ಸಮಾಜದ ಪ್ರತಿಯೊಬ್ಬರು ಮತ ಚಲಾಯಿಸಬೇಕು; ಇದು ಚುನಾವಣಾ ಆಯೋಗದ ಗುರಿ: ತುಷಾರ್ ಗಿರಿನಾಥ್

Date:

“ಲೋಕಸಭಾ ಚುನಾವಣೆ ಹಿನ್ನೆಲೆ, ಮತದಾರರು ತಪ್ಪದೆ ಮತದಾನ ಮಾಡುವ ನಿಟ್ಟಿನಲ್ಲಿ ವಿಶೇಷ ಚೇತನರ ಮೂಲಕ ಜಾಗೃತಿ ಜಾಥಾ ನಡೆಸಿ ಅರಿವು ಮೂಡಿಸುವ ಕೆಲಸ ಮಾಡಲಾಗುತ್ತಿದೆ. ಸಮಾಜದ ಪ್ರತಿಯೊಂದು ವರ್ಗದವರೂ ತಪ್ಪದೆ ಮತದಾನ ಚಲಾಯಿಸಬೇಕೆಂಬುದು ಚುನಾವಣಾ ಆಯೋಗದ ಗುರಿಯಾಗಿದೆ” ಎಂದು ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿ ನಾಥ್ ರವರು ಹೇಳಿದರು.

ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್ ಬಳಿ ವಿಶೇಷ ಚೇತನರ ದ್ವಿಚಕ್ರ / ತ್ರಿಚಕ್ರ ವಾಹನಗಳ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು, “ವಿಶೇಷ ಚೇತನರು, 85 ವರ್ಷ ಮೇಲ್ಪಟ್ಟವರು ಹಾಗೂ ತೃತೀಯ ಲಿಂಗಿಗಳು ಎಲ್ಲರನ್ನೂ ಮತದಾರರ ಪಟ್ಟಿಯಲ್ಲಿ ಸೇರ್ಪಡೆ ಮಾಡಿ ತಪ್ಪದೆ ಮತದಾನ ಮಾಡಲು ಮನವಿ ಮಾಡಲಾಗುತ್ತಿದೆ” ಎಂದರು.

“ವಿಶೇಷ ಚೇತನರು ಮತದಾನ ಮಾಡುವ ವೇಳೆ ಯಾವುದೇ ಸಮಸ್ಯೆಯಾಗದ ರೀತಿಯಲ್ಲಿ ಮತಗಟ್ಟೆಗಳ ಬಳಿ ರ್ಯಾಂಪ್ ವ್ಯವಸ್ಥೆ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಎಲ್ಲ ವಿಶೇಷ ಚೇತನರು ಏಪ್ರಿಲ್ 26ರಂದು ಮತದಾನ ನಡೆಯಲಿದ್ದು, ತಪ್ಪದೆ ಮತಗಟ್ಟೆಗಳಿಗೆ ಬಂದು ಮತದಾನ ಮಾಡಬೇಕು” ಎಂದು ಮನವಿ ಮಾಡಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ನೀರಿನ ಸಮಸ್ಯೆಯಾಗದಂತೆ ಕ್ರಮ ವಹಿಸಿ: ತುಷಾರ್ ಗಿರಿನಾಥ್

ವಿಶೇಷ ಚೇತನರ ದ್ವಿಚಕ್ರ / ತ್ರಿಚಕ್ರ ವಾಹನಗಳ ಜಾಥಾ ಕಾರ್ಯಕ್ರಮವು ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್‌ನಿಂದ ಪ್ರಾರಂಭವಾಗಿ ಕೆ.ಆರ್ ವೃತ್ತ, ನೃಪತುಂಗ ರಸ್ತೆ, ಹಡ್ಸನ್ ವೃತ್ತದ ಮೂಲಕ ಕಂಠೀರವ ಕ್ರೀಡಾಂಗಣದವರೆಗೆ ಸಾಗಿ ಮುಕ್ತಾಯವಾಯಿತು. ಈ ವೇಳೆ,  ತಪ್ಪದೆ ಮತದಾನ‌ ಮಾಡುವ ನಿಟ್ಟಿನಲ್ಲಿ ಜಾಥಾ ಕಾರ್ಯಕ್ರಮದ ವೇಳೆ ನೆರೆದಿದ್ದ ವಿಶೇಷ ಚೇತನರು ಹಾಗೂ ಅಧಿಕಾರಿಗಳು ಪ್ರತಿಜ್ಞಾನ ವಿಧಿಯನ್ನು ಸ್ವೀಕರಿಸಿದರು‌.

ಈ ವೇಳೆ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ, ಅಪರ ಮುಖ್ಯ ಚುನಾವಣಾಧಿಕಾರಿಯಾದ ಕೂರ್ಮ ರಾವ್, ಸ್ವೀಪ್ ಮೇಲ್ವಿಚಾರಣಾ ಸಮಿತಿಯ ಅಧ್ಯಕ್ಷರಾದ ಕಾಂತರಾಜ್, ಬೆಂಗಳೂರು ಜಿಲ್ಲಾ ಸ್ವೀಪ್ ನೋಡಲ್ ಅಧಿಕಾರಿಯಾದ ಪ್ರತಿಭಾ ಸೇರಿದಂತೆ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

14 ಲೋಕಸಭಾ ಕ್ಷೇತ್ರಗಳಿಗೆ ಕಾಂಗ್ರೆಸ್‌ನಿಂದ ಹೆಚ್ಚುವರಿ ಉಸ್ತುವಾರಿ ಸಚಿವರ ನೇಮಕ

ಕರ್ನಾಟಕದ ಎರಡನೇ ಹಂತದ ಚುನಾವಣೆ ನಡೆಯುವ ಲೋಕಸಭಾ ಕ್ಷೇತ್ರಗಳಿಗೆ ಸಚಿವರನ್ನು ಹೆಚ್ಚುವರಿ...

ತುಮಕೂರು | ಕೇಂದ್ರದಲ್ಲಿ ಇಂಡಿಯಾ ಒಕ್ಕೂಟಕ್ಕೆ ಅಧಿಕಾರ: ಗೃಹ ಸಚಿವ ಪರಮೇಶ್ವರ್

ದೇಶದ ಭವಿಷ್ಯವನ್ನು ನಿರ್ಧರಿಸುವ ಚುನಾವಣೆ ಇದಾಗಿದ್ದು, ರಾಜ್ಯದಲ್ಲಿ ಅತಿ ಹೆಚ್ಚು ಲೋಕಸಭಾ...

ಚೊಂಬು, ಗ್ಯಾಸ್ ಹೊರತುಪಡಿಸಿ ಶಾಂತಿಯುತ ಮತದಾನಕ್ಕೆ ಸಾಕ್ಷಿಯಾದ ಬೆಂಗಳೂರು

ಲೋಕಸಭಾ ಚುನಾವಣೆ ಹಿನ್ನೆಲೆ, ರಾಜ್ಯದ 14 ಕ್ಷೇತ್ರಗಳಿಗೆ ಏಪ್ರಿಲ್ 26ರಂದು ಮೊದಲ...

ಬರ ಪರಿಹಾರ | ಮೋದಿ ಶ್ಲಾಘಿಸುವ ಭರದಲ್ಲಿ ಮಾನ ಕಳೆದುಕೊಳ್ಳುತ್ತಿರುವ ಬಿಜೆಪಿ ನಾಯಕರು!

ಕೇಂದ್ರದಿಂದ ಬರ ಪರಿಹಾರ ಘೋಷಣೆಯಾಗುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಅಭಿನಂದಿಸಿ ಬಿಜೆಪಿ...