ಮಾಜಿ ಸಚಿವ ಕೆ.ಗೋಪಾಲಯ್ಯಗೆ ಕೊಲೆ ಬೆದರಿಕೆ: ಆರೋಪಿ ಪೊಲೀಸರ ವಶಕ್ಕೆ

Date:

ಬಿಜೆಪಿ ಶಾಸಕ ಕೆ.ಗೋಪಾಲಯ್ಯ ಅವರಿಗೆ ಜೀವ ಬೆದರಿಕೆ ಹಾಕಿದ ಆರೋಪದ ಮೇಲೆ ಮಾಜಿ ಕಾರ್ಪೊರೇಟರ್ ಪದ್ಮರಾಜು ವಿರುದ್ಧ ಬೆಂಗಳೂರಿನ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ.

- Advertisement -

ಬೆಂಗಳೂರಿನ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಗೆ ಶಾಸಕ ಕೆ.ಗೋಪಾಲಯ್ಯ ಅವರು ದೂರು ನೀಡಿದ್ದಾರೆ. ”ಮಂಗಳವಾರ ರಾತ್ರಿ 11 ಗಂಟೆಗೆ 9632555537 ಮೊಬೈಲ್ ಮುಖಾಂತರ ಪದ್ಮರಾಜು ಕರೆ ಮಾಡಿ, ಅವಾಚ್ಯ ಶಬ್ದಗಳಿಂದ ನಿಂದಿಸಿ ಕೊಲೆ ಬೆದರಿಕೆ ಹಾಕಿದ್ದಾರೆ. ನನಗೆ ಹಣ ಕೊಡಬೇಕು, ಕೊಡದಿದ್ದರೆ ನಿಮ್ಮನ್ನೂ ನಿಮ್ಮ ಕುಟುಂಬವನ್ನು ಕೊಲ್ಲದೆ ಬಿಡುವುದಿಲ್ಲ. ವಿಧಾನಸೌಧಕ್ಕೆ ಹೋಗುವಾಗ ಕೊಲ್ತೀನಿ, ಇಲ್ಲ ಮನೆಯೊಳಗೆ ಬಂದು ಕೊಲೆ ಮಾಡ್ತೀನಿ ಎಂದು ಕೊಲೆ ಬೆದರಿಕೆ ಹಾಕಿದ್ದಾರೆ” ಎಂದು ದೂರು ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

”ಪದ್ಮರಾಜು​​ ಇದಕ್ಕೂ ಮೊದಲು ಬೇರೆ ಶಾಸಕರಿಗೆ ಕೊಲೆ ಬೆದರಿಕೆ ಹಾಕಿದ್ದಾರೆ. ಕೊಲೆ ಬೆದರಿಕೆ ಹಾಕಿರುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ಪರಮೇಶ್ವರ್ ಅವರಿಗೆ ದೂರು ನೀಡುತ್ತೇನೆ. ಪದ್ಮರಾಜುವನ್ನು ಗಡಿಪಾರು ಮಾಡುವಂತೆ ಆಗ್ರಹಿಸುತ್ತೇನೆ. ಪದ್ಮರಾಜು ಮಗಳಿಗೆ ನಾನೇ ಕೆಲಸ ಕೊಡಿಸಿದ್ದೆ. ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಆತ ಆಡುವ ಮಾತುಗಳನ್ನು ಕೇಳಲು ಸಾಧ್ಯವಿಲ್ಲ. ಕೆಟ್ಟ ಪದಗಳಿಂದ ನಿಂದಿಸಿದ್ದಾನೆ” ಎಂದು ಗೋಪಾಲಯ್ಯ ಹೇಳಿದ್ದಾರೆ. ವಿಧಾನಸಭೆ ಸ್ಪೀಕರ್​ಗೆ ಹಾಗೂ ಬೆಂಗಳೂರು ನಗರ ಪೊಲೀಸ್ ಕಮಿಷನರ್​ಗೂ ಶಾಸಕ ಕೆ.ಗೋಪಾಲಯ್ಯ ದೂರು ನೀಡಿದ್ದಾರೆ.

“ಬಸವೇಶ್ವರ ನಗರದ ಮಾಜಿ ಕಾರ್ಪೊರೇಟರ್‌ ಪದ್ಮರಾಜ್ ಕರೆ ಮಾಡಿ ಹಣಕ್ಕೆ ಬೇಡಿಕೆ ಇಟ್ಟಿದ್ದಾನೆ. ಹಣ ಕೊಡದೆ ಹೋದರೆ ಮನೆಯವರೂ ಸೇರಿ ಎಲ್ಲರನ್ನೂ ಕೊಲ್ಲುವುದಾಗಿ ಬೆದರಿಸಿದ್ದಾನೆ. ಅತ್ಯಂತ ಕೆಟ್ಟ ಪದಗಳಿಂದ ನನಗೆ ನನ್ನ ಕುಟುಂಬದವರಿಗೆ ನಿಂದನೆ ಮಾಡಿದ್ದಾನೆ. ಗೂಂಡಾ ವರ್ತನೆ ತೋರಿದ್ದಾನೆ” ಎಂದು ಘಟನೆಯ ಬಗ್ಗೆ ಗೋಪಾಲಯ್ಯ ವಿವರಣೆ ನೀಡಿದ್ದಾರೆ.

“ಪದ್ಮರಾಜ್‌ಗೂ ನನಗೂ ಯಾವುದೇ ಹಣಕಾಸಿನ ವ್ಯವಹಾರಗಳಿಲ್ಲ. ನಾನೇ ಅವನಿಗೆ ಹಿಂದೆ ಸಾಕಷ್ಟು ಸಹಾಯ ಮಾಡಿದ್ದೇನೆ. ಅವನ ಮಗಳಿಗೆ ಕಾಲೇಜು ಸೀಟು, ಉದ್ಯೋಗಕ್ಕೆ ಸಹಾಯ ಮಾಡಿದ್ದೇನೆ. ಆದರೆ, ಈಗ ಅವನೇ ನನ್ನ ಕುಟುಂಬಕ್ಕೆ ಬೆದರಿಕೆ ಹಾಕಿದ್ದಾನೆ. ಅವನನ್ನು ಬಿಡಬಾರದು. ಸೂಕ್ತ ಕ್ರಮ ಕೈಗೊಳ್ಳಬೇಕು. ನನಗೆ ನನ್ನ ಕುಟುಂಬಕ್ಕೆ ಇನ್ನು ಮುಂದೆ ಯಾವುದೇ ರೀತಿಯ ಹಾನಿ ಅಥವಾ ತೊಂದರೆ ಉಂಟಾದರೆ ಪದ್ಮರಾಜು ಕಾರಣರಾಗಿರುತ್ತಾರೆ. ಈ ಸಂಬಂಧ ನಾನು ಫೆ.13 ರಂದು ರಾತ್ರಿ 11.30 ಗಂಟೆಗೆ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದೇನೆ” ಎಂದು ಗೋಪಾಲಯ್ಯ ಹೇಳಿದ್ದಾರೆ.

ಇದೀಗ ಪೊಲೀಸರು ಗೋಪಾಲಯ್ಯ ಅವರ ಮನೆಗೆ ಬಿಗಿ ಪೊಲೀಸ್ ಭದ್ರತೆ ವ್ಯವಸ್ಥೆ ಮಾಡಲಾಗಿದೆ.

ಈ ಸುದ್ದಿ ಓದಿದ್ದೀರಾ? ಅಯೋಧ್ಯೆಗೆ ಮೆಮು ರೈಲು ರವಾನೆ; ಕೋಲಾರ ಜನರ ಪರದಾಟ

ಜೀವ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕಾರ್ಪೊರೇಟರ್​​​​​​​​​​​​​​ ಪದ್ಮರಾಜ್​ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸದ್ಯ ಪದ್ಮರಾಜ್ ಹಾಗೂ ಅವರ ಬಳಿ ಇದ್ದ ಮೊಬೈಲ್‌ ಅನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ವಿಧಾನಮಂಡಲ ಅಧಿವೇಶನ ನಡೆಯುತ್ತಿದ್ದು, ಅಧಿವೇಶನ ನಡೆಯುತ್ತಿರುವ ಕಾರಣ ಸ್ಪೀಕರ್ ವ್ಯಾಪ್ತಿಯೊಳಗೆ ವಿಧಾನಸಭೆ ಸದಸ್ಯರು ಬರುತ್ತಾರೆ. ಈ ಹಿನ್ನಲೆಯಲ್ಲಿ ಬೆದರಿಕೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲು ಗೋಪಾಲಯ್ಯ ಅವರು ಸ್ಪೀಕರ್ ಯು.ಟಿ ಖಾದರ್ ಅವರಲ್ಲಿ ಮನವಿ ಮಾಡಿದ್ದಾರೆ.

ಮಾಜಿ ಸಚಿವ ಕೆ. ಗೋಪಾಲಯ್ಯಗೆ ಕೊಲೆ ಬೆದರಿಕೆ ಹಾಕಿದ ಆರೋಪಿ ಪದ್ಮರಾಜ್ ವಿರುದ್ಧ ಇಂದು ಸಂಜೆಯೊಳಗೆ ಕ್ರಮ ಕೈಗೊಳ್ಳಬೇಕು ಇಲ್ಲದಿದ್ದರೆ ಸ್ಥಳೀಯ ಇನ್ ಸ್ಪೆಕ್ಟರ್ ಅವರನ್ನು ಅಮಾನತು ಮಾಡಬೇಕು ಎಂದು ಸ್ಪೀಕರ್ ಯು.ಟಿ ಖಾದರ್ ಸೂಚಿಸಿದ್ದಾರೆ ಎನ್ನಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...

ಉಡುಪಿ | ಜನರ ಬಳಿಗೇ ಅಧಿಕಾರಿಗಳು ತೆರಳಿ ಸಮಸ್ಯೆ ಪರಿಹರಿಸಬೇಕು: ಗುರುರಾಜ್ ಶೆಟ್ಟಿ ಗಂಟಿಹೊಳೆ

ಪ್ರಜಾಸೇವಾ ಆಂದೋಲನ ಸಭೆಯು ಜನಪರ ಕಾಳಜಿಯ ಕಾರ್ಯಕ್ರಮವಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ...

ಉಡುಪಿ | ನಿವೇಶನ ರಹಿತರಿಂದ ನಿವೇಶನಕ್ಕಾಗಿ ಅರ್ಜಿ ಆಹ್ವಾನ

ಉಡುಪಿ ಜಿಲ್ಲೆಯ ಸಾಲಿಗ್ರಾಮ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಸ್ವಂತ ನಿವೇಶನ ಹೊಂದಿಲ್ಲದ...