ಮೊದಲು ನೀರು ಕೊಟ್ಟು ಆಮೇಲೆ ಚುನಾವಣಾ ಪ್ರಚಾರಕ್ಕೆ ಬನ್ನಿ; ಕರವೇ ಟಿ.ಎ.ನಾರಾಯಣಗೌಡ

Date:

Advertisements

ಕಲ್ಯಾಣ ಕರ್ನಾಟಕ ಮತ್ತು ಕಿತ್ತೂರು ಕರ್ನಾಟಕ ಭಾಗಗಳಲ್ಲಿ ತೀವ್ರ ಬರಗಾಲದಿಂದ ಹನಿ ಹನಿ ನೀರಿಗೂ ಜನರು ಪರದಾಡುತ್ತಿರುವಾಗ ರಾಜಕೀಯ ಪಕ್ಷಗಳು ಚುನಾವಣಾ ಪ್ರಚಾರದಲ್ಲಿ ತೊಡಗಿವೆ. ಮೊದಲು ಜನರಿಗೆ ನೀರು ಕೊಡಿ, ಆಮೇಲೆ ನಿಮ್ಮ ಪ್ರಚಾರ ಮಾಡಿಕೊಳ್ಳಿ. ಇಲ್ಲದೇ, ಹೋದಲ್ಲಿ ಈ ಭಾಗದಲ್ಲಿ ತೀವ್ರ ಸ್ವರೂಪದ ಪ್ರತಿಭಟನೆ ಹಮ್ಮಿಕೊಳ್ಳಬೇಕಾಗುತ್ತದೆ” ಎಂದು ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಹೇಳಿದ್ದಾರೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಅವರು, “ಕಲಬುರಗಿ, ಯಾದಗಿರಿ, ಬೆಳಗಾವಿ, ವಿಜಯಪುರ, ಬಾಗಲಕೋಟೆ, ಹಾಗೂ ರಾಯಚೂರು ಸೇರಿದಂತೆ ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಬರ ತಾಂಡವವಾಡುತ್ತಿದೆ. ನದಿ, ಕೆರೆ, ಹಳ್ಳ, ಬಾವಿಗಳು ಬತ್ತಿಹೋಗಿವೆ. ಜನರಿಗೆ ಕುಡಿಯಲು ನೀರಿಲ್ಲ, ಜಾನುವಾರುಗಳು ನೀರು, ಮೇವು ಇಲ್ಲ. ಇಂಥ ಸನ್ನಿವೇಶದಲ್ಲಿ ನಮ್ಮ ಜನಪ್ರತಿನಿಧಿಗಳು ಮೊದಲು ಜನರ ಕಣ್ಣೀರು ಒರೆಸುವ ಕೆಲಸ ಮಾಡಬೇಕು” ಎಂದಿದ್ದಾರೆ.

“ಬಚಾವತ್ ಆಯೋಗದ ತೀರ್ಪಿನ ಪ್ರಕಾರ, ಮಹಾರಾಷ್ಟ್ರ ಸರ್ಕಾರ ರಾಜ್ಯದ ಪಾಲಿನ 15 ಟಿಎಂಸಿ ನೀರು ಕೊಟ್ಟಿಲ್ಲ. ಮಹಾರಾಷ್ಟ್ರದ ಜಲಾಶಯಗಳಲ್ಲಿ ನೀರಿದ್ದರೂ ಕೂಡ ನೀರು ಬಿಡುತ್ತಿಲ್ಲ. ಇಂತಹ ಸಂದರ್ಭದಲ್ಲಿ ನಮ್ಮ ರಾಜ್ಯದ ಎಲ್ಲ ಪಕ್ಷಗಳ ನಾಯಕರೂ ಒಂದಾಗಿ ಮಹಾರಾಷ್ಟ್ರ ಸರ್ಕಾರದ ಮೇಲೆ ಒತ್ತಡ ಹೇರಿ, ನೀರು ಬಿಡುಗಡೆಯಾಗುವಂತೆ ನೋಡಬೇಕಿತ್ತು. ಆದರೆ ಆ ಕೆಲಸ ಆಗುತ್ತಿಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Advertisements

“ಮಹಾರಾಷ್ಟ್ರದ ಕೊಯ್ನಾ ಜಲಾಶಯದಿಂದ ಕೃಷ್ಣಾ ನದಿಗೆ 2 ಟಿಎಂಸಿ ಹಾಗೂ ಉಜ್ಜಿನಿ ಜಲಾಶಯದಿಂದ ಭೀಮಾ ನದಿಗೆ 1 ಟಿಎಂಸಿ ನೀರು ಬಿಡುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಈಗಾಗಲೇ ಮಹಾರಾಷ್ಟ್ರ ಮುಖ್ಯಮಂತ್ರಿ ಏಕ್ ನಾಥ್ ಶಿಂಧೆಯವರಿಗೆ ಪತ್ರ ಬರೆದಿದ್ದಾರೆ. ಆದರೆ ಮಹಾರಾಷ್ಟ್ರ ಇದಕ್ಕೆ ಸ್ಪಂದಿಸುತ್ತಿಲ್ಲ” ಎಂದಿದ್ದಾರೆ.

“ಈ ಜಿಲ್ಲೆಗಳನ್ನು ಪ್ರತಿನಿಧಿಸುವ ಸಂಸತ್ ಸದಸ್ಯರಿಗೆ ಬಾಯಿ ಇಲ್ಲದಂತಾಗಿದೆ. ಅವರೆಲ್ಲ ಈಗ ಲೋಕಸಭಾ ಚುನಾವಣೆಯ ತಯಾರಿಯಲ್ಲಿ ತೊಡಗಿದ್ದಾರೆ. ರಾಜಕೀಯ ಪಕ್ಷಗಳ ಉನ್ನತ ನಾಯಕರು ಈ ಭಾಗದಿಂದಲೇ ಚುನಾವಣಾ ಪ್ರಚಾರ ನಡೆಸುತ್ತಿದ್ದಾರೆ. ಆದರೆ, ಜನರ ಕುಡಿಯುವ ನೀರಿನ ಬವಣೆಯ ಕುರಿತು ಚಕಾರ ಎತ್ತುತ್ತಿಲ್ಲ. ಇದನ್ನು ಸಹಿಸಿಕೊಂಡಿರಲು ಸಾಧ್ಯವಿಲ್ಲ” ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಚುನಾವಣಾ ಬಾಂಡ್ | ಲಾಭ ಮೀರಿ ರಾಜಕೀಯ ಪಕ್ಷಗಳಿಗೆ ದೇಣಿಗೆ ನೀಡಿವೆ ಕಂಪನಿಗಳು: ಯಾವ ಪಕ್ಷ ಎಷ್ಟು ಪಡೆದಿದೆ?

“ಎಲ್ಲ ರಾಜಕೀಯ ಪಕ್ಷಗಳ ಮುಖಂಡರು ಒಂದಾಗಿ ಮೊದಲು ಈ ಭಾಗದ ಜನರ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಬೇಕು. ಮಹಾರಾಷ್ಟ್ರದಿಂದ ನಮಗೆ ಬರಬೇಕಾಗಿರುವ ನೀರು ಬರುವಂತೆ ನೋಡಿಕೊಳ್ಳಬೇಕು. ಇಲ್ಲವಾದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ರಾಜಕಾರಣಿಗಳು ಚುನಾವಣಾ ಪ್ರಚಾರಕ್ಕೆ ಬರದಂತೆ ತಡೆಯಬೇಕಾಗುತ್ತದೆ” ಎಂದು ಎಚ್ಚರಿಕೆ ನೀಡಿದ್ದಾರೆ.

 

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಟ್ರಾಫಿಕ್ ದಂಡಗಳಿಗೆ ಶೇ. 50 ರಿಯಾಯಿತಿ: ಬೆಂಗಳೂರು ಸಂಚಾರ ಪೊಲೀಸರ ಘೋಷಣೆ

ಬೆಂಗಳೂರು ಸಂಚಾರ ಪೊಲೀಸರು (ಬಿಟಿಪಿ) ಗುರುವಾರ ಬಾಕಿ ಇರುವ ಟ್ರಾಫಿಕ್ ದಂಡಗಳ...

Download Eedina App Android / iOS

X