ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ| ಇಬ್ಬರು ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ

Date:

ರಾಜ್ಯ ರಾಜಧಾನಿ ಬೆಂಗಳೂರಿನ ವೈಟ್‌ಫೀಲ್ಡ್‌ ಬಳಿಯಿರುವ ರಾಮೇಶ್ವರಂ ಕೆಫೆಯಲ್ಲಿ ನಡೆದ ಸ್ಪೋಟದ ಪ್ರಕರಣಕ್ಕೆ ಸಂಬಂಧಿಸಿದಂತೆ, ಇಬ್ಬರು ಪ್ರಮುಖ ಆರೋಪಿಗಳನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿ ಎನ್‌ಐಎ ವಿಶೇಷ ಕೋರ್ಟ್‌ ಸೋಮವಾರ ಆದೇಶ ಹೊರಡಿಸಿದೆ.

- Advertisement -

ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಅಬ್ದುಲ್ ಮತೀನ್ ಅಹ್ಮದ್ ತಾಹಾ (29) ಮತ್ತು ಮುಸ್ಸಾವಿರ್ ಹುಸೇನ್ ಶಝೀಬ್‌(30) ಬಂಧಿತ ಆರೋಪಿಗಳು. ಆರೋಪಿಗಳ ಎನ್‌ಐಎ ಕಸ್ಟಡಿ ಅಂತ್ಯದ ಹಿನ್ನೆಲೆ, ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಕೋರ್ಟ್​ಗೆ ಆರೋಪಿಗಳನ್ನು ಹಾಜರುಪಡಿಸಿದ್ದರು. ಹಾಗಾಗಿ, ಎನ್​ಐಎ ಕೋರ್ಟ್ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಒಬ್ಬರು ಆರೋಪಿಗಳನ್ನು ಎನ್‌ಐಎ ಅಧಿಕಾರಿಗಳು ಏ.12ರಂದು ಪಶ್ಚಿಮ ಬಂಗಾಳದ ಮೇದಿನಿಪುರದಲ್ಲಿ ಬಂಧಿಸಿ ಬೆಂಗಳೂರಿಗೆ ಕರೆತಂದಿದ್ದರು. ನಂತರ ವಿಶೇಷ ನ್ಯಾಯಾಲಯಕ್ಕೆ ಶಂಕಿತರನ್ನು ಹಾಜರುಪಡಿಸಿ 10 ದಿನಗಳ ಕಾಲ ಕಸ್ಟಡಿಗೆ ಪಡೆದಿದ್ದರು. ಆರೋಪಿಗಳ ಕಸ್ಟಡಿ ಅವಧಿ ಅಂತ್ಯವಾದ ಬಳಿಕ ಪುನಃ 7 ದಿನ ಕಸ್ಟಡಿಗೆ ಪಡೆಯಲಾಗಿತ್ತು. ಇದೀಗ, ಸೋಮವಾರ ಎನ್‌ಐಎ ಕಸ್ಟಡಿ ಅಂತ್ಯಗೊಂಡಿದೆ. ಹಾಗಾಗಿ ಎನ್‌ಐಎ ಅಧಿಕಾರಿಗಳು ಸೋಮವಾರ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.

ಈ ಸುದ್ದಿ ಓದಿದ್ದೀರಾ? ಮಾಜಿ ಸಿಎಂ ಎಸ್.ಎಂ ಕೃಷ್ಣ ಆಸ್ಪತ್ರೆಗೆ ದಾಖಲು, ಆರೋಗ್ಯ ಸ್ಥಿರ

ಏನಿದು ಪ್ರಕರಣ?

ಮಾರ್ಚ್ 1ರಂದು ಮಧ್ಯಾಹ್ನ 12:55 ರ ಸುಮಾರಿಗೆ ವೈಟ್‌ಫೀಲ್ಡ್‌ನ ಬಳಿ ಇರುವ ದಿ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಸಂಭವಿಸಿತ್ತು. ಘಟನೆಯಲ್ಲಿ ಕೆಫೆ ಸಿಬ್ಬಂದಿ, ಗ್ರಾಹಕರು ಸೇರಿದಂತೆ 9 ಜನರು ಗಾಯಗೊಂಡಿದ್ದರು. ಬಳಿಕ, ಪ್ರಕರಣದ ತನಿಖೆಯನ್ನು ಎನ್​ಐಎಗೆ ವಹಿಸಲಾಗಿತ್ತು. ಪ್ರಕರಣ ಸಂಬಂಧ ಹಲವೆಡೆ ಶೋಧ ನಡೆಸಿದ್ದ ಎನ್​ಐಎ ಅಧಿಕಾರಿಗಳು ಸುಮಾರು 40 ದಿನಗಳ ಬಳಿಕ ಕೋಲ್ಕೊತಾದಲ್ಲಿ ಪ್ರಮುಖ ಆರೋಪಿಗಳನ್ನು ಬಂಧಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ₹10 ಕೋಟಿಗೂ ಅಧಿಕ ಅವ್ಯವಹಾರ ಆರೋಪ; ಕಿರಿಯ ಅಭಿಯಂತರ ಅಮಾನತು

ಸಿಂಧನೂರು ಉಪವಿಭಾಗದ ಕಿರಿಯ ಅಭಿಯಂತರ ನಾಗರಾಜ ಪ್ರಭಾ ಅವರನ್ನು ₹10 ಕೋಟಿಗೂ...

ಕರಾವಳಿಯಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ: ಪರಿಶೀಲನೆಗೆ ಸಮಿತಿ ರಚನೆ

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಅಥವಾ ಶಾಶ್ವತ ಪೀಠ ಸ್ಥಾಪಿಸುವ ನಿಟ್ಟಿನಲ್ಲಿ ಪರಿಶೀಲನೆ...

ಕಲಬುರಗಿ | ಕನ್ನಡ ಅಧ್ಯಾಪಕರು ಸಂಘಟಿತರಾಗಿ ಭಾಷೆಯ ಉಳಿವಿಗೆ ಶ್ರಮಿಸಬೇಕು: ಪ್ರೊ. ಶಶಿಕಾಂತ ಉಡಿಕೇರಿ

ಕನ್ನಡ ಭಾಷೆಯ ಪೋಷಣೆ, ಉಳಿವು ಹಾಗೂ ಬೆಳವಣಿಗೆಗೆ ಕನ್ನಡ ಅಧ್ಯಾಪಕರು ಸಂಘಟಿತರಾಗಿ...

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...