ಮೊದಲ ದಿನದ ಎಸ್ಎಸ್ಎಲ್‌ಸಿ ಪರೀಕ್ಷೆ; ಶೇ 98.48 ಹಾಜರಾತಿ

Date:

Advertisements
  • ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ದಾಖಲಾಗದ ಪರೀಕ್ಷಾ ಅಕ್ರಮ
  • ಪರೀಕ್ಷೆ ಬರೆದ ಯಾವ ವಿದ್ಯಾರ್ಥಿಯೂ ಡಿಬಾರ್ ಆಗಿಲ್ಲ

ರಾಜ್ಯಾದ್ಯಂತ ಇಂದಿನಿಂದ ಪ್ರಾರಂಭವಾದ ಎಸ್ಎಸ್ಎಲ್‌ಸಿ ಪರೀಕ್ಷೆಯು ಯಶಸ್ವಿಯಾಗಿ ಪೂರ್ಣಗೊಂಡಿದ್ದು, ರಾಜ್ಯದ ಯಾವ ಭಾಗದಲ್ಲಿಯೂ ಪರೀಕ್ಷಾ ಅಕ್ರಮ ದಾಖಲಾಗಿಲ್ಲ. ಜೊತೆಗೆ ಪರೀಕ್ಷೆ ಬರೆದ ಯಾವೊಬ್ಬ ವಿದ್ಯಾರ್ಥಿಯೂ ಡಿಬಾರ್‌ ಆಗದಿರುವುದು ಸಂತಸಕ್ಕೆ ಕಾರಣವಾಗಿದೆ.

ಇಂದು ನಡೆದ ಪರೀಕ್ಷೆಯಲ್ಲಿ ಪ್ರಥಮ ಭಾಷೆಯನ್ನಾಗಿ ಆಯ್ಕೆ ಮಾಡಿಕೊಂಡಿದ್ದ ವಿದ್ಯಾರ್ಥಿಗಳಲ್ಲಿ ಶೇ.98.48 ರಷ್ಟು ಹಾಜರಾಗಿ ಪರೀಕ್ಷೆಯನ್ನು ಯಶಸ್ವಿಗೊಳಿಸಿದ್ದಾರೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಪ್ರಕಟಿಸಿದೆ.

ಪ್ರಥಮ ಭಾಷೆ ಪರೀಕ್ಷೆಗೆ ಒಟ್ಟು 8,27,276 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಇದರಲ್ಲಿ 8,14,726 ವಿದ್ಯಾರ್ಥಿಗಳು ಹಾಜರಾದರೆ, 12,550 ವಿದ್ಯಾರ್ಥಿಗಳು ಗೈರಾಗಿದ್ದರು. ಅಂದರೆ, ಶೇ.98.48 ರಷ್ಟು ಮಕ್ಕಳು ಪರೀಕ್ಷೆ ಬರೆದಿದ್ದಾರೆ.

ಈ ಸುದ್ದಿ ಓದಿದ್ದೀರಾ? : ಬೆಂಗಳೂರು ವಿವಿಗೆ ‘ಐಎಸ್‌ಒ’ ಮಾನ್ಯತೆ

ಕಲಬುರಗಿಯಲ್ಲಿ ಕನಿಷ್ಟ ಹಾಜರಾತಿ ದಾಖಲಾದರೆ, (ಶೇ.95.51) ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಗರಿಷ್ಠ ಹಾಜರಾತಿ ದಾಖಲಾಗಿದೆ. ಇಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 1.45ರವರೆಗೆ ಪರೀಕ್ಷೆಯನ್ನು ನಿಗದಿ ಮಾಡಲಾಗಿತ್ತು. ಪ್ರಥಮ ಭಾಷೆಯನ್ನಾಗಿ ಆಯ್ಕೆ ಮಾಡಿಕೊಂಡಿದ್ದ ವಿದ್ಯಾರ್ಥಿಗಳು 125 ಅಂಕಗಳಿಗೆ ಪರೀಕ್ಷೆ ಬರೆದರು.

ಪರೀಕ್ಷೆ ಬರೆದ ವಿದ್ಯಾರ್ಥಿಗಳಲ್ಲಿ ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಸಂಸ್ಕೃತ ಭಾಷೆಯನ್ನು ಪ್ರಥಮ ಭಾಷೆಯನ್ನಾಗಿ ಆಯ್ಕೆ ಮಾಡಿಕೊಂಡಿದ್ದರು. ಮುಂದಿನ ಪರೀಕ್ಷೆಯು ಏ. 4ಕ್ಕೆ ನಡೆಯಲಿದೆ.

ಇಂದು ನಡೆದ ಪರೀಕ್ಷೆಯಲ್ಲಿ ರಾಜ್ಯದ ಯಾವ ಭಾಗದಲ್ಲಿಯೂ ಅಕ್ರಮ ಎಸಗಿಲ್ಲ ಹಾಗೂ ಯಾವುದೇ ವಿದ್ಯಾರ್ಥಿ ಡಿಬಾರ್‌ ಆಗಿಲ್ಲ ಎನ್ನುವುದು ವಿಶೇಷವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಕಾನೂನು ಸಲಹಾ ಕೇಂದ್ರ; ಸಮಾಜದ ಕಡೆಯ ವ್ಯಕ್ತಿಗೂ ಸಮಾನ ನ್ಯಾಯ: ನ್ಯಾ.ರವಿ ವಿ.ಹೊಸಮನಿ

"ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸಮಾನ ನ್ಯಾಯ ಒದಗಿಸುವ ದೃಷ್ಠಿಯಿಂದ ಜಿಲ್ಲೆಯ ಶಾಲಾ,...

ಕರ್ನಾಟಕ ಕುಂಬಾರ ಅಭಿವೃದ್ಧಿ ನಿಗಮ ಅಧ್ಯಕ್ಷರಾಗಿ ಡಾ.ಶ್ರೀನಿವಾಸನ್ ವೇಲು ನೇಮಕ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ (ಕೆಪಿಸಿಸಿ) ಡಾಕ್ಟರ್‌ಸ ಸೆಲ್‌ ಉಪಾಧ್ಯಕ್ಷರೂ ಆದ,...

ದಾವಣಗೆರೆ | ಅಂಬೇಡ್ಕರರ ಸಂವಿಧಾನದಿಂದ ದಲಿತರು,ಮಹಿಳೆಯರಿಗೆ ಸ್ವಾಭಿಮಾನದ ಬದುಕು: ಮಾಜಿ ಶಾಸಕ ರಾಮಪ್ಪ

"ಅಂಬೇಡ್ಕರರ ಹೋರಾಟದ ಫಲವಾಗಿ ದಲಿತರು, ಹಿಂದುಳಿದವರು, ಮಹಿಳೆಯರು ಸ್ವಾಭಿಮಾನದ ಬದುಕನ್ನು ಕಾಣಲು...

ದಾವಣಗೆರೆ | ಅತಿಥಿ ಉಪನ್ಯಾಸಕರ ಹಾಗೂ ಶೈಕ್ಷಣಿಕ ಗೊಂದಲ ಸರಿಪಡಿಸಲು ಪದವಿ ವಿದ್ಯಾರ್ಥಿಗಳ ತರಗತಿ ಬಹಿಷ್ಕಾರ

ಯುಜಿಸಿ ನಿಯಮ, ಅತಿಥಿ ಉಪನ್ಯಾಸಕರ ನೇಮಕಾತಿ ಗೊಂದಲದಿಂದ ಪದವಿ ವಿದ್ಯಾರ್ಥಿಗಳು ಶೈಕ್ಷಣಿಕ...

Download Eedina App Android / iOS

X