ಹೊಸದಾಗಿ GTDC ಗಳ ಸ್ಥಾಪನೆ: ಸಿ ಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ

Date:

Advertisements

ಹೊಸ ಹೊಸ ಉದ್ಯೋಗ ಸೃಷ್ಟಿ ಮತ್ತು ತರಬೇತಿಗಾಗಿ ಈಗಿರುವ GTDC ಗಳ ಜತೆಗೆ ಹೊಸದಾಗಿ ಇನ್ನಷ್ಟು GTDC ಗಳನ್ನು ಸ್ಥಾಪನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಘೋಷಣೆ ಮಾಡಿದರು.

ಅರಮನೆ ಮೈದಾನದಲ್ಲಿ ನಡೆದ ಬೃಹತ್ ಯುವ ಸಮೃದ್ಧಿ ಸಮ್ಮೇಳನ ಮತ್ತು ಬೃಹತ್ ಉದ್ಯೋಗ ಮೇಳವನ್ನು ಉದ್ಘಾಟಿಸಿ ಮಾತನಾಡಿದರು.

ನಿರುದ್ಯೋಗ ದೇಶದ ಪ್ರಮುಖ ಸಮಸ್ಯೆಯಾಗಿದೆ. ಕಳೆದ 10 ವರ್ಷಗಳಲ್ಲಿ ನಿರುದ್ಯೋಗ ಪ್ರಮಾಣ ಬೃಹತ್ತಾಗಿ ಬೆಳೆದಿದೆ. 2014 ರಲ್ಲಿ ಪ್ರಧಾನಿ ಮೋದಿ ಪ್ರತಿ ವರ್ಷ ಎರಡು ಕೋಟಿ ಉದ್ಯೋಗ ಸೃಷ್ಟಿ ಮಾಡುತ್ತೀನಿ ಎಂದು ಭರವಸೆ ನೀಡಿ ಯುವ ಸಮೂಹದ ಮತ ಗಳಿಸಿದರು. ಈ 10 ವರ್ಷದಲ್ಲಿ 20 ಕೋಟಿ ಉದ್ಯೋಗ ಸೃಷ್ಟಿಸಬೇಕಿದ್ದ ಮೋದಿಯವರು, ಇರುವ ಯದ್ಯೋಗಗಳನ್ನೂ ಕಸಿದುಕೊಂಡಿದ್ದಾರೆ. ಹೀಗಾಗಿ ಪ್ರತೀ ವರ್ಷ ನಿರುದ್ಯೋಗ ಪ್ರಮಾಣ ಬೃಹತ್ತಾಗಿ ಬೆಳೆಯುತ್ತಾ 8.40 ಶೇ ಏರಿಕೆಯಾಗಿದೆ ಎಂದು ಅಂಕಿ ಅಂಶಗಳ‌ ಸಮೇತ ವಿವರಿಸಿದರು.

Advertisements

ನಿರುದ್ಯೋಗಿ ಯುವಕರಿಗೆ ಯುವ ನಿಧಿ ಕೊಡುವ ಜತೆಗೆ ಇವರಿಗೆ ಉದ್ಯೋಗ ಸೃಷ್ಟಿಸುವ ಮತ್ತು ಉದ್ಯೋಗ ಮಾಡಲು ಅಗತ್ಯವಾದ ತರಬೇತಿಗಳನ್ನೂ ನೀಡಲಾಗುವುದು. ನಾವು ಯುವ ನಿಧಿಯನ್ನೂ ಕೊಡ್ತೀವಿ. ಉದ್ಯೋಗವನ್ನೂ ಸೃಷ್ಟಿಸುತ್ತೇವೆ, ಉದ್ಯೋಗಕ್ಕೆ ಬೇಕಾದ ಕೌಶಲ್ಯ ತರಬೇತಿಯನ್ನೂ ನೀಡುತ್ತೇವೆ. ಇದು ನಮ್ಮ ಸರ್ಕಾರ ವಿದ್ಯಾರ್ಥಿ ಯುವಜನರಿಗೆ ಮಾಡುವ ಅಭಯ ಎಂದು ಭರವಸೆ ನೀಡಿದರು.

ವೈದ್ಯಕೀಯ ಶಿಕ್ಷಣ ಸಚಿವರಾದ ಶರಣಪ್ರಕಾಶ್ ಪಾಟೀಲ್, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ ಖರ್ಗೆ, ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಕೌಶಲ್ಯ ಅಭಿವೃದ್ಧಿ ಇಲಾಖೆಯ ಉನ್ನತ ಅಧಿಕಾರಿಗಳು, ನೂರಾರು ಉದ್ಯಮಿಗಳು, ಸುಮಾರು 80 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕದಲ್ಲಿ ಒಂದು ವಾರ ಭಾರೀ ಮಳೆ: ಕರಾವಳಿ, ಒಳನಾಡಿನ ಜಿಲ್ಲೆಗಳಿಗೆ ರೆಡ್, ಆರೆಂಜ್ ಅಲರ್ಟ್

ಕರ್ನಾಟಕದಾದ್ಯಂತ ಆಗಸ್ಟ್ 17ರಿಂದ 21ರವರೆಗೆ ಭಾರೀ ಮಳೆಯ ಮುನ್ಸೂಚನೆಯನ್ನು ಭಾರತೀಯ ಹವಾಮಾನ...

ಪಿಓಪಿ ಮೂರ್ತಿಗಳ ವಿಸರ್ಜನೆಯಿಂದ ಜಲಚರ ಸಾವು : ಮಣ್ಣಿನ ಗಣಪತಿ ಪೂಜಿಸಲು ಸಚಿವ ಈಶ್ವರ ಖಂಡ್ರೆ ಮನವಿ

ಗಣೇಶ ಚತುರ್ಥಿಯಂದು ಮನೆಯಲ್ಲೂ ಪೂಜೆಗೊಳ್ಳುವ ಗಣೇಶ ಪರಿಸರ (ಮಣ್ಣಿನಿಂದ) ದಿಂದಲೇ ಹುಟ್ಟಿದ...

ರಾಜ್ಯದಲ್ಲಿ 31 ತಿಂಗಳಲ್ಲಿ 10,510 ಪೋಕ್ಸೋ ಪ್ರಕರಣ : 162 ಮಂದಿಗಷ್ಟೇ ಶಿಕ್ಷೆ!

ರಾಜ್ಯದಲ್ಲಿ ಅಪ್ರಾಪ್ತ ಹೆಣ್ಣು ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳು ದಿನೇದಿನೇ...

‘ಶೋಲೆ’ @ 50: ಇವತ್ತಿಗೂ ಅದೇ ತಾಜಾತನ, ಅದೇ ಆಕರ್ಷಣೆ, ಅದೇ ಕುತೂಹಲ

'ಶೋಲೆ' ಚಿತ್ರ ಬಿಡುಗಡೆಯಾಗಿ 50 ವರ್ಷಗಳಾದರೂ ಇವತ್ತಿಗೂ ಅದೇ ತಾಜಾತನ, ಅದೇ...

Download Eedina App Android / iOS

X