ಅನೈತಿಕ ಪೊಲೀಸ್‌ಗಿರಿಗೆ ರಾಜ್ಯದಲ್ಲಿ ಅವಕಾಶ ಇಲ್ಲ: ಸಿಎಂ ಸಿದ್ದರಾಮಯ್ಯ

Date:

ʻಸಂವಿಧಾನದ ಆಶಯದಂತೆ ಸರ್ವರನ್ನೂ ಒಳಗೊಳ್ಳುವ ಸರಕಾರ ನಮ್ಮದು. ಅನೈತಿಕ ಪೊಲೀಸ್‌ಗಿರಿಗೆ ರಾಜ್ಯದಲ್ಲಿ ಅವಕಾಶ ಇಲ್ಲ. ಈ ಬಗ್ಗೆ ಎಲ್ಲಾ ಪೊಲೀಸ್ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದ್ದೇನೆ. ಅಲ್ಲದೆ, ಪ್ರತಿಯೊಂದು ಸಮುದಾಯಗಳು ಅಭಿವೃದ್ಧಿಯಲ್ಲಿ ಪಾಲ್ಗೊಂಡಾಗ ಮಾತ್ರ ದೇಶದ ಪ್ರಗತಿ ಸಾಧ್ಯʼ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಬೆಂಗಳೂರಿನ ಯಲಹಂಕದ ಹಜ್ ಭವನದಲ್ಲಿ ಮಂಗಳವಾರ, ಕರ್ನಾಟಕ ರಾಜ್ಯ ಹಜ್ ಸಮಿತಿ ಆಯೋಜಿಸಿದ್ದ, 2023ನೇ ಸಾಲಿನಲ್ಲಿ ರಾಜ್ಯದಿಂದ ಹಜ್ ಯಾತ್ರೆಗೆ ತೆರಳುವ ಯಾತ್ರಾರ್ಥಿಗಳ ಮೊದಲ ವಿಮಾನ ಯಾತ್ರೆ ಉದ್ಘಾಟಿಸಿ ಅವರು ಮಾತನಾಡಿದರು.

‘ನಮ್ಮ ನಾಡು ಮತ್ತು ನಮ್ಮ ದೇಶ ಪ್ರಗತಿಯ ಮಾರ್ಗದಲ್ಲಿ ಸಾಗಲಿ, ನಮ್ಮ ನೆಲದಲ್ಲಿ ಶಾಂತಿ, ಸೌಹಾರ್ದದ ವಾತಾವರಣ ನೆಲೆಸಲಿ ಎಂದು ಪ್ರತಿಯೊಬ್ಬ ಹಜ್ ಯಾತ್ರಿಗಳು ಪ್ರಾರ್ಥಿಸಬೇಕುʼ ಎಂದು ಸಿದ್ದರಾಮಯ್ಯ ಮನವಿ ಮಾಡಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ರಾಜ್ಯದ 4 ಕಡೆ ಹಜ್ ಭವನ ನಿರ್ಮಾಣ: ಸಚಿವ ಜಮೀರ್ ಅಹ್ಮದ್

ಇದೇ ವೇಳೆ ಮಾತನಾಡಿದ ವಸತಿ ಮತ್ತು ವಕ್ಫ್​ ಸಚಿವ ಜಮೀರ್ ಅಹ್ಮದ್ ಖಾನ್, ಮುಂದಿನ ಐದು ವರ್ಷಗಳಲ್ಲಿ ರಾಜ್ಯದಲ್ಲಿ ನಾಲ್ಕು ಕಡೆಗಳಲ್ಲಿ ಹಜ್​ ಭವನ ನಿರ್ಮಾಣ ಮಾಡಲಾಗುವುದು ಎಂದು ​ಹೇಳಿದ್ದಾರೆ.

ʻಹಜ್ ಭವನದ ನವೀಕರಣಕ್ಕೆ ಸಿದ್ದರಾಮಯ್ಯ ಅವರು ಮೊದಲ ಬಾರಿ ಮುಖ್ಯಮಂತ್ರಿಯಾದಾಗ ಸರ್ಕಾರದ ಕೊನೆ ದಿನಗಳಲ್ಲಿ 5 ಕೋಟಿ ಘೋಷಿಸಿದರು. ಆದರೆ ನಂತರ ಬಂದ ಸರ್ಕಾರಗಳು ಈ ಹಣ ಕೊಡಲಿಲ್ಲ. ಮತ್ತೆ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಗೆದ್ದು ಬಂದು ಆ ಹಣ ನೀಡಿದ್ದಾರೆ. ಇದೇ ರೀತಿ ಸಿದ್ದರಾಮಯ್ಯ ಅವರು ಪ್ರಣಾಳಿಕೆಯಲ್ಲಿ ಘೋಷಿಸಿರುವಂತೆ ಸಮುದಾಯದ ಪ್ರಗತಿಗೆ 5 ಸಾವಿರ ಕೋಟಿ ಅನುದಾನವನ್ನು ತಮ್ಮ ಅವಧಿಯಲ್ಲಿ ನೀಡಬೇಕು. ಸಮಾಜದ ಹಿರಿಯರು ಈ ಜವಾಬ್ದಾರಿಯನ್ನು ನನಗೆ ವಹಿಸಿದ್ದಾರೆ. ನುಡಿದಂತೆ ನಡೆಯುವ ಸಿದ್ದರಾಮಯ್ಯ ಅವರು ಈ ಭರವಸೆಯನ್ನೂ ಈಡೇರಿಸುತ್ತಾರೆ ಎಂದರು.

ಅಮೀರೇ ಶರಿಯತ್ ಕರ್ನಾಟಕದ ಹಜರತ್ ಮೌಲಾನಾ ಸಗೀರ್ ಅಹಮದ್ ಖಾನ್ ರಶಾದಿ ಸಾಹೆಬ್ ಮತ್ತು ವಿಜಯಪುರದ ಅಲ್ ಹಶ್ಮಿ ಟ್ರಸ್ಟ್ ಅಧ್ಯಕ್ಷರಾದ ಮೌಲಾನಾ ಮಫ್ತಿ ಇಫ್ತಿಕಾರ್ ಅಹಮದ್ ಖಶ್ಮಿ ಸಾಹೆಬ್, ಕಂದಾಯ ಸಚಿವ ಕೃಷ್ಣಬೈರೇಗೌಡ, ವಸತಿ ಸಚಿವ ಜಮೀರ್ ಅಹಮದ್, ಸಚಿವ ರಹೀಂಖಾನ್ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಸೇರಿ ಹಲವು ಮುಖಂಡರು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರೈತರ ಪಾಲಿಗೆ ಸತ್ತು ಹೋದ ಕಾಂಗ್ರೆಸ್ ಸರ್ಕಾರ: ಎ ಎಸ್ ಪಾಟೀಲ ನಡಹಳ್ಳಿ ವಾಗ್ದಾಳಿ

ರಾಜ್ಯದ ಕಾಂಗ್ರೆಸ್ ಸರ್ಕಾರವು ರೈತರ ಪಾಲಿಗೆ ಸತ್ತು ಹೋಗಿದೆ. ಕೇಂದ್ರ ಸರಕಾರ...

ಹರೀಶ್ ಪೂಂಜಾ ಶಾಸಕರೆಂದ ಮಾತ್ರಕ್ಕೆ ಅವರ ಮೇಲಿನ ಆರೋಪ ಬಿಟ್ಟುಬಿಡಬೇಕಾ: ಸಿದ್ದರಾಮಯ್ಯ ಪ್ರಶ್ನೆ

ಶಾಸಕ ಹರೀಶ್ ಪೂಂಜಾ ಪೊಲೀಸರಿಗೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐಪಿಸಿ...

ಬೆಂಗಳೂರನ್ನು ಅವಹೇಳನ‌ ಮಾಡುತ್ತಿರುವುದು ನಮ್ಮವರೇ: ಬಿಜೆಪಿ ವಿರುದ್ಧ ಸಚಿವ ಪರಮೇಶ್ವರ್‌ ವಾಗ್ದಾಳಿ

ನಮ್ಮವರೇ ಬೆಂಗಳೂರನ್ನು ಅವಹೇಳನ‌ ಮಾಡುತ್ತಿದ್ದಾರೆ. ಹೊರ ದೇಶದವರಿಗೆ, ಹೊರ ಜನರಿಗೆ ಬೆಂಗಳೂರಿನ...

ಸರ್ಕಾರೇತರ ವಾಹನಗಳ ಮೇಲೆ ಸರ್ಕಾರಿ ಲಾಂಛನ, ಚಿಹ್ನೆ; 7 ವಿಶೇಷ ತಂಡ ರಚನೆ, ಕಾರ್ಯಾಚರಣೆಗಿಳಿದ ಇಲಾಖೆ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಾಹನಗಳನ್ನು ಹೊರತುಪಡಿಸಿ,...