ಉಪನಗರ ರೈಲು ಯೋಜನೆಯ ಮೊದಲ ಮಾರ್ಗ 2025ರ ಡಿಸೆಂಬರ್‌ಗೆ ಪೂರ್ಣ: ಸಚಿವ ಎಂ ಬಿ ಪಾಟೀಲ್

Date:

Advertisements

ಬಿ ಎಸ್ ಆರ್ ಪಿ (ಬೆಂಗಳೂರು ಉಪನಗರ ರೈಲು ಯೋಜನೆ) ಮೊದಲ ಭಾಗವಾದ ಚಿಕ್ಕಬಾಣಾವರ-ಯಶವಂತಪುರ ನಡುವಿನ 7.4 ಕಿ‌.ಮೀ. ಮಾರ್ಗದಲ್ಲಿ 2025ರ ಡಿಸೆಂಬರ್ ವೇಳೆಗೆ ರೈಲು ಸಂಚಾರ ಆರಂಭವಾಗಲಿದ್ದು, ಇದರಲ್ಲಿ ದೇಶದಲ್ಲೇ ಅತಿ ಉದ್ದದ ಗರ್ಡರ್ ಬಳಸಲಾಗುತ್ತಿದೆ ಎಂದು ಮೂಲ ಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ್ ಶನಿವಾರ ಹೇಳಿದರು.

ದೇಶದಲ್ಲೇ ಅತಿ ಉದ್ದದ (100 ಅಡಿ ಅಥವಾ 31 ಮೀಟರ್) ಯು-ಗರ್ಡರ್ ನಿರ್ಮಾಣ ಪ್ರಕ್ರಿಯೆಯನ್ನು ವೀಕ್ಷಿಸಲು ದೇವನಹಳ್ಳಿ ಬಳಿಯ ಗೊಲ್ಲಹಳ್ಳಿಯ ಕ್ಯಾಸ್ಟಿಂಗ್ ಕಾರ್ಯಾಗಾರಕ್ಕೆ ಭೇಟಿ ನೀಡಿದ ಅವರು ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

“ಎಂಜಿನಿಯರಿಂಗ್ ಅದ್ಭುತ ಈ ಎನ್ನಲಾಗಿರುವ ಈ 100 ಅಡಿ ಉದ್ದದ ಯು-ಗರ್ಡರ್ ಅನ್ನು ದೇಶದಲ್ಲಿ ಇದೇ ಮೊದಲ ಬಾರಿಗೆ ಬೆಂಗಳೂರು ಉಪನಗರ ರೈಲು ಯೋಜನೆಗೆ ಬಳಸಲಾಗುತ್ತಿದೆ. ಮಲ್ಲಿಗೆ ಕಾರಿಡಾರ್ ನ (ನಂಬರ್ 2) ಭಾಗವಾದ ಹೆಬ್ಬಾಳ- ಯಶವಂತಪುರದ 8 ಕಿಮೀ ನಡುವೆ ಇಂತಹ ಸುಮಾರು 450 ಯು-ಗರ್ಡರ್ ಗಳನ್ನು ಬಳಸಲಾಗುತ್ತದೆ. ಇದಕ್ಕೆ ಮುಂಚೆ, ದೇಶದಲ್ಲಿ ಬೇರೆ ರೈಲ್ವೆ ಯೋಜನೆಗಳಲ್ಲಿ 28 ಮೀ. ಉದ್ದದ ಯು- ಗರ್ಡರ್ ಗಳನ್ನು ಬಳಸಲಾಗುತ್ತಿತ್ತು”‌ ಎಂದರು.

Advertisements

“ಈ ಎಲ್ ಅಂಡ್ ಟಿ ಕ್ಯಾಸ್ಟಿಂಗ್ ಯಾರ್ಡ್ ನಲ್ಲಿ ಐ-ಗರ್ಡರ್ ಮತ್ತು ಫೈಯರ್ ಕ್ಯಾಪ್ ಗಳನ್ನು ಕೂಡ ಕ್ಯಾಸ್ಟಿಂಗ್ ಮಾಡಲಾಗುತ್ತದೆ. ಮೇಲಿನ ಮಾರ್ಗದಲ್ಲಿ ಇಂತಹ 323 ಐ-ಗರ್ಡರ್, 283 ಫೈಯರ್ ಕ್ಯಾಪ್ ಗಳನ್ನು ಬಳಸಲಾಗುತ್ತದೆ” ಎಂದು ಹೇಳಿದರು.

“ಉಪನಗರ ರೈಲು ಯೋಜನೆಗೆ ಸಂಬಂಧಿಸಿದಂತೆ ಈವರೆಗೆ ಶೇಕಡ 20ರಷ್ಟು ಕಾಯಂ ಕಾಮಗಾರಿಗಳು ಮುಗಿದಿವೆ. ಕಾರಿಡಾರ್ -2ರಲ್ಲಿ (ಚಿಕ್ಕಬಾಣಾವರ-ಬೆನ್ನಿಗಾನಹಳ್ಳಿ) ಅಗತ್ಯವಿರುವ 120.44 ಎಕರೆ ಭೂಮಿಯ ಪೈಕಿ 119.18 ಎಕರೆ ಜಮೀನು (ಶೇಕಡ 98.5 ರಷ್ಟು) ಈಗಾಗಲೇ ಸ್ವಾಧೀನಗೊಂಡಿದೆ” ಎಂದು ತಿಳಿಸಿದರು.

“ಕಾರಿಡಾರ್ – 2ರಲ್ಲಿ ಉತ್ತಮವಾಗಿ ಕೆಲಸ ನಡೆಯುತ್ತಿದೆ. ನಾಗರಿಕ ಸೇವೆಗಳನ್ನು ಸ್ಥಳಾಂತರಿಸುವ ಬಗ್ಗೆ ಬಿಬಿಎಂಪಿ, ಬಿಡಿಎ, ಜಲಮಂಡಳಿ, ಬೆಸ್ಕಾಂ, ಬಿಎಸ್ಎನ್ಎಲ್ ಹಾಗೂ ಇನ್ನಿತರ ಖಾಸಗಿ ಸಂಸ್ಥೆಗಳ ಜೊತೆ ಮಾತುಕತೆ ನಡೆಯುತ್ತಿದೆ” ಎಂದು ಪಾಟೀಲ್ ಹೇಳಿದರು.

“ಕೆಂಗೇರಿ- ವೈಟ್ ಫೀಲ್ಡ್ ಕಾರಿಡಾರನಲ್ಲಿ ಕೆಂಗೇರಿ- ಕಂಟೋನ್ಮೆಂಟ್ ನಡುವೆ ಉಪನಗರ ಯೋಜನೆ ಜಾರಿಗೆ ಯಾವ ಆತಂಕವೂ ಇಲ್ಲ. ಆದರೆ ಕಂಟೋನ್ಮೆಂಟ್- ವೈಟ್ ಫೀಲ್ಡ್ ನಡುವೆ ಜಾಗದ ಸಮಸ್ಯೆ ಇದ್ದು, ಇಲ್ಲಿ ಎತ್ತರಿಸಿದ ಮಾರ್ಗ ನಿರ್ಮಿಸಬೇಕೆ ಅಥವಾ ಬೇರೆ ಯಾವ ರೀತಿಯಲ್ಲಿ ಯೋಜನೆ ಅನುಷ್ಠಾನ ಮಾಡಬಹುದು ಎಂಬುದರ ಬಗ್ಗೆ ರೈಲ್ವೆ ಜತೆ ಚರ್ಚಿಸಿ ತೀರ್ಮಾನಕ್ಕೆ ಬರಲಾಗುವುದು” ಎಂದರು.

“ಒಟ್ಟಾರೆ, ರೂ 15,677 ಕೋಟಿಯ ಯೋಜನೆಯ ನಾಲ್ಕೂ ಕಾರಿಡಾರ್ ಗಳ 148.17 ಕಿಲೋಮೀಟರ್ ವ್ಯಾಪ್ತಿಯಲ್ಲಿ ಕಾಮಗಾರಿ ಡಿಸೆಂಬರ್ 2027ಕ್ಕೆ ಮುಗಿಯಲಿದೆ. ಈ ಗುರಿಗೆ ಪೂರಕವಾಗಿ ರೈಲ್ವೆ ಇಲಾಖೆಯು ಸಿ-1 ಮತ್ತು ಸಿ- 3 ಕಾರಿಡಾರ್ ಗಳ ಕಾಮಗಾರಿಗಾಗಿ ಒತ್ತುವರಿ ತೆರವುಗೊಳಿಸಿದ ಭೂಮಿಯನ್ನು ನಮಗೆ ಹಸ್ತಾಂತರಿಸಬೇಕು ಹಾಗೂ ಡಿಪಿಆರ್ ನಲ್ಲಿ ಇರುವಂತೆ ಅಲೈನ್ಮೆಂಟಿಗೆ ಅನುಮತಿ ನೀಡಬೇಕು” ಎಂದು ಕೋರಿದರು.

ರೈಲ್ವೆ ಇಲಾಖೆಯು ಮುಂಬರುವ ವರ್ಷಗಳಲ್ಲಿ ಕೈಗೊಳ್ಳಲು ಉದ್ದೇಶಿಸಿರುವ ವರ್ತುಲ ರೈಲ್ವೆ ಯೋಜನೆಗೆ ಉಪನಗರ ರೈಲು ಯೋಜನೆಯನ್ನು ಸಂಪರ್ಕಿಸುವ ಜೊತೆಗೆ ಅದನ್ನು ಬೆಂಗಳೂರು ಸುತ್ತಲ ಉಪನಗರಗಳಿಗೆ ವಿಸ್ತರಿಸುವ ಬಗ್ಗೆಯೂ ಕೆ-ರೈಡ್ ಈಗಾಗಲೇ ಚಿಂತನೆ ನಡೆಸುತ್ತಿದೆ. ಇದರ ಬಗ್ಗೆ ರೈಲ್ವೆ ಇಲಾಖೆ ಜೊತೆ ಚರ್ಚಿಸಿ ಮನವರಿಕೆ ಮಾಡಿಕೊಡಲಾಗುವುದು ಎಂದು ಹೇಳಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಕಳಂಕಿತ ನೈಸ್ ಕಂಪನಿಗೆ ಯಾವುದೇ ಕಾಮಗಾರಿ ನೀಡದಂತೆ ಸರ್ಕಾರಕ್ಕೆ ನೈಸ್ ಭೂ ಸಂತ್ರಸ್ತ ರೈತರ ಆಗ್ರಹ

ಬಿಎಂಐಸಿ-ನೈಸ್ ಕಂಪನಿ ಕುರಿತು ಮುಂದಿನ ನಿರ್ಧಾರ ಕೈಗೊಳ್ಳಲು ರಾಜ್ಯ ಸರ್ಕಾರ ಸಲಹಾ...

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಮತ್ತು ಸೌಜನ್ಯ, ಮುಂತಾದ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

Download Eedina App Android / iOS

X