ಬೆಂಗಳೂರಿನ ವೈಟ್‌ಫೀಲ್ಡ್‌ನಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ, ಬೆಂಗಳೂರಿನ ನಾಲ್ಕು ಕಡೆ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ರಾಮೇಶ್ವರಂ ಕೇಫೆಯಲ್ಲಿ ಬಾಂಬ್ ಸ್ಫೋಟ ನಡೆಸಿದ್ದವರ ಜೊತೆ ಸಂಪರ್ಕ ಹೊಂದಿದ್ದ ಹಿನ್ನೆಲೆ ಈ ದಾಳಿ ನಡೆದಿದೆ. ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ ಮತ್ತು ಬನಶಂಕರಿಯಲ್ಲಿ ಎನ್‌ಐಎ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ಕೊಯಮತ್ತೂರಿನ ವೈದ್ಯರಾದ ಜಾಫರ್ ಇಕ್ಬಾಲ್ ಮತ್ತು ನಯನ್ ಸಾದಿಕ್ ಮನೆಗಳ ಮೇಲೆ ದಾಳಿ ನಡೆಸಿದೆ ಎಂದು ಮೂಲಗಳು ತಿಳಿಸಿವೆ.
ಕಾರ್ಯಾಚರಣೆ ವೇಳೆ ಎನ್‌ಐಎ ಅಧಿಕಾರಿಗಳು ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎ ಅಧಿಕಾರಿಗಳು ಕೊಯಮುತ್ತೂರು ಮತ್ತು ಬೆಂಗಳೂರು ಸೇರಿದಂತೆ 11 ಕಡೆ ದಾಳಿ ನಡೆಸಿದ್ದಾರೆ.
ಏನಿದು ಪ್ರಕರಣ?
ಮಾರ್ಚ್ 1 ರಂದು ಮಧ್ಯಾಹ್ನ 12:55 ರ ಸುಮಾರಿಗೆ ಬೆಂಗಳೂರಿನ ವೈಟ್‌ಫೀಲ್ಡ್‌ನಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟಿಸಲಾಗಿತ್ತು.
ಈ ಸುದ್ದಿ ಓದಿದ್ದೀರಾ? ರಾಜ್ಯದ 5, 8 ಹಾಗೂ 9ನೇ ತರಗತಿಯ ಎಲ್ಲ ವಿದ್ಯಾರ್ಥಿಗಳು ಪಾಸ್
ಈ ಕೃತ್ಯ ಎಸಗಿದ ಆರೋಪಿಗಳಾದ ಮೊಹಮ್ಮದ್ ಮತೀನ್ ಮತ್ತು ಮುಸಾವಿರ್ ಹುಸೇನ್ ಅನ್ನು ಎನ್‌ಐಎ ಅಧಿಕಾರಿಗಳು ಈ ಘಟನೆ ನಡೆದ 43 ದಿನಗಳ ಬಳಿಕ ಪಶ್ಚಿಮ ಬಂಗಾಳದಲ್ಲಿ ಬಂಧಿಸಿದ್ದಾರೆ.