ನಮ್ಮ ಪಕ್ಷದ ಎಲ್ಲರೂ ಸಿದ್ದರಾಮಯ್ಯನವರ ಅಭಿಮಾನಿಗಳು: ಸಚಿವ ಪ್ರಿಯಾಂಕ್ ಖರ್ಗೆ

Date:

ಕಾಂಗ್ರೆಸ್ ಪಕ್ಷದಲ್ಲಿ ಯಾರೂ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ವಿರುದ್ದ ಇಲ್ಲ. ಎಲ್ಲರೂ ಕೂಡ ಅವರ ಅಭಿಮಾನಿಗಳೇ’ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಇಂದಿಲ್ಲಿ ಸ್ಪಷ್ಟಪಡಿಸಿದ್ದಾರೆ.

- Advertisement -

ಶನಿವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಸಿಎಂ ಸಿದ್ದರಾಮಯ್ಯ ಎಕ್ಸ್ ಪೋಸ್ಟ್ ಏಕೆ ಮಾಡಿದ್ದಾರೆ ಎಂದು ಗೊತ್ತಿಲ್ಲ. ಅವರನ್ನು ಸಹಿಸಿಕೊಳ್ಳಕ್ಕೆ ಆಗುವುದಿಲ್ಲ ಎಂದರೆ ಅವರು ದಾಖಲೆಯ ಬಜೆಟ್ ಮಂಡನೆ ಮಾಡಲು ಸಾಧ್ಯವೇ?. ಸಿಎಂ ಆಗಿ ದೇವರಾಜ ಅರಸು ದಾಖಲೆ ಮುರಿದಿದ್ದಾರೆ. ಒಳ್ಳೆಯ ಆಡಳಿತ ನೀಡುತ್ತಿದ್ದಾರೆ’ ಎಂದು ನುಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ಇದನ್ನು ಓದಿದ್ದೀರಾ? ಆಸ್ಟ್ರೇಲಿಯಾ ನೆಲದಲ್ಲಿ ಭಾರತೀಯ ವನಿತೆಯರ ಐತಿಹಾಸಿಕ ಸಾಧನೆ: 10 ವರ್ಷಗಳ ಬಳಿಕ ಟಿ20 ಸರಣಿ ಕೈವಶ

ಈ ಹಿಂದಿನ ಕಾಂಗ್ರೆಸ್ ಅವಧಿಯಲ್ಲಿ ಹಲವು ಭಾಗ್ಯಗಳನ್ನು ನೀಡಿದ್ದರು. ಇದೀಗ ಐದು ಗ್ಯಾರಂಟಿ ಯೋಜನೆಗಳನ್ನು ನೀಡಿದ್ದಾರೆ. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಆರ್ಥಿಕ ಯೋಜನೆ ರೂಪಿಸಿ, ಅನುಷ್ಟಾನಗೊಳಿಸಿದ್ದಾರೆ. ಹೀಗಿರುವಾಗ ನಮ್ಮ ಪಕ್ಷದ ಎಲ್ಲರೂ ಅವರ ಜೊತೆಗೆ ಇದ್ದಾರೆ ಎಂದು ಪ್ರಿಯಾಂಕ್ ಖರ್ಗೆ ತಿಳಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಬದ್ದತೆಗೆ ಎದುರಾಳಿಗಳು ಯಾರು ಎಂದರೆ, ಅದು ಬಿಜೆಪಿ, ಆರೆಸ್ಸೆಸ್‍ನವರು. ಅವರೇ ಬಹಿರಂಗವಾಗಿ ಇದನ್ನು ಹೇಳಿದ್ದಾರೆ. ಬುದ್ದ, ಬಸವ, ಅಂಬೇಡ್ಕರ್ ತತ್ವ ಪಾಲಿಸಿಕೊಂಡು ಬಂದವರು ಸಿದ್ದರಾಮಯ್ಯನವರು. ಆ ವಿಚಾರಕ್ಕೆ ವಿರೋಧ ಮಾಡಿದವರೇ ಬಿಜೆಪಿ, ಆರೆಸ್ಸೆಸ್‍ನವರು ಎಂದು ಅವರು ಟೀಕಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪರಪ್ಪನ ಅಗ್ರಹಾರದಿಂದ ಬೆಳಗಾವಿ ಹಿಂಡಲಗಾ ಜೈಲಿಗೆ ಪ್ರಜ್ವಲ್ ರೇವಣ್ಣ ಎತ್ತಂಗಡಿ

ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಅಕ್ರಮವಾಗಿ ಮೊಬೈಲ್ ಫೋನ್ ಬಳಸಿದ...

Form 7 ಅರ್ಜಿ ವಿವಾದ; ತನಿಖೆಗೆ SIT ರಚನೆಗೆ ಸರ್ಕಾರ ಚಿಂತನೆ

ರಾಜ್ಯದಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸುವ ಉದ್ದೇಶದಿಂದ ಬೃಹತ್‌ ಪ್ರಮಾಣದಲ್ಲಿ Form...

ಎಸ್‌ಐಆರ್ ವಿರೋಧಿ ಹೋರಾಟ: ಯುವ ಪೀಳಿಗೆಗೆ ಕರ್ನಾಟಕ ನಾಗರಿಕ ಸಮಾಜ ಬೆಂಬಲ, ಕೇಂದ್ರ ಸರ್ಕಾರಕ್ಕೆ ನೂರ್ ಶ್ರೀಧರ್ ಎಚ್ಚರಿಕೆ

ದೆಹಲಿಯಲ್ಲಿ ನಡೆಯಲಿರುವ ಎಸ್‌ಐಆರ್ ವಿರೋಧಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುತ್ತಿರುವ ಯುವ ಹೋರಾಟಗಾರರ ಮೇಲೆ...