ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ | ನಾಲ್ವರು ಶಂಕಿತರು ಪೊಲೀಸ್‌ ವಶಕ್ಕೆ

Date:

ರಾಜ್ಯ ರಾಜ್ಯಧಾನಿ ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸ್ಪೋಟ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ, ನಾಲ್ವರು ಶಂಕಿತರನ್ನು ಪೊಲೀಸರು ವಶಕ್ಕೆ ಪಡೆದ್ದಾರೆ. ನಾಲ್ವರನ್ನು ಶಂಕಿತರನ್ನು ಗುಪ್ತಚರ ಇಲಾಖೆ ಅಧಿಕಾರಿಗಳು ಅಜ್ಞಾತ ಸ್ಥಳದಲ್ಲಿ ವಿಚಾರಣೆ ನಡೆಸುತ್ತಿದ್ದಾರೆ.

- Advertisement -

ಮಾರ್ಚ್‌ 1ರಂದು ಮಧ್ಯಾಹ್ನ 1 ಗಂಟೆ ಸುಮಾರಿಗೆ ವೈಟ್ ಫೀಲ್ಡ್‌ನ ಕುಂದಲಹಳ್ಳಿ ಬಳಿಯ ಪ್ರಸಿದ್ಧ ಹೋಟೆಲ್‌ ರಾಮೇಶ್ವರಂ ಕೆಫೆಯಲ್ಲಿ ನಿಗೂಢ ಸ್ಫೋಟ ಸಂಭವಿಸಿದೆ. ಘಟನೆ ಹಿಂದೆ ಹಲವು ಅನುಮಾನಗಳು ಹುಟ್ಟಿಕೊಂಡಿವೆ. ಸದ್ಯ ನಾನಾ ತನಿಖಾ ತಂಡಗಳು ರಾತ್ರಿಯೆಲ್ಲಾ ತನಿಖೆ ನಡೆಸಿ ಮಾಹಿತಿ ಕಲೆ ಹಾಕಿದ್ದಾರೆ. ಸದ್ಯ ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

ಸದ್ಯ ಪೊಲೀಸರಿಗೆ ಸಿಸಿಟಿವಿ ದೃಶ್ಯಾವಳಿಗಳು ಲಭಿಸಿದ್ದು, ಓರ್ವ ಶಂಕಿತ ಮುಖಕ್ಕೆ ಮಾಸ್ಕ್, ಕಣ್ಣಿಗೆ ಕೂಲಿಂಗ್ ಗ್ಲಾಸ್, ವೈಟ್​ ಕ್ಯಾಪ್​ ಧರಿಸಿ, ಕಪ್ಪು ಬಣ್ಣದ ಬ್ಯಾಗ್ ಹೆಗಲಿಗೆ ಹಾಕಿಕೊಂಡು ರಾಮೇಶ್ವರಂ ಕೆಫೆಗೆ ಬಂದಿದ್ದಾನೆ. ಕೆಫೆಯಲ್ಲಿ ಟೋಕನ್ ತೆಗೆದುಕೊಂಡು ರವೆ ಇಡ್ಲಿ ತಿಂದು ತಾನು ತಂದಿದ್ದ ಬ್ಯಾಗ್‌ ಅನ್ನು ಕೆಫೆಯ ಬೇಸಿನ್ ಬಳಿ ಇಟ್ಟು ಹೋಗುತ್ತಾ ವಾಚ್​ನಲ್ಲಿ ಟೈಂ ನೋಡಿ ಹೋಗಿದ್ದಾನೆ. ಕೆಫೆಯಿಂದ ಹೊರಗೆ ಬಂದು ಎಡಭಾಗಕ್ಕೆ ಹೋಗಿದ್ದಾನೆ. ಆತ ಹೋದ ಸುಮಾರು ಒಂದು ಗಂಟೆಯ ಬಳಿಕ ಬಾಂಬ್​ ಸ್ಫೋಟವಾಗಿದೆ. ಇದೆಲ್ಲ ಸಿಸಿಟಿವಿ ದೃಶ್ಯಾವಳಿಗಳಲ್ಲಿ ಸೆರೆಯಾಗಿದೆ. ತಲೆ ಮೇಲೆ ಕ್ಯಾಪ್​​​​ ಹಾಕಿಕೊಂಡಿರುವ ಶಂಕಿತ ವ್ಯಕ್ತಿಯಿಂದ ಬಾಂಬ್​​​ ಇಡಲಾಗಿದೆ ಎಂಬ ಅನುಮಾನ ವ್ಯಕ್ತವಾಗಿದೆ.

ಇನ್ನೊಬ್ಬ ವ್ಯಕ್ತಿ ಬೈಕ್‌ನಲ್ಲಿ ತೆರಳಿದ್ದಾನೆ ಎನ್ನಲಾಗಿದೆ. ಅನುಮಾನ ಬಂದ ವ್ಯಕ್ತಿಗಳನ್ನು ಪೊಲೀಸರು ವಿಚಾರಣೆ ಮಾಡುತ್ತಿದ್ದಾರೆ ಎನ್ನಲಾಗಿದೆ.

ಘಟನೆ ಕುರಿತು ತನಿಖೆ ನಡೆಸುತ್ತಿರುವ ಪೊಲೀಸರು ಕಾನೂನು ಬಾಹಿರ ಚಟುವಟಿಕೆ ಕಾಯ್ದೆ (ಯುಎಪಿಎ) ಮತ್ತು ಸ್ಫೋಟಕ ವಸ್ತುಗಳ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಶಂಕಿತ ಬಾಂಬರ್​ಗಾಗಿ ತೀವ್ರ ಹುಡುಕಾಟ ನಡೆಸುತ್ತಿರುವ ಪೊಲೀಸರು ಆತನನ್ನು ಪತ್ತೆ ಹಚ್ಚಲು ಎಂಟು ತಂಡಗಳನ್ನು ರಚಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ, ನಾಲ್ವರು ಶಂಕಿತರನ್ನು ವಶಕ್ಕೆ ಪಡೆದಿರುವ ಗುಪ್ತಚರ ಇಲಾಖೆಯ ಅಧಿಕಾರಿಗಳು ಅಜ್ಞಾತ ಸ್ಥಳದಲ್ಲಿ ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ರಾಮೇಶ್ವರಂ ಕೆಫೆ ಸ್ಪೋಟ; ಎಲ್ಲ ಆಯಾಮಗಳಲ್ಲಿ ತನಿಖೆಗೆ ಮುಂದಾದ ಪೊಲೀಸರು

”ರಾಮೇಶ್ವರಂ ಕೆಫೆ ಘಟನೆಗೆ ಸಂಬಂಧಿಸಿದಂತೆ, ಪೊಲೀಸ್ ತನಿಖೆ ಕ್ಷಿಪ್ರ ಗತಿಯಲ್ಲಿ ನಡೆಯುತ್ತಿದೆ. ಘಟನಾ ಸ್ಥಳದಲ್ಲಿ ದೊರೆತ ಕುರುಹುಗಳ ಆಧಾರದ ಮೇಲೆ ಅನೇಕ ಪೊಲೀಸ್ ತಂಡಗಳು ಬೇರೆ ಬೇರೆ ಆಯಾಮಗಳಿಂದ ತನಿಖೆ ಕೈಗೊಳ್ಳುತ್ತಿವೆ. ಇದೊಂದು ಭದ್ರತಾ ವಿಷಯಕ್ಕೆ ಸಂಬಂಧಿಸಿದ ಸೂಕ್ಷ್ಮ ಪ್ರಕರಣವಾಗಿದೆ” ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ ಅವರು ಟ್ವೀಟ್ ಮಾಡಿದ್ದಾರೆ.

”ಮಾರ್ಚ್‌ 1 ರಂದು ಮಧ್ಯಾಹ್ನ 1 ಗಂಟೆಗೆ ಬಾಂಬ್ ಸ್ಪೋಟವಾಗಿದೆ. ಈ ಸ್ಪೋಟದಲ್ಲಿ ಹೋಟೆಲ್‌ ಸಿಬ್ಬಂದಿ ಹಾಗೂ ಗ್ರಾಹಕರು ಸೇರಿದಂತೆ ಹೋಟೆಲ್‌ನಲ್ಲಿದ್ದ ಒಟ್ಟು 10 ಮಂದಿ ಗಾಯಗೊಂಡಿದ್ದಾರೆ. ಯಾವುದೇ ಜೀವಹಾನಿಯಾಗಿರುವುದಿಲ್ಲ. ಹೆಚ್‌ಎಎಲ್‌ ಪೊಲೀಸ್‌ ಠಾಣೆಯಲ್ಲಿ ಯುಎಇಎಸ್‌ ಅಡಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ವಿಧಿ ವಿಜ್ಞಾನ ತಜ್ಞರು ಮತ್ತು ಬಾಂಬ್ ನಿಷ್ಕ್ರಿಯ ದಳದವರು ಭೇಟಿ ನೀಡಿ ಪರಿಶೀಲನೆ ಕೈಗೊಂಡಿದ್ದಾರೆ” ಎಂದು ಬೆಂಗಳೂರು ನಗರ ಪೊಲೀಸ್‌ ಮಾಹಿತಿ ಮಾಡಿದೆ.

ಇನ್ನು ಈ ಘಟನೆ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜತೆಗೆ ಮಧ್ಯಾಹ್ನ 1 ಗಂಟೆಗೆ ಗೃಹಕಚೇರಿ ಕೃಷ್ಣಾದಲ್ಲಿ ಪೊಲೀಸ್ ಅಧಿಕಾರಿಗಳ ಸಭೆ ನಡೆಯಲಿದೆ. ಸಭೆಯಲ್ಲಿ ಪೊಲೀಸ್​ ಮಹಾ ನಿರ್ದೇಶಕ ಅಲೋಕ್​ ಮೋಹನ್​, ನಗರ ಪೊಲೀಸ್ ಆಯುಕ್ತ ದಯಾನಂದ್ ಸೇರಿ ಹಲವರು ಭಾಗಿಯಾಗಲಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR: ಕೊಡಗಿನ ಬ್ಯಾಡಗೊಟ್ಟದಲ್ಲಿ 66 ಮುಸ್ಲಿಂ ಮತಗಳ ಅಳಿಸುವಿಕೆಗೆ Form-7 ಅರ್ಜಿ

ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯ ಸಂದರ್ಭದಲ್ಲಿ ಮತದಾರರ...

ಅ.4ರಿಂದ ವಿಜಯಪುರ – ತಿರುಪತಿ ದಸರಾ ಎಕ್ಸ್‌ಪ್ರೆಸ್ ರೈಲು ಸೇವೆ ಆರಂಭ

ದಸರಾ ಹಬ್ಬದ ಹಿನ್ನೆಲೆಯಲ್ಲಿ ತಿರುಪತಿ–ವಿಜಯಪುರ ನಡುವೆ ಪ್ರಯಾಣಿಕರ ಅನುಕೂಲಕ್ಕಾಗಿ ಸಾಪ್ತಾಹಿಕ ವಿಶೇಷ...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ ಮತ್ತು ಮೇಕೆ

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು...

ವಿಜಯಪುರ | ರೂ. 2,500 ಸಬ್ಸಿಡಿಗೆ ವಿರೋಧ: ಸರ್ಕಾರಕ್ಕೆ ದೇಣಿಗೆ ಸಂಗ್ರಹಿಸಿ ಕೊಟ್ಟ ರೈತರು!

ಭೀಕರ ಬರದಿಂದ ನಲುಗಿರುವ ರೈತರಿಗೆ ರಾಜ್ಯ ಸರ್ಕಾರ ಘೋಷಿಸಿರುವ ₹2,500 ಇನ್‌ಪುಟ್...