ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ | ಬೆಂಗಳೂರಿನ ನಾಲ್ಕು ಕಡೆ ದಾಳಿ ನಡೆಸಿದ ಎನ್​ಐಎ ಅಧಿಕಾರಿಗಳು

Date:

ಬೆಂಗಳೂರಿನ ವೈಟ್‌ಫೀಲ್ಡ್‌ನಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಬಾಂಬ್​​​ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ, ಬೆಂಗಳೂರಿನ ನಾಲ್ಕು ಕಡೆ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಅಧಿಕಾರಿಗಳು ದಾಳಿ ನಡೆಸಿದ್ದಾರೆ.

- Advertisement -

ರಾಮೇಶ್ವರಂ ಕೇಫೆಯಲ್ಲಿ ಬಾಂಬ್​​ ಸ್ಫೋಟ ನಡೆಸಿದ್ದವರ ಜೊತೆ ಸಂಪರ್ಕ ಹೊಂದಿದ್ದ ಹಿನ್ನೆಲೆ ಈ ದಾಳಿ ನಡೆದಿದೆ. ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ ಮತ್ತು ಬನಶಂಕರಿಯಲ್ಲಿ ಎನ್‌ಐಎ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ಕೊಯಮತ್ತೂರಿನ ವೈದ್ಯರಾದ ಜಾಫರ್ ಇಕ್ಬಾಲ್ ಮತ್ತು ನಯನ್ ಸಾದಿಕ್ ಮನೆಗಳ ಮೇಲೆ ದಾಳಿ ನಡೆಸಿದೆ ಎಂದು ಮೂಲಗಳು ತಿಳಿಸಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಕಾರ್ಯಾಚರಣೆ ವೇಳೆ ಎನ್​ಐಎ ಅಧಿಕಾರಿಗಳು ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್​ಐಎ ಅಧಿಕಾರಿಗಳು ಕೊಯಮುತ್ತೂರು ಮತ್ತು ಬೆಂಗಳೂರು ಸೇರಿದಂತೆ 11 ಕಡೆ ದಾಳಿ ನಡೆಸಿದ್ದಾರೆ.

ಏನಿದು ಪ್ರಕರಣ?

ಮಾರ್ಚ್ 1 ರಂದು ಮಧ್ಯಾಹ್ನ 12:55 ರ ಸುಮಾರಿಗೆ ಬೆಂಗಳೂರಿನ ವೈಟ್​ಫೀಲ್ಡ್​ನಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟಿಸಲಾಗಿತ್ತು.

ಈ ಸುದ್ದಿ ಓದಿದ್ದೀರಾ? ರಾಜ್ಯದ 5, 8 ಹಾಗೂ 9ನೇ ತರಗತಿಯ ಎಲ್ಲ ವಿದ್ಯಾರ್ಥಿಗಳು ಪಾಸ್

ಈ ಕೃತ್ಯ ಎಸಗಿದ ಆರೋಪಿಗಳಾದ ಮೊಹಮ್ಮದ್ ಮತೀನ್ ಮತ್ತು ಮುಸಾವಿರ್ ಹುಸೇನ್​ ಅನ್ನು ಎನ್​ಐಎ ಅಧಿಕಾರಿಗಳು ಈ ಘಟನೆ ನಡೆದ 43 ದಿನಗಳ ಬಳಿಕ ಪಶ್ಚಿಮ ಬಂಗಾಳದಲ್ಲಿ ಬಂಧಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ₹10 ಕೋಟಿಗೂ ಅಧಿಕ ಅವ್ಯವಹಾರ ಆರೋಪ; ಕಿರಿಯ ಅಭಿಯಂತರ ಅಮಾನತು

ಸಿಂಧನೂರು ಉಪವಿಭಾಗದ ಕಿರಿಯ ಅಭಿಯಂತರ ನಾಗರಾಜ ಪ್ರಭಾ ಅವರನ್ನು ₹10 ಕೋಟಿಗೂ...

ಕರಾವಳಿಯಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ: ಪರಿಶೀಲನೆಗೆ ಸಮಿತಿ ರಚನೆ

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಅಥವಾ ಶಾಶ್ವತ ಪೀಠ ಸ್ಥಾಪಿಸುವ ನಿಟ್ಟಿನಲ್ಲಿ ಪರಿಶೀಲನೆ...

ಕಲಬುರಗಿ | ಕನ್ನಡ ಅಧ್ಯಾಪಕರು ಸಂಘಟಿತರಾಗಿ ಭಾಷೆಯ ಉಳಿವಿಗೆ ಶ್ರಮಿಸಬೇಕು: ಪ್ರೊ. ಶಶಿಕಾಂತ ಉಡಿಕೇರಿ

ಕನ್ನಡ ಭಾಷೆಯ ಪೋಷಣೆ, ಉಳಿವು ಹಾಗೂ ಬೆಳವಣಿಗೆಗೆ ಕನ್ನಡ ಅಧ್ಯಾಪಕರು ಸಂಘಟಿತರಾಗಿ...

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...