ಜೆಡಿಎಸ್‌ನಿಂದ ಎಚ್‌ಡಿಕೆ, ನಿಖಿಲ್‌ ಉಚ್ಚಾಟನೆ ಸುಳ್ಳು; ಇಬ್ರಾಹಿಂ ಸ್ಪಷ್ಟನೆ

Date:

ಜಾತ್ಯತೀತ ಜನತಾ ದಳ (ಜೆಡಿಎಸ್) ಪಕ್ಷದಿಂದ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಮತ್ತು ಅವರ ಪುತ್ರ ನಿಖಿಲ್ ಕುಮಾರಸ್ವಾಮಿಯವರನ್ನು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಅವರು ಉಚ್ಚಾಟಿಸಿದ್ದಾರೆಂದು ಪಕ್ಷದ ಲೆಟರ್‌ ಹೆಡ್‌ನಲ್ಲಿ ಪತ್ರವೊಂದನ್ನು ಹರಿಬಿಡಲಾಗಿದೆ.

- Advertisement -

ಸಿ.ಎಂ.ಇಬ್ರಾಹಿಂ ಅವರ ನಕಲಿ ಸಹಿಯನ್ನು ಒಳಗೊಂಡಿರುವ ಈ ಪತ್ರದಲ್ಲಿ, “ಜೆಡಿಎಸ್‌ ಪಕ್ಷವು ದಶಕಗಳಿಂದ ಜಾತ್ಯತೀತ ಸಿದ್ಧಾಂತವನ್ನು ಪಾಲಿಸುತ್ತಾ ಬಂದಿದೆ. ನಮ್ಮ ಪಕ್ಷದಲ್ಲಿಎಲ್ಲ ಜಾತಿ ಧರ್ಮಗಳ ನಾಯಕರು ಕಾರ್ಯಕರ್ತರು ಪಕ್ಷಕ್ಕಾಗಿ ದುಡಿದಿದ್ದಾರೆ. ಇತ್ತೀಚೆಗೆ ಜೆಡಿಎಸ್‌ ಪಕ್ಷದ ಶಾಸಕಾಂಗ ನಾಯಕ ಎಚ್ ಡಿ ಕುಮಾರಸ್ವಾಮಿ ಹಾಗೂ ಜೆಡಿಎಸ್‌ ಪಕ್ಷದ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಅವರು ಕೋಮುವಾದಿ ಬಿಜೆಪಿ ಪಕ್ಷದೊಂದಿಗೆ ಮೈತ್ರಿಯಾಗಿರುವುದು ಕಂಡು ಬಂದಿದ್ದು ಈ ತತ್ ಕ್ಷಣದಿಂದ ಹೆಚ್.ಡಿ.ಕುಮಾರಸ್ವಾಮಿ ಮತ್ತು ನಿಖಿಲ್ ಕುಮಾರಸ್ವಾಮಿ ಅವರನ್ನು ಈ ಕೂಡಲೇ ಪಕ್ಷದಿಂದ ಉಚ್ಚಾಟಿಸಲು ಪಕ್ಷ ತೀರ್ಮಾನಿಸಿದೆ” ಎಂದು ಬರೆಯಲಾಗಿದೆ. ಆದರೆ ಇದನ್ನು ಸಿಎಂ ಇಬ್ರಾಹಿಂ ತಳ್ಳಿಹಾಕಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಈ ಕುರಿತು ತಿಳಿಯಲು ದೂರವಾಣಿ ಮೂಲಕ ಸಿ.ಎಂ.ಇಬ್ರಾಹಿಂ ಅವರನ್ನು ಸಂಪರ್ಕಿಸಿದಾಗ, “ಈ ರೀತಿಯ ಯಾವುದೇ ನಿರ್ಧಾರವನ್ನು ಪಕ್ಷವು ತೆಗೆದುಕೊಂಡಿಲ್ಲ. ಸುಳ್ಳು ಸುದ್ದಿ ಹಬ್ಬಿಸಿದರೆ ಕ್ರಮ ಜರುಗಿಸಲಾಗುವುದು. ಶೀಘ್ರದಲ್ಲೇ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಲಾಗುವುದು” ಎಂದು ಸ್ಪಷ್ಟಪಡಿಸಿದ್ದಾರೆ.

May be an image of text that says "ಸಿ.ಎಂ. ಇಬ್ಾಹಿಂ ರಾಜ್ಯಾಧ್ಯಕ್ಷರು ಮಾಡಿ ೇಂದರ ಸಚಿವರು ಭಾರa ಕneಕ ಕರ್ನಾಟಕ ಪ್ರದೇಶ ಜನತಾದಳ (ಜಾತ್ಯತೀತ) ಜೆಸಿ ಭವರ, 19/1, ದ್ಾಳವಾರು 吃 ಕಿದಾರಿಗ್ರಳಿ ಬೆಂಗಸಿಜಿ-549 020 ಬಣ 099-23461984 ದಿನಾಂಕ 17/10/2023 ಪತ್ರಿಕಾ ಪ್ರಕಟಣೆ ಜೆಡಿಎಸ್ ಪಕ್ಷವು ದಶಕಗಳಿಂದ ಜಾತ್ಯಾತೀತ ಸಿದ್ದಾಂತವನ್ನು ಪಾಲಿಸುತ್ತಾ ಬಂದಿದ್ದು ನಮ್ಮ ಪಕ್ಷದಲ್ಲಿಎಲ್ಲ ಜಾತಿ ಧರ್ಮಗಳ ನಾಯಕರು ಕಾರ್ಯಕರ್ತರು ಪಕ್ಷಕ್ಕಾಗಿ ದುಡಿದಿದ್ದು ಇತ್ತೀಚೆಗೆ ಜೆಡಿಎಸ್ ಪಕ್ಷದ ಶಾಸಕಾಂಗ ನಾಯಕ ಎಚ್ ಡಿ ಕುಮಾರಸ್ವಾಮಿ ಹಾಗೂ ಜೆಡಿಎಸ್ ಪಕ್ಷದ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಕೋಮುವಾದಿ ಬಿಜೆಪಿ ಪಕ್ಷದೊಂದಿಗೆ ಮೈತ್ರಿಯಾಗಿರುವುದು ಕಂಡು ಬಂದಿದ್ದು ಈ ತತ್ ಕ್ಷಣದಿಂದ ಹೆಚ್.ಡಿ ಕುಮಾರಸ್ವಾಮಿ ಮತ್ತು ನಿಖಿಲ್ ಕುಮಾರಸ್ವಾಮಿ ಅವರನ್ನು ಈ ಕೂಡಲೇ ಪಕ್ಷದಿಂದ ಉಚ್ಚಾಟಿಸಲು ಪಕ್ಷ ತೀರ್ಮಾನಿಸಿದೆ. (ಸಿ.ಎಂ ಇಬ್ರಾಹಿಂ) ಮಾನ್ಯ ಸಂಪಾದಕರು/ ಪ್ರತಿನಿಧಿಗಳು/ ಎಲೆಕ್ಟಾನಿಕ್ ಮಾಧ್ಯಮದವರು ಮನೆ ವಿಣಾಸ ಸಂ. ಬೆನ್ಸನ್ ಕ‍ුಸ ರಸ್ತೆ, ಬೆನ್‌ಸೆನ್ ಚೌಸ್, ಬೆಂಗಮೂರು-560 046"

ಜೆಡಿಎಸ್‌ನಲ್ಲಿ ಸಿಎಂ ಇಬ್ರಾಹಿಂ ಹಾಗೂ ಎಚ್‌ಡಿ ಕುಮಾರಸ್ವಾಮಿ ನಡುವೆ ತಿಕ್ಕಾಟ ನಡೆಯುತ್ತಿದೆ. ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳಬಾರದೆಂದು ಸಿ.ಎಂ. ಇಬ್ರಾಹಿಂ ಬಣ ಅಭಿಪ್ರಾಯಪಟ್ಟಿದೆ.

“ನಮ್ಮದೇ ಒರಿಜಿನಲ್‌ ಜೆಡಿಎಸ್‌, ನಾವು ಐಎನ್‌ಡಿಐಎ ಕೂಟಕ್ಕೆ ಬೆಂಬಲ ನೀಡ್ತೀವಿ” ಎಂದು ಜೆಡಿಎಸ್‌ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಹೇಳಿಕೆ ನೀಡಿದ್ದಾರೆ. ಇದರಿಂದ ಸಿಟ್ಟಿಗೆದ್ದಿರುವ ಕುಮಾರಸ್ವಾಮಿಯವರು, “ಅವರದೇ ಒರಿಜಿನಲ್‌ ಅಂತಾ ಬೋರ್ಡ್‌ ಹಾಕಿಕೊಳ್ಳಲಿ, ಅವರನ್ನು ಬೇಡ ಅಂದಿರೋರು ಯಾರು?” ಎಂದು ಪ್ರಶ್ನಿಸಿದ್ದಾರೆ.

ಬೆಂಗಳೂರಿನ ತಮ್ಮ ನಿವಾಸದ ಬಳಿ ಮಾಧ್ಯಮಗಳ ಜೊತೆ ಮಾತನಾಡಿರುವ ಕುಮಾರಸ್ವಾಮಿ, “ಸಿ.ಎಂ. ಇಬ್ರಾಹಿಂ ಅವರ ಮಾತಿಗೆಲ್ಲಾ ಯಾಕ್ರಿ ಸಿರಿಯಸ್‌ ಆಗಿ ಹೇಳಿಕೆ ಕೊಡಬೇಕು. ಅವರ ವಿಚಾರವನ್ನು ಯಾಕೆ ಗಂಭೀರವಾಗಿ ತಗೋತಿರಾ” ಎಂದು ಪ್ರಶ್ನಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರ MLC ಚುನಾವಣೆ: 5 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ ಪ್ರಶಾಂತ್ ಕಿಶೋರ್ ಜನ ಸುರಾಜ್ ಪಾರ್ಟಿ

ಬಿಹಾರ ವಿಧಾನ ಪರಿಷತ್ತಿನ (ಎಂಎಲ್‌ಸಿ) ಮುಂಬರುವ ಶಿಕ್ಷಕರ ಮತ್ತು ಪದವೀಧರ ಕ್ಷೇತ್ರಗಳ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ: ರಾಜಕೀಯ ಲಾಭ ಸಿಗುತ್ತಾ?

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು...

ರಾಜಸ್ಥಾನದ ಬುಡಕಟ್ಟು ಶಾಲೆಗಳ ದುಸ್ಥಿತಿ: ‘ಖಾಲಿ ಜಾಗ, ಕುಡಿಯುವ ನೀರಿಲ್ಲ’ – ಸಿಜೆಪಿ ಆಕ್ರೋಶ

ರಾಜಸ್ಥಾನದ ಬುಡಕಟ್ಟು (ಆದಿವಾಸಿ) ಪ್ರದೇಶಗಳಲ್ಲಿರುವ ಸರ್ಕಾರಿ ಶಾಲೆಗಳ ಶೋಚನೀಯ ಸ್ಥಿತಿಯನ್ನು ಖಂಡಿಸಿ...

ಚಿಕ್ಕಮಗಳೂರು | ಕಸ್ತೂರಿರಂಗನ್ ವರದಿಗೆ ಪಕ್ಷಾತೀತ ವಿರೋಧ

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಬಾಳೆಹೊನ್ನೂರಿನಲ್ಲಿ ಕಸ್ತೂರಿರಂಗನ್ ವರದಿ ಕುರಿತು ಸಾರ್ವಜನಿಕರ...