2023-24ನೇ ಸಾಲಿನ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶ ಮೇ 9ರಂದು ಪ್ರಕಟವಾಗಲಿದೆ.
ಗುರುವಾರ ಬೆಳಗ್ಗೆ 10.30 ಗಂಟೆಗೆ https://karresults.nic.in/ ಜಾಲತಾಣದಲ್ಲಿ ಫಲಿತಾಂಶ ಪ್ರಕಟವಾಗಲಿದೆ.
“ಮಾ.25 ರಿಂದ ಎ.6 ರವರೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ನಡೆಸಲಾಗಿತ್ತು. ಈಗ ಎಲ್ಲ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯಗೊಂಡಿದೆ. ಈ ಹಿನ್ನೆಲೆ, ಗುರುವಾರ ಫಲಿತಾಂಶವನ್ನು ಪ್ರಕಟಿಸಲಾಗುತ್ತಿದೆ” ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಪ್ರಕಟಣೆಯಲ್ಲಿ ತಿಳಿಸಿದೆ.
“ಮಾರ್ಚ್/ಏಪ್ರಿಲ್ 2024ರ ಎಸ್ಸೆಸ್ಸೆಲ್ಸಿ ಪರೀಕ್ಷೆ-1 ಮಾರ್ಚ್ 25 ರಿಂದ ಏಪ್ರಿಲ್ 6 ರವರೆಗೆ ನಡೆದಿದೆ. ಎಲ್ಲ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿದೆ. ಮೇ 9ರಂದು ಬೆಳಗ್ಗೆ 10.30 ಗಂಟೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಿಸಲಾಗುವುದು” ಎಂದು ಹೇಳಿದೆ.
ಈ ಸುದ್ದಿ ಓದಿದ್ದೀರಾ? ಬೆಂಗಳೂರು | ವಿಚಾರಣೆಗೆ ಹಾಜರಾಗುವಂತೆ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ, ವಿಜಯೇಂದ್ರ, ಮಾಳವಿಯಾಗೆ ನೋಟೀಸ್
“ಫಲಿತಾಂಶವನ್ನು https://karresults.nic.in ಜಾಲತಾಣದಲ್ಲಿ ಮೇ 9ರ ಬೆಳಗ್ಗೆ 10.30 ಗಂಟೆಯ ನಂತರ ವೀಕ್ಷಿಸಬಹುದಾಗಿದೆ” ಎಂದಿದೆ.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ (ಕೆಎಸ್‌ಇಎಬಿ) ಈ ಬಾರಿ 3 ಪರೀಕ್ಷೆಗಳನ್ನು (ಪೂರಕ ಪರೀಕ್ಷೆ ಅಲ್ಲದ) ನಡೆಸುತ್ತಿದೆ.