ಕಲ್ಯಾಣ ಕರ್ನಾಟಕದಲ್ಲಿ ಬೃಹತ್ ಕೌಶಲ್ಯಾಭಿವೃದ್ಧಿ ತರಬೇತಿ ಕೇಂದ್ರ ಸ್ಥಾಪಿಸಿ : ಸಚಿವ ಈಶ್ವರ ಖಂಡ್ರೆ

Date:

ಕಲ್ಯಾಣ ಕರ್ನಾಟಕ ಭಾಗ ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ತೀವ್ರ ಹಿಂದುಳಿದಿದ್ದು, ಈ ಭಾಗದ ಯುವಕರಿಗೆ ಉದ್ಯೋಗ ದೊರಕಿಸಲು ಜಿಲ್ಲಾ ಕೇಂದ್ರದಲ್ಲಿ ಬೃಹತ್ ಕೌಶಲ್ಯಾಭಿವೃದ್ಧಿ ಕೇಂದ್ರ ಸ್ಥಾಪಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ.

- Advertisement -

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಶುಕ್ರವಾರ ನಡೆದ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ, “ಕಲ್ಯಾಣ ಕರ್ನಾಟಕ ಭಾಗದ ಯುವ ಜನರು ಖಾಸಗಿ ವಲಯದಲ್ಲಿ ಉದ್ಯೋಗಕ್ಕೆ ಅರ್ಹರಾಗುವಂತೆ ಮಾಡುವ ಅಗತ್ಯವಿದ್ದು, ಈ ಭಾಗದ ಯಾವುದಾದರೂ ಒಂದು ಜಿಲ್ಲಾ ಕೇಂದ್ರದಲ್ಲಿ ಬೃಹತ್ ಕೌಶಲ್ಯಾಭಿವೃದ್ಧಿ ಕೇಂದ್ರ ಸ್ಥಾಪಿಸುವಂತೆ” ಮನವಿ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಕಕ ನೇಮಕಾತಿಗೆ ಹಣಕಾಸು ಇಲಾಖೆ ಪೂರ್ವಾನುಮತಿ ಅಗತ್ಯವಿಲ್ಲ:

ಕಲ್ಯಾಣ ಕರ್ನಾಟಕಕ್ಕೆ 371 (ಜೆ) ಸಾಂವಿಧಾನಿಕ ತಿದ್ದುಪಡಿ ಅಡಿಯಲ್ಲಿ ವಿಶೇಷ ಸ್ಥಾನಮಾನ ನೀಡಲಾಗಿದ್ದು, ಈ ಭಾಗದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಯ ಪೂರ್ವಾನುಮೋದನೆ ಅಗತ್ಯವಿಲ್ಲ ಎಂದು ಸರ್ಕಾರಿ ಆದೇಶವೇ ಇದೆ. ಆದಾಗ್ಯೂ ನೇಮಕಾತಿ ವೇಳೆ ಹಣಕಾಸು ಇಲಾಖೆ ಅನುಮೋದನೆಗೆ ಕಡತ ಕಳಿಸುತ್ತಿದ್ದು, ಇದರಿಂದ ನೇಮಕಾತಿ ವಿಳಂಬವಾಗಿದೆ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಬೇಕು ಎಂದು ಅರಣ್ಯ ಸಚಿವರು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದರು. ಇದಕ್ಕೆ ಮುಖ್ಯಮಂತ್ರಿಯವರು ಸಕಾರಾತ್ಮಕವಾಗಿ ಸ್ಪಂದಿಸಿದರು.

ಜಿಲ್ಲಾ ಕೇಂದ್ರದಲ್ಲಿ ಮಹಿಳಾ ಪದವಿ ಕಾಲೇಜು ಸ್ಥಾಪನೆಗೆ ಮನವಿ:

ಕಲ್ಯಾಣ ಕರ್ನಾಟಕ ಭಾಗದಲ್ಲಿ ಮಹಿಳೆಯರ ಶಿಕ್ಷಣಕ್ಕೆ ಆದ್ಯತೆ ನೀಡುವ ಅಗತ್ಯವಿದ್ದು, ಎಲ್ಲ ಏಳು ಜಿಲ್ಲಾ ಕೇಂದ್ರದಲ್ಲೂ ಒಂದೊಂದು ಸರ್ಕಾರಿ ಮಹಿಳಾ ಪದವಿ ಕಾಲೇಜು ಸ್ಥಾಪಿಸಬೇಕು. ಅದೇ ರೀತಿ ಕಲ್ಯಾಣ ಕರ್ನಾಟಕದಾದ್ಯಂತ ಖಾಲಿ ಇರುವ ಸುಮಾರು 6,639 ಶಿಕ್ಷಕರ ಹುದ್ದೆಗಳನ್ನು ಆದ್ಯತೆಯ ಮೇಲೆ ಭರ್ತಿ ಮಾಡಬೇಕು, ಇದಕ್ಕೆ ಅನುಮೋದನೆ ನೀಡಿ” ಬೀದರ್‌ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಕೋರಿದರು.

ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಕೈಗಾರಿಕಾ ನೀತಿ :

ಕಲ್ಯಾಣ ಕರ್ನಾಟಕದಲ್ಲಿ ಕೈಗಾರಿಕೆಗಳನ್ನು ಸ್ಥಾಪಿಸುವ ಅಗತ್ಯವಿದ್ದು, ಕೈಗಾರಿಕೆಗಳಿಲ್ಲದೆ ಈ ಪ್ರದೇಶ ಹಿಂದುಳಿದಿದೆ. ಜೊತೆಗೆ ಇಲ್ಲಿ ಕಚ್ಚಾ ಸಾಮಗ್ರಿ, ನೈಸರ್ಗಿಕ ಸಂಪನ್ಮೂಲದ ಕೊರತೆಯೂ ಇದೆ. ಹೀಗಾಗಿ, ಕಲ್ಯಾಣ ಕರ್ನಾಟಕ ಭಾಗಕ್ಕೆ ಪ್ರತ್ಯೇಕವಾದ ಕೈಗಾರಿಕಾ ನೀತಿ ರೂಪಿಸಬೇಕು ಎಂದು ಸಭೆಗೆ ಸಚಿವ ಈಶ್ವರ ಖಂಡ್ರೆ ಮನವಿ ಮಾಡಿದರು.

ವೈದ್ಯಕೀಯ ಸೌಲಭ್ಯ ವರ್ಧನೆಗೂ ಮನವಿ:

ಕಲ್ಯಾಣ ಕರ್ನಾಟಕ ಭಾಗದಲ್ಲಿ ವೈದ್ಯಕೀಯ ಸೌಲಭ್ಯಗಳ ಹೆಚ್ಚಳ ಮಾಡುವ ಅಗತ್ಯವಿದೆ. ಆಸ್ಪತ್ರೆಗಳಲ್ಲಿ ಹೆಚ್ಚಿನ ಚಿಕಿತ್ಸಾ ಸೌಲಭ್ಯ ಕಲ್ಪಿಸಬೇಕು. ಬೀದರ್ ಜಿಲ್ಲಾಸ್ಪತ್ರೆಯಲ್ಲಿ ಇನ್ನೂ ನೆಫ್ರಾಲಜಿ (ಮೂತ್ರಪಿಂಡ, ಮೂತ್ರಕೋಶ ಚಿಕಿತ್ಸಾ ವಿಭಾಗ) ಘಟಕ ಮತ್ತು ಕ್ಯಾಥ್ ಲ್ಯಾಬ್ ಆರಂಭವಾಗಿಲ್ಲ. ಇದನ್ನು ಆದ್ಯತೆಯ ಮೇಲೆ ಆರಂಭಿಸಬೇಕು ಎಂದು ಮನವಿ ಮಾಡಿದರು.

ಬೀದರ್ ವಿಮಾನಯಾನ ಪುನಾರಂಭಕ್ಕೆ ಮನವಿ:

ಈ ಹಿಂದೆ ಕಾಂಗ್ರೆಸ್ ಸರ್ಕಾರದ ಮನವಿಯ ಹಿನ್ನೆಲೆಯಲ್ಲಿ ಬೀದರ್ ನಗರಕ್ಕೆ ನಾಗರಿಕ ವಿಮಾನಯಾನ ಆರಂಭವಾಗಿತ್ತು. ಆದರೆ ಈಗ ಕಳೆದ 6 ತಿಂಗಳಿಂದ ವಿಮಾನ ಯಾನ ರದ್ದುಪಡಿಸಲಾಗಿದೆ. ಉಡಾನ್ ಅಡಿಯಲ್ಲಿ ಸಬ್ಸಿಡಿ ನೀಡದಿರುವುದೇ ಇದಕ್ಕೆ ಕಾರಣವಾಗಿದೆ. ಕೂಡಲೇ ಬೀದರ್‌ಗೆ ನಾಗರಿಕ ವಿಮಾನಯಾನ ಸೇವೆ ಆರಂಭಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ ಖಂಡ್ರೆ ಮನವಿ ಮಾಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ದಾಖಲೆ ತೋರಿಸಿ, ಜಮೀನನ್ನು ನಿಮ್ಮ ಕುಟುಂಬಕ್ಕೇ ಬರೆದುಕೊಡ್ತೀನಿ!’: ಹೆಚ್‌ಡಿಕೆಗೆ ಬಾಲಕೃಷ್ಣ ಸವಾಲು

"ನನ್ನ ಹೆಸರಿನಲ್ಲಿ ನೈಸ್ ರಸ್ತೆ ಯೋಜನಾ ವ್ಯಾಪ್ತಿಯಲ್ಲಿ ಜಮೀನಿದ್ದರೆ ದಾಖಲೆ ಬಿಡುಗಡೆ...

ಬೀದರ್‌ | ಆಯುರ್ವೇದ ಚಿಕಿತ್ಸೆಗೆ ಜಾಗತಿಕ ಮನ್ನಣೆ

ಆಯುರ್ವೇದ ಚಿಕಿತ್ಸೆಗೆ ಜಾಗತಿಕ ಮಟ್ಟದಲ್ಲಿ ಮನ್ನಣೆ ಸಿಗುತ್ತಿದೆ ಎಂದು ಕೇಂದ್ರ ಸರ್ಕಾರದ...

ದೇಹದ ಅಪಹಾಸ್ಯ, ನಿಂದನೆ ಮಾತ್ರವೇ ಮಹಿಳೆಯ ಮರ್ಯಾದೆ ಭಂಗದ ಅಪರಾಧವಲ್ಲ: ಹೈಕೋರ್ಟ್

ಕೇವಲ ದೇಹದ ಅಪಹಾಸ್ಯ (ಬಾಡಿ ಶೇಮಿಂಗ್‌) ಮತ್ತು ಅವಾಚ್ಯವಾಗಿ ನಿಂದಿಸುವುದು ಐಪಿಸಿ...

ಭಯೋತ್ಪಾದಕ ಸಂಘಟನೆಗಳ ಸದಸ್ಯರೊಂದಿಗೆ ಸಂಪರ್ಕ ಆರೋಪ: ಭಾಲ್ಕಿ ಮೂಲದ ಯುವಕನ ಬಂಧನ

ಇನ್‌ಸ್ಟಾಗ್ರಾಮ್ ಹಾಗೂ ವಾಟ್ಸಾಪ್‌ ಮೂಲಕ ನಿಷೇಧಿತ ಭಯೋತ್ಪಾದಕ ಸಂಘಟನೆಗಳ ಸದಸ್ಯರು ಮತ್ತು...