ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಕರ್ನಾಟಕದ ಬಳ್ಳಾರಿಯ ಶಬ್ಬೀರ್ ಎಂಬಾತನನ್ನು ಬಂಧಿಸಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ಪ್ರಕರಣದಲ್ಲಿ ಆತನನ್ನು ಇನ್ನೂ ವಿಚಾರಣೆ ನಡೆಸಲಾಗುತ್ತಿದೆ. ಸಿಸಿಟಿವಿಯಲ್ಲಿ ಸಿಕ್ಕಿಬಿದ್ದಿರುವ ವ್ಯಕ್ತಿ ಈತನೇ ಎಂಬುದು ಇನ್ನೂ ಖಚಿತವಾಗಿಲ್ಲ ಎಂದು ಮೂಲಗಳು ತಿಳಿಸಿವೆ.
ಬಳ್ಳಾರಿಯ ಕೌಲ್ ಬಜಾರ್ ನಿವಾಸಿ ಶಬ್ಬೀರ್‌ನನ್ನು ಮಾರ್ಚ್ 13ರ ಮುಂಜಾನೆ 4 ಗಂಟೆಗೆ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಹೆಚ್ಚಿನ ವಿಚಾರಣೆಗೆ ಬೆಂಗಳೂರಿಗೆ ಕರೆದುಕೊಂಡು ಬಂದಿದ್ದಾರೆ ಎನ್ನಲಾಗಿದೆ.
National Investigation Agency (NIA) has detained one Shabbir from Ballari in Karnataka in connection with Bengaluru’s Rameshwaram Cafe blast case.
He is still being questioned in the case. It is yet to be ascertained whether he is the same man caught on CCTV: Sources pic.twitter.com/ViWxQtoH6c
— ANI (@ANI) March 13, 2024
ಬೆಂಗಳೂರಿನ ವೈಟ್‌ಫೀಲ್ಡ್ ಬಳಿಯ ಕುಂದಲಹಳ್ಳಿರುವ ರಾಮೇಶ್ವರಂ ಕೆಫೆಯಲ್ಲಿ ಮಾರ್ಚ್ 1ರಂದು ಸ್ಪೋಟ ನಡೆಸಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ, ಶಂಕಿತನ ಪತ್ತೆಗಾಗಿ ಎನ್ಐಎ ಹಾಗೂ ಸಿಸಿಬಿ ಅಧಿಕಾರಿಗಳು ತೀವ್ರ ತಪಾಸಣೆ ನಡೆಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ರಾಮೇಶ್ವರಂ ಕೆಫೆಯಲ್ಲಿ ಸ್ಪೋಟ | ಶಂಕಿತನ ಪತ್ತೆಗಾಗಿ ನಾಲ್ಕು ಫೋಟೋ ಬಿಡುಗಡೆ ಮಾಡಿದ ಎನ್‌ಐಎ
ಅಲ್ಲದೇ, ಶಂಕಿತನನ್ನು ಹುಡುಕಿ ಕೊಟ್ಟವರಿಗೆ ₹10 ಲಕ್ಷ ನಗದು ಹಣ ನೀಡುವುದಾಗಿ ಎನ್‌ಐಎ ಘೋಷಿಸಿತ್ತು. ಜತೆಗೆ, ಶಂಕಿತನನ್ನು ಹುಡುಕಿ ಕೊಡಲು ನಾಗರಿಕರಿಗೆ ಅನುಕೂಲವಾಗಲು ಫೋಟೋ ಸೇರಿದಂತೆ ಶಂಕಿತ ವ್ಯಕ್ತಿ ಓಡಾಡಿದ ಸಿಸಿಟಿವಿ ದೃಶ್ಯಗಳನ್ನು ಬಿಡುಗಡೆ ಮಾಡಿತ್ತು.