ಎಸ್ಸೆಸ್ಸೆಲ್ಸಿ ಮೌಲ್ಯಮಾಪನ ಪೂರ್ಣ; ಮೇ 8ಕ್ಕೆ ಫಲಿತಾಂಶ ಪ್ರಕಟ ಸಾಧ್ಯತೆ

Date:

Advertisements

ಭಾರೀ ಕುತೂಹಲದಿಂದ ಕಾಯುತ್ತಿದ್ದ ದ್ವಿತೀಯ ಪಿಯುಸಿ ಫಲಿತಾಂಶ ಏ.10 ರಂದು ಪ್ರಕಟವಾಗಿತ್ತು. ಫಲಿತಾಂಶದಲ್ಲಿ ಪ್ರತಿ ವರ್ಷದಂತೆ ಈ ಬಾರಿಯೂ ಹುಡುಗಿಯರೇ ಮೇಲುಗೈ ಸಾಧಿಸಿದ್ದರು. ಈ ಬೆನ್ನಲ್ಲೇ, ಎಸ್ಸೆಸ್ಸೆಲ್ಸಿ ಫಲಿತಾಂಶಕ್ಕಾಗಿ ವಿದ್ಯಾರ್ಥಿಗಳ ಕಾಯುವಿಕೆಗೆ ಮೇ 8ರಂದು ಉತ್ತರ ಸಿಗಲಿದ್ದು, ಫಲಿತಾಂಶ ಪ್ರಕಟಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಸಿದ್ಧತೆ ನಡೆಸಿದೆ.

2023-24ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮುಕ್ತಾಯವಾಗಿದೆ. ಮಾರ್ಚ್ 25 ರಿಂದ ಏಪ್ರಿಲ್ 6 ರವರೆಗೆ ರಾಜ್ಯಾದ್ಯಂತ 2,750 ಕೇಂದ್ರಗಳಲ್ಲಿ ಈ ವರ್ಷದ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆದಿದೆ. 4.41 ಲಕ್ಷ ಬಾಲಕರು, 4.28 ಲಕ್ಷ ಬಾಲಕಿಯರೂ ಸೇರಿದಂತೆ ಒಟ್ಟು 8.69 ಲಕ್ಷ ವಿದ್ಯಾರ್ಥಿಗಳು ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದಿದ್ದರು.

ಆಯಾ ವಿಷಯಗಳ ಪರೀಕ್ಷೆಗಳು ಮುಗಿದ ಮರುದಿನವೇ ಮೌಲ್ಯ ಮಾಪನ ಕಾರ್ಯ ಆರಂಭಿಸಲಾಗಿತ್ತು. ಎಲ್ಲ ಪತ್ರಿಕೆಗಳ ಮೌಲ್ಯಮಾಪನ ಪೂರ್ಣಗೊಂಡಿದ್ದು, ಅಂಕಗಳ ಕೂಡುವಿಕೆ ಕಾರ್ಯ ನಡೆಯುತ್ತಿದೆ. ಮೇ 6ರ ಒಳಗೆ ಎಲ್ಲ ಪ್ರಕ್ರಿಯೆಗಳು ಪೂರ್ಣಗೊಳ್ಳಲಿವೆ. ಮೇ 7ರಂದು ರಾಜ್ಯದಲ್ಲಿ ಎರಡನೇ ಹಂತದ ಲೋಕಸಭಾ ಚುನಾವಣೆಯ ಮತದಾನ ನಡೆಯಲಿರುವುದರಿಂದ ಮೇ 8ರಂದು ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟಿಸಲು ಮಂಡಳಿ ನಿರ್ಧರಿಸಿದೆ.

Advertisements

ಈ ಸುದ್ದಿ ಓದಿದ್ದೀರಾ? ಬೆಂಗಳೂರು ವಿವಿ | ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ಪಿಹೆಚ್‌ಡಿ ವಿದ್ಯಾರ್ಥಿ ಅನುಮಾನಾಸ್ಪದ ಸಾವು

ಎಸ್ಸೆಸ್ಸೆಲ್ಸಿಗೆ ಮೊದಲ ಬಾರಿಗೆ ಈ ವರ್ಷ ಮೂರು ಪರೀಕ್ಷೆಗಳನ್ನು ಪರಿಚಯಿಸಲಾಗಿದ್ದು, ಎರಡನೇ ಪರೀಕ್ಷೆಯು ಮೇ ಮೂರನೇ ವಾರದಲ್ಲಿ ಪ್ರಾರಂಭವಾಗಲಿದೆ. ಉತ್ತೀರ್ಣರಾದ ವಿದ್ಯಾರ್ಥಿಗಳು ಸಹ ಅಂಕಗಳನ್ನು ಹೆಚ್ಚಿಸಿಕೊಳ್ಳಲು ಉಳಿದ ಎರಡು ಪರೀಕ್ಷೆಗಳನ್ನು ತೆಗೆದುಕೊಳ್ಳಬಹುದು. ಯಾವ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳು ಬರುತ್ತವೆಯೋ ಅದರ ಅಂಕಪಟ್ಟಿ ಪಡೆಯಬಹುದು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

ಬೆಂಗಳೂರಿನಲ್ಲಿ ಬೈಕ್‌ ಟ್ಯಾಕ್ಸಿ ಪುನರಾರಂಭ; ಸೀಮಿತ ಆ್ಯಪ್‌ಗಳಲ್ಲಿ ಮಾತ್ರ ಲಭ್ಯ

ಬೆಂಗಳೂರಿನಲ್ಲಿ ಗುರುವಾರದಿಂದ (ಆಗಸ್ಟ್‌ 21) ಮತ್ತೆ ಬೈಕ್‌ ಟ್ಯಾಕ್ಸಿ ಸೇವೆಗಳು ಪುನಾರಂಭವಾಗಿವೆ....

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

Download Eedina App Android / iOS

X