ಬಿಗ್‌ಬಾಸ್‌ ಮಾಜಿ ಸ್ಪರ್ಧಿ ಪ್ರಶಾಂತ್ ಸಂಬರ್ಗಿಗೆ ಆ್ಯಸಿಡ್​​ ಬೆದರಿಕೆ; ದೂರು ದಾಖಲು

Date:

ಬಿಗ್‌ಬಾಸ್‌ ಮಾಜಿ ಸ್ಪರ್ಧಿ ಪ್ರಶಾಂತ್ ಸಂಬರ್ಗಿ ಅವರಿಗೆ ಆ್ಯಸಿಡ್​​ ಹಾಕುವುದಾಗಿ ಅಪರಿಚಿತರು ವಾಟ್ಸ್‌ಆಪ್​ ಮತ್ತು ಇ-ಮೇಲ್​ ಮೂಲಕ ಬೆದರಿಕೆ ಹಾಕಿದ್ದಾರೆ. ಈ ಬಗ್ಗೆ ಪ್ರಶಾಂತ್​ ಸಂಬರ್ಗಿ ಅವರು ಬೆಂಗಳೂರಿನ ಚೆನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್​ ಠಾಣೆಗೆ ದೂರು ನೀಡಿದ್ದಾರೆ.

ಅಮೆರಿಕ, ಕ್ರೊಯೇಷ್ಯಾ ಮುಂತಾದ ದೇಶಗಳ ವಾಟ್ಸ್‌ಆಪ್​ ಸಂಖ್ಯೆಗಳನ್ನು ಬಳಸಿ ಬೆದರಿಕೆ ಸಂದೇಶ ಕಳುಹಿಸಲಾಗಿದೆ. ಅಲ್ಲದೇ, ಇತ್ತಿಚೆಗೆ ವೈಟ್‌ಪೀಲ್ಡ್‌ನ ರಾಮೇಶ್ವರಂ ಕೆಫೆಯಲ್ಲಿ ನಡೆದ ಸ್ಪೋಟದ ಬಗ್ಗೆ ಉಲ್ಲೇಖ ಮಾಡಿ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ.

ಪ್ರಶಾಂತ್​ ಸಂಬರ್ಗಿ ಅವರ ಕುಟುಂಬದ ಫೋಟೋ ಕಳಿಸಿ, ‘ಟಾರ್ಗೆಟ್​’ ಎಂದು ಬರೆಯಲಾಗಿದೆ. ಪತ್ನಿ ಮತ್ತು ಮಕ್ಕಳನ್ನು ಕೂಡ ಬಲಿ ತೆಗೆದುಕೊಳ್ಳುವುದಾಗಿ ಬೆದರಿಕೆ ಸಂದೇಶ ಕಳುಹಿಸಲಾಗಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಗಾಳಿಯ ಗುಣಮಟ್ಟದಲ್ಲಿ ಸುಧಾರಣೆ; ಆದರೆ, ತಜ್ಞರ ಯೋಚನೆಯೇನು?

“ನನ್ನ ಕುಟುಂಬದವರ ಫೋಟೋ ಕಳುಹಿಸಿ ನನಗೆ ಬೆದರಿಕೆ ಸಂದೇಶ ಕಳುಹಿಸಲಾಗಿದೆ. ನನ್ನ ಮೊಬೈಲ್‌ ಹ್ಯಾಕ್ ಮಾಡಿ ಅದರಲ್ಲಿನ ಖಾಸಗಿ ಮಾಹಿತಿ ಕದಿಯಲಾಗಿದೆ. ವೈಯಕ್ತಿಕ ಫೋಟೋ, ಕಾಲ್​ ರೆಕಾರ್ಡ್, ಎಸ್​ಎಂಎಸ್​ ಹಾಗೂ ಇಮೇಲ್​ಗಳನ್ನು ಟ್ರಾನ್ಸ್​ಫರ್​ ಮಾಡಲಾಗಿದೆ. ಮಾರ್ಚ್‌ 10ರ ಮಧ್ಯರಾತ್ರಿಯಿಂದ ಈಗ ನೀಡಿರುವ ಮೊಬೈಲ್ ಸಂಖ್ಯೆಗಳಿಂದ ಬೆದರಿಕೆ ಸಂದೇಶ ಬರುತ್ತಿದೆ. ಬೆದರಿಕೆ ಹಾಕಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು. ನಮಗೆ ರಕ್ಷಣೆ ನೀಡಬೇಕು” ಎಂದು ಪ್ರಶಾಂತ್​ ಸಂಬರ್ಗಿ ಅವರು ದೂರಿನಲ್ಲಿ ಮನವಿ ಮಾಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಆ್ಯಂಬುಲೆನ್ಸ್ ಚಾಲಕನ ಅಚಾತುರ್ಯ: ಸರಣಿ ಅಪಘಾತ

ಆ್ಯಂಬುಲೆನ್ಸ್ ಚಾಲಕನ ಅಚಾತುರ್ಯದಿಂದ ಬ್ಯಾಟರಾಯನಪುರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಗುಡ್ಡದಹಳ್ಳಿ...

ಕೋಲಾರ | ಇವಿಎಂ ಮೆಷಿನ್ ಸಾಗಿಸುತ್ತಿದ್ದ ವಾಹನದ ಟೈರ್ ಬ್ಲಾಸ್ಟ್: ಪೊಲೀಸ್ ಬಂದೋಬಸ್ತ್

ಮುಳಬಾಗಿಲಿನಿಂದ ಕೋಲಾರದ ಸ್ಟ್ರಾಂಗ್‌ ರೂಮ್‌ಗೆ ಇವಿಎಂ ಮೆಷಿನ್‌ಗಳನ್ನು ಸಾಗಾಟ ಮಾಡುತ್ತಿದ್ದ ಕ್ಯಾಂಟರ್...

ರಾಯಚೂರು | ಅರೆಬೆಂದ ಊಟ ಸೇವಿಸಿ ವಸತಿ ನಿಲಯದ ವಿದ್ಯಾರ್ಥಿನಿಯರು ಅಸ್ವಸ್ಥ

ಅಂಬೇಡ್ಕರ್ ವಸತಿ ನಿಲಯವೊಂದರಲ್ಲಿ ಅರೆಬೆಂದ ಊಟ ಸೇವಿಸಿ 24 ವಿದ್ಯಾರ್ಥಿನಿಯರು ಅಸ್ವಸ್ಥರಾಗಿರುವ...