ಹುಬ್ಬಳ್ಳಿ: ಪ್ರಲ್ಹಾದ್‌ ಜೋಶಿ ನಿವಾಸದೆದುರು ರೈತ ಹೋರಾಟಗಾರರ ಆಕ್ರೋಶ

Date:

Advertisements

ಮಹದಾಯಿ ಯೋಜನೆಗೆ ವನ್ಯಜೀವಿ ಮಂಡಳಿ ಅನುಮತಿ ನಿರಾಕರಣೆ ವಿಚಾರವಾಗಿ ಇಂದು ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ನಿವಾಸದೆದುರು ಮಹದಾಯಿ ಹೋರಾಟಗಾರ ರೈತರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಸಚಿವ ಪ್ರಲ್ಹಾದ್‌ ಜೋಶಿಯವರು ಮನೆಯಿಂದ ಹೊರ ಬರುತ್ತಿದ್ದಂತೆಯೇ ರೈತ ಮುಖಂಡ ಸುಭಾಷ ಚಂದ್ರ ಪಾಟೀಲ ಮತ್ತಿತರ ರೈತರು ಕಿಡಿಕಾರಿದರು.ಗೋವಾ ರಾಜ್ಯಕ್ಕೆ ವಿದ್ಯುತ್ ಯೋಜನೆಗೆ ಅನುಮತಿ ನೀಡಲಾಗಿದೆ. ಆದರೆ ಕರ್ನಾಟಕದ ಮಹದಾಯಿಗೆ ಅನುಮತಿ ನಿರಾಕರಿಸಲಾಗಿದೆ. ಕಾರಣ ಯೋಜನೆಗೆ ಅನುಮತಿ ಕೊಡುವ ಕುರಿತು ಸ್ಪಷ್ಟ ನಿರ್ಧಾರ ಪ್ರಕಟಿಸಬೇಕೆಂದು ರೈತರು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ| ವಿನೇಶ್‌ ಫೋಗಟ್‌ ಪಕ್ಷ ರಾಜಕಾರಣ ಮಾಡಿದರೆ ಆಕೆ ಎತ್ತಿದ ಪ್ರಶ್ನೆಗಳು ಸುಳ್ಳಾಗವು

Advertisements

ಈ ಸಂದರ್ಭದಲ್ಲಿ ಮಾತನಾಡಿದ ಕೇಂದ್ರ ಸಚಿವರು, ಬಿಜೆಪಿ ಹಾಗೂ ಎನ್‌ಡಿಎ ಮಹದಾಯಿ ಯೋಜನೆ ಜಾರಿಗೆ ಆರಂಭದಿಂದಲೂ ಪ್ರಯತ್ನ ಮಾಡುತ್ತಿದೆ. ಈವರೆಗೆ ಏನೇ ಪ್ರಗತಿ ಆಗಿದ್ದರೂ ಅದು ಬಿಜೆಪಿ ಸರಕಾರದ ಅವಧಿಯಲ್ಲಿ ಆಗಿದ್ದು, ಮುಂದೆಯೂ ಈ ಯೋಜನೆಯನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುವ ಕೆಲಸವನ್ನು ಮಾಡಲಿದ್ದೇವೆ ಎಂದು ಅಭಯ ನೀಡಿದರು.

“ಜುಲೈ 31ಕ್ಕೆ ನಡೆದ ವನ್ಯ ಜೀವಿ ಮಂಡಳಿ ಸಭೆಯ ಬಗ್ಗೆ ನಮಗೆ ಮಾಹಿತಿ ಇರಲಿಲ್ಲ. ಅಲ್ಲಿ ನಡೆದ ಚರ್ಚೆ ಸಂದರ್ಭದಲ್ಲಿ ಯೋಜನೆ ಬಗ್ಗೆ ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರದವರು ಪ್ರತಿಕ್ರಿಯೆ ಕೊಡಬೇಕಿತ್ತು. ಅವರು ಕೊಟ್ಟಿಲ್ಲ. ಯೋಜನೆಗೆ ಅರಣ್ಯ ಭೂಮಿ ಕೊಡಬೇಕೆಂಬ ಪ್ರಸ್ತಾವನೆ ಇರುವುದರಿಂದ ಹಾಗೂ ಪ್ರಕರಣ ನ್ಯಾಯಾಲಯದಲ್ಲಿ ಇರುವುದರಿಂದ ವಿಷಯವನ್ನು ವನ್ಯ ಜೀವಿ ಮಂಡಳಿಯವರು ಮುಂದೂಡಿದ್ದಾರೆ. ಆದರೆ, ಇದು ತಿರಸ್ಕೃತಗೊಂಡಿಲ್ಲ ಎಂದು ಸಚಿವ ಜೋಶಿ ಸ್ಪಷ್ಟಪಡಿಸಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

2 COMMENTS

  1. ಚುನಾವಣೆಯಲ್ಲಿ ಓಡಾಡಿ ಓಟು ಹಾಕಿ ಗೆಲ್ಲಿಸಿ ಈಗ ಆಕ್ರೋಶ ಮಾಡಿದರೆ,,ಅವನು ಕೇರ್ ಮಾಡುವನಾ,,

    • Yes idu saty vote haki gellisiddakkagi anubavisabekagide quater mattu quarter biryani tinnisi yuvakaranna Raitaranna Badavaranna daari tappisi jati Dharma jagalavanna hachi moj masti madata iruv idella arta aagalla ok

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಲಿತ ಸಂಘಟನೆಗಳ ಒಳಮೀಸಲಾತಿ ಪ್ರತಿಭಟನೆ; ಎಸಿ ಕಛೇರಿಗೆ ಬೀಗ

"ಸರ್ವೋಚ್ಚ ನ್ಯಾಯಾಲಯ ಆದೇಶ ನೀಡಿ ಒಂದು ವರ್ಷವಾದರೂ ಒಳಮೀಸಲಾತಿಯನ್ನು ಜಾರಿ ಮಾಡುವಲ್ಲಿ...

ಕರ್ನಾಟಕದಲ್ಲಿ ಒಂದು ವಾರ ಭಾರೀ ಮಳೆ: ಕರಾವಳಿ, ಒಳನಾಡಿನ ಜಿಲ್ಲೆಗಳಿಗೆ ರೆಡ್, ಆರೆಂಜ್ ಅಲರ್ಟ್

ಕರ್ನಾಟಕದಾದ್ಯಂತ ಆಗಸ್ಟ್ 17ರಿಂದ 21ರವರೆಗೆ ಭಾರೀ ಮಳೆಯ ಮುನ್ಸೂಚನೆಯನ್ನು ಭಾರತೀಯ ಹವಾಮಾನ...

ಪಿಓಪಿ ಮೂರ್ತಿಗಳ ವಿಸರ್ಜನೆಯಿಂದ ಜಲಚರ ಸಾವು : ಮಣ್ಣಿನ ಗಣಪತಿ ಪೂಜಿಸಲು ಸಚಿವ ಈಶ್ವರ ಖಂಡ್ರೆ ಮನವಿ

ಗಣೇಶ ಚತುರ್ಥಿಯಂದು ಮನೆಯಲ್ಲೂ ಪೂಜೆಗೊಳ್ಳುವ ಗಣೇಶ ಪರಿಸರ (ಮಣ್ಣಿನಿಂದ) ದಿಂದಲೇ ಹುಟ್ಟಿದ...

ರಾಜ್ಯದಲ್ಲಿ 31 ತಿಂಗಳಲ್ಲಿ 10,510 ಪೋಕ್ಸೋ ಪ್ರಕರಣ : 162 ಮಂದಿಗಷ್ಟೇ ಶಿಕ್ಷೆ!

ರಾಜ್ಯದಲ್ಲಿ ಅಪ್ರಾಪ್ತ ಹೆಣ್ಣು ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳು ದಿನೇದಿನೇ...

Download Eedina App Android / iOS

X