದೆ. ಸ್ವಿಸ್‌ ಬ್ಯಾಂಕಿನಲ್ಲಿರುವ ಎಲ್ಲ ಕಳ್ಳ ದುಡ್ಡನ್ನು ತಂದು ಭಾರತದ ಪ್ರತಿಯೊಬ್ಬರ ಖಾತೆಗೆ ₹15 ಲಕ್ಷ ಹಾಕುತ್ತೇನೆ ಎಂದು 10 ವರ್ಷಗಳ ಹಿಂದೆ ನರೇಂದ್ರ ಮೋದಿ ಅವರು ಹೇಳಿದ್ದರು. ಆದರೆ, ಅವರೇ ಚುನಾವಣೆ ಬಾಂಡ್‌ ಮೂಲಕ ಸಾವಿರಾರು ಕೋಟಿ ಅಕ್ರಮ ಹಣವನ್ನು ಗುಡ್ಡೆ ಹಾಕಿಕೊಂಡಿದ್ದಾರೆ. ಸರ್ಕಾರಿ ಆಸ್ತಿಗಳನ್ನು ಒಂದುಕಡೆಯಿಂದ ಮಾರಾಟ ಮಾಡಿಕೊಂಡು ಬಂದಿದ್ದರೆ. ದೇಶದ ಸಾಲವನ್ನು ಕೇವಲ 10 ವರ್ಷಗಳಲ್ಲಿ 200 ಪಟ್ಟು ಹೆಚ್ಚಿದ್ದಾರೆ. ಮೊದಲೆಲ್ಲ ಭಾರತದಲ್ಲಿ ಹುಟ್ಟುವ ಪ್ರತಿ ಮಗುವಿನ ಮೇಲೆ ₹50 ಸಾವಿರ ಸಾಲವಿತ್ತು. ಆದರೆ, ಈಗ ಬರೋಬ್ಬರಿ ₹1.5 ಲಕ್ಷ  ಸಾಲವಿದೆ” ಎಂದು ಕಳವಳ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಒಂದೇ ವಾರದಲ್ಲಿ ಸರ್ಕಾರದ ಹೆಸರಿನಲ್ಲಿ‌ ಎರಡು ನಕಲಿ ಆದೇಶ; ₹4 ಕೋಟಿ ಗುತ್ತಿಗೆ ವಂಚನೆ

ಎಸ್‌ಡಿಪಿಐನ ಅಬ್ದುಲ್‌ ಮಜಿದ್‌, ಸಾಮಾಜಿಕ ಹೋರಾಟಗಾರ ನೂರ್‌ ಶ್ರೀಧರ್‌, ಸಲೀಲ್‌ ಶೆಟ್ಟಿ, ಎಎಪಿ ರಾಜ್ಯ ಉಪಾಧ್ಯಕ್ಷರಾದ ಮೋಹನ್‌ ದಾಸರಿ, ವಿಜಯ್‌ ಶರ್ಮಾ ಸಂವಿಧಾನ, ಪ್ರಜಾಪ್ರಭುತ್ವದ ಉಳಿವಿಗಾಗಿ ಅನೇಕ ಮಂದಿ ಪಕ್ಷಾತೀತರಾಗಿ ಪಾಲ್ಗೊಂಡಿದ್ದರು.

ಪ್ರತಿಭಟನೆ ವೇಳೆ ಹೆಚ್ಚಿನವರು ಕಪ್ಪು ಪಟ್ಟಿ ಧರಿಸಿದ್ದರು. ಸಂವಿಧಾನ ವಿರೋಧಿ ನರೇಂದ್ರ ಮೋದಿ, ಭ್ರಷ್ಟ ಮೋದಿ ಧಿಕ್ಕಾರ, ಬಾಂಡ್‌ ಮೋದಿಗೆ ಧಿಕ್ಕಾರ ಘೋಷಣೆಗಳು ಕೇಳಿಬಂದವು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸೋಜುಗಾದ ಸೂಜು ಮಲ್ಲಿಗೆ ಹುಡುಗಿ ಹಾಡು : ಇಮ್ಮಡಿಯಾದ ಪ್ರೇಕ್ಷಕರ ಉತ್ಸಾಹ

 ಕಳೆದ 10 ದಿನಗಳಿಂದ ದಸರಾ ಉತ್ಸವ ಸಂಭ್ರಮದಲ್ಲಿ ಮುಳುಗಿದ್ದ ಪ್ರೇಕ್ಷಕರ ಉತ್ಸಾಹ...

ತುಮಕೂರು ದಸರಾ : ಸಚಿವರಿಂದ ವಿಶೇಷ ಪೂಜೆ

ತುಮಕೂರು ದಸರಾ ಉತ್ಸವದ ಕಡೆಯ ದಿನವಾದ ವಿಜಯದಶಮಿಯಂದು ಗೃಹ ಹಾಗೂ ಜಿಲ್ಲಾ...

ಯುವಪರಿವರ್ತನೆ ಯಾತ್ರೆ: ಬಾಗಲಕೋಟೆಯಲ್ಲಿ ಚಾಲನೆ

ಯುವಜನರನ್ನು ರಾಜ್ಯದ ಅಭಿವೃದ್ಧಿಯತ್ತ ಚಿತ್ತಹರಿಸಲು, ಪ್ರಜೆಗಳ ಆರೋಗ್ಯ, ಶಿಕ್ಷಣ, ಸಬಲೀಕರಣ, ಉದ್ಯೋಗದ...

ಕೊಪ್ಪಳ | ಪ್ರವಾದಿ ಮಹಮ್ಮದ್‌ ಸಂದೇಶವನ್ನು ನಾವು ಪಾಲನೆ ಮಾಡಬೇಕು: ಲಾಲ್ ಹುಸೇನ್ ಕಂದ್ಗಲ್

'ಖುರಾನ್' ಬರುವ ಪ್ರವಾದಿ ಮಹಮ್ಮದ್‌ ಅವರು ಹೇಳಿದ ಸತ್ಯವನ್ನೇ ಭಾರತೀಯ ಪುರಾಣಗಳು...

Download Eedina App Android / iOS

X