ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ | ಶಂಕಿತರು ಹತ್ತು ದಿನ ಎನ್‌ಐಎ ವಶಕ್ಕೆ

Date:

ರಾಮೇಶ್ವರಂ ಕೆಫೆಯಲ್ಲಿ ಸ್ಪೋಟ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ, ಶಂಕಿತರನ್ನು ವಿಚಾರಣೆಗಾಗಿ ಎನ್ಐಎ ಹತ್ತು ದಿನ ವಶಕ್ಕೆ ಪಡೆದಿದೆ.

- Advertisement -

ಎನ್‌ಐಎ ಇಬ್ಬರು ಪ್ರಮುಖ ಆರೋಪಿಗಳನ್ನು ಶುಕ್ರವಾರ (ಏ.12) ಪಶ್ಚಿಮ ಬಂಗಾಳದ ಮಿಡ್ನಾಪುರ್‌ದಲ್ಲಿ ಬಂಧಿಸಿದೆ. ವಶಕ್ಕೆ ಪಡೆದ ಇಬ್ಬರು ಶಂಕಿತರನ್ನು ಎನ್​ಐಎ ಕೊಲ್ಕತ್ತಾದ ವಿಶೇಷ ಕೋರ್ಟ್ ಮುಂದೆ ಹಾಜರುಪಡಿಸಿ ಇಬ್ಬರನ್ನು ಟ್ರಾನ್ಸಿಟ್ ರಿಮ್ಯಾಂಡ್​ಗೆ ನೀಡುವಂತೆ ಮನವಿ ಮಾಡಿತ್ತು. ಅದರಂತೆ, ನ್ಯಾಯಾಲಯ 3 ದಿನಗಳ ಟ್ರಾನ್ಸಿಟ್‌ ರಿಮ್ಯಾಂಡ್​ಗೆ ಅನುಮತಿ ನೀಡಿತ್ತು. ಬಳಿಕ, ಹೆಚ್ಚಿನ ತನಿಖೆಗಾಗಿ ಅವರನ್ನು ಬೆಂಗಳೂರಿಗೆ ಕರೆದೊಯ್ಯಲು ಎನ್‌ಐಎಗೆ ಅನುಮತಿ ನೀಡಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಅದಂತೆ, ಎನ್‌ಐಎ ಅಧಿಕಾರಿಗಳು ಪ್ರಮುಖ ಆರೋಪಿ, ಬಂಧಿತ ಮತೀನ್‌ ತಾಹಾ ಮತ್ತು ಮುಸಾವಿರ್‌ ಹುಸೇನ್‌ನನ್ನು ಪಶ್ಚಿಮ ಬಂಗಾಳದಿಂದ ಬೆಂಗಳೂರಿಗೆ ಕರೆತಂದಿದ್ದಾರೆ.. ಏ.13ರ ಶನಿವಾರ ಕೋರಮಂಗಲದ ನ್ಯಾಯಾಧೀಶರ ನಿವಾಸದಲ್ಲಿ ಶಂಕಿತರನ್ನು ಎನ್‌ಐಎ ಹಾಜರುಪಡಿಸಿದೆ. ಆರೋಪಿಗಳನ್ನು ವಿಚಾರಣೆಗಾಗಿ ಹತ್ತು ದಿನ ವಶಕ್ಕೆ ನೀಡುವಂತೆ ನ್ಯಾಯಾಧೀಶರ ಎದುರು ಎನ್‌ಐಎ ಅಧಿಕಾರಿಗಳು ಮನವಿ ಮಾಡಿದ್ದು, ಅಧಿಕಾರಿಗಳ ಮನವಿಗೆ ನ್ಯಾಯಾಧೀಶರು ಒಪ್ಪಿಗೆ ಸೂಚಿಸಿದ್ದಾರೆ. ಮಡಿವಾಳದ ಇಂಟರಾಗೇಷನ್‌ ಸೆಲ್‌ನಲ್ಲಿ ಆರೋಪಿಗಳ ವಿಚಾರಣೆ ನಡೆಯಲಿದೆ.

ನಕಲಿ ವಿಳಾಸ ನೀಡಿದ್ದ ಶಂಕಿತರು

ದಿ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಇರಿಸಿ ಪರಾರಿಯಾಗಿದ್ದ ಮುಸಾವೀರ್ ಹುಸೇನ್ ಶಾಜೀಬ್ ಹಾಗೂ ಅಬ್ದುಲ್ ಮಥೀನ್ ಅಹಮದ್ ತಾಹಾ, ಪಶ್ಚಿಮ ಬಂಗಾಳದ ಹೋಟೆಲ್‌ವೊಂದರಲ್ಲಿ ಕೊಠಡಿ ಪಡೆಯಲು ಹಾಗೂ ತನಿಖಾ ಸಂಸ್ಥೆಯ ದಿಕ್ಕು ತಪ್ಪಿಸಲು ನಕಲಿ ಆಧಾರ್‌ ಕಾರ್ಡ್‌ಗೆ ಕಲಬುರಗಿ ವಿಳಾಸ ನಮೂದಿಸಿದ್ದರು ಎಂಬ ಮಾಹಿತಿ ತನಿಖೆಯಿಂದ ಪತ್ತೆಯಾಗಿದೆ.

ಕೋಲ್ಕತ್ತ ಮಹಾನಗರಕ್ಕೆ ಹೊಂದಿಕೊಂಡಿರುವ ಪೂರ್ವ ಮೇದಿನಿಪುರ ಜಿಲ್ಲೆಯ ಹೋಟೆಲ್‌ನಲ್ಲಿ ಮುಸಾವೀರ್ ಹಾಗೂ ಅಬ್ದುಲ್ ಮಥೀನ್ ತಂಗಿದ್ದರು. ಹೋಟೆಲ್‌ ಕೊಠಡಿಯಲ್ಲಿಯೇ ಇಬ್ಬರೂ ಎನ್‌ಐಎಗೆ ಸಿಕ್ಕಿಬಿದ್ದಿದ್ದರು.

ಶಂಕಿತ ಮತೀನ್‌ ಹಾಗೂ ಮುಸ್ಸಾವೀರ್‌ ಇಬ್ಬರೂ ನಕಲಿ ಆಧಾರ್‌ ಕಾರ್ಡ್‌ ತಯಾರಿಸಿಕೊಂಡಿದ್ದರು. ಕೋಲ್ಕತ್ತಾ, ಬೆಂಗಳೂರು, ಚೆನ್ನೈ ಸೇರಿದಂತೆ ಹೋದ ಕಡೆ ವಾಸಕ್ಕೆ ಕೊಠಡಿ ಬಾಡಿಗೆ ಪಡೆಯಲು ಈ ನಕಲಿ ಆಧಾರ್‌ ಕಾರ್ಡ್‌ ತೋರಿಸುತ್ತಿದ್ದರು.

ಕಲಬುರಗಿಯ ವರ್ದಾನಗರ ನಿವಾಸಿಯಾಗಿರುವ ಅನಮೂಲ ಕುಲಕರ್ಣಿ ಎಂಬ ಯುವಕನ ನಕಲಿ ಆಧಾರ‌ ಕಾರ್ಡ್​ ಆರೋಪಿಗಳ ಬಳಿ ಇತ್ತು. ಟೆಕ್ಕಿ ಅನಮೂಲ ಕುಲಕರ್ಣಿ ಸದ್ಯ ಬೆಂಗಳೂರಿನಲ್ಲಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಶಂಕಿತರಿಗೆ ಅನಮೂಲ ಕುಲಕರ್ಣಿ ಅವರ ಆಧಾರ ಕಾರ್ಡ್ ಸಿಕ್ಕಿದ್ದಾದರು ಹೇಗೆ? ಅನಮೂಲ ಕುಲಕರ್ಣಿ ಅವರ ಆಧಾರ ಕಾರ್ಡ್​​ ಅನ್ನು ಆರೋಪಿಗಳು ಹೇಗೆ ಪಡೆದರು?  ಈ ಬಗ್ಗೆ ಹಲವು ಆಯಾಮಗಳಲ್ಲಿ ಎನ್‌ಐಎ ತನಿಖೆ ನಡೆಸುತ್ತಿದೆ.

ಈ ಸುದ್ದಿ ಓದಿದ್ದೀರಾ? ರಾಜ್ಯದ ಹಲವೆಡೆ ಭಾರೀ ಮಳೆ | ಸಿಡಿಲಿಗೆ ವಿಜಯಪುರದಲ್ಲಿ ಮಹಿಳೆ ಸಾವು: ಶಿವಮೊಗ್ಗ, ಗದಗದಲ್ಲಿ ಕುರಿಗಳು ಬಲಿ

ಬೆಂಗಳೂರಿನ ಕುಂದಲಹಳ್ಳಿಯ ದಿ ರಾಮೇಶ್ವರಂ ಕೆಫೆ ಬಾಂಬ್‌ ಸ್ಫೋಟ ಪ್ರಕರಣದಲ್ಲಿ 43 ದಿನಗಳಿಂದ ತಲೆಮರೆಸಿಕೊಂಡಿದ್ದ ಇಬ್ಬರು ಶಂಕಿತರನ್ನು ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತಾ ಸಮೀಪ ಎನ್‌ಐಎ ಕಾರ್ಯಾಚರಣೆ ನಡೆಸಿ ಶುಕ್ರವಾರ ಮುಂಜಾನೆ ಬಂಧಿಸಿತ್ತು.

ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಮುಸಾವೀರ್ ಹುಸೇನ್ ಶಾಜಿಬ್‌ ಹಾಗೂ ಅಬ್ದುಲ್ ಮತೀನ್ ತಾಹಾ ಬಂಧಿತರು. ಈ ಪೈಕಿ ಮುಸಾವೀರ್‌ ಕೆಫೆಯಲ್ಲಿ ಬಾಂಬ್‌ ಇಟ್ಟಿದ್ದರೆ, ಮತೀನ್‌ ಇಡೀ ಪ್ರಕರಣದ ಮಾಸ್ಟರ್‌ಮೈಂಡ್‌ ಎಂದು ಎನ್‌ಐಎ ಮಾಹಿತಿ ನೀಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಅಕ್ರಮವಾಗಿ ಮನೆ ನೆಲಸಮ: 5 ಲಕ್ಷ ನಗದು, ಆಭರಣ ಕಳವು; ಇಬ್ಬರ ವಿರುದ್ಧ ಎಫ್‌ಐಆರ್

67 ವರ್ಷದ ವೃದ್ಧ ವ್ಯಾಪಾರಿಯೊಬ್ಬರ ಮನೆಯನ್ನು ಅಕ್ರಮವಾಗಿ ಧ್ವಂಸಗೊಳಿಸಿ, ರೂ. 5...

ದಸರಾ, ಅಭಿಮನ್ಯು ಬೀಳ್ಕೊಡುಗೆಗೆ ಗಾಯನದ ಸ್ಪರ್ಶ

ವಿಶ್ವವಿಖ್ಯಾತ ಮೈಸೂರು ದಸರಾ ಹಾಗೂ ದಸರಾ ಆನೆ ಅಭಿಮನ್ಯುವಿನ ಬೀಳ್ಕೊಡುಗೆಯನ್ನು ಒಳಗೊಂಡ...

ಹವಾಮಾನ ವೈಪರೀತ್ಯ: ಮುನ್ನೆಚ್ಚರಿಕೆ ವಹಿಸಿ-ಸಚಿವ ಪಿ.ಎಂ. ನರೇಂದ್ರಸ್ವಾಮಿ

ಹವಾಮಾನ ವೈಪರೀತ್ಯದಿಂದ ಮುಂದಿನ ಎರಡು-ಮೂರು ತಿಂಗಳಲ್ಲಿ ಗಂಭೀರ ಪರಿಣಾಮಗಳನ್ನು ಎದುರಿಸಬೇಕಾಗಬಹುದು. ಜನರು...

ಮುಂಡಗೋಡ, ಶಿರಸಿಯಲ್ಲಿ ಗಾಂಜಾ ಸೇವನೆ ಆರೋಪ; ಇಬ್ಬರ ವಿರುದ್ಧ ಪ್ರಕರಣ ದಾಖಲು

ಉತ್ತರ ಕನ್ನಡ: ಜಿಲ್ಲೆಯ ಮುಂಡಗೋಡ ಹಾಗೂ ಶಿರಸಿ ಪಟ್ಟಣದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ...