ಮಾರ್ಚ್ 30ರಂದು ಪ್ರಥಮ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ

Date:

Advertisements

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಾಂಕನ ಮಂಡಳಿ ನಡೆಸಿದ 2023 -24ನೇ ಸಾಲಿನ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆ ಫಲಿತಾಂಶವನ್ನು ಮಂಡಳಿಯು ಮಾರ್ಚ್ 30ರಂದು ಬೆಳಗ್ಗೆ 11 ಗಂಟೆಗೆ ಪ್ರಕಟಿಸಲಿದೆ.

ಮಂಡಳಿಯ ವೆಬ್‌ಸೈಟ್ karresults.nic.in ನಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಕಾಲೇಜಿನಲ್ಲಿಯೂ ಮಾರ್ಚ್‌ 30ರಂದೇ ಫಲಿತಾಂಶ ನೋಡಬಹುದಾಗಿದೆ. ರೋಲ್‌ ನಂಬರ್‌ ಆಧರಿಸಿ ಫಲಿತಾಂಶಗಳನ್ನು ಪ್ರಥಮ ಪಿಯುಸಿ ಪರೀಕ್ಷೆಗಳನ್ನು ಎದುರಿಸಿದ ಎಲ್ಲ ವಿದ್ಯಾರ್ಥಿಗಳು ವೀಕ್ಷಣೆ ಮಾಡಲು ಅವಕಾಶವಿದೆ.

ಕರ್ನಾಟಕ ಶಾಲಾ ಪರೀಕ್ಷಾ ಹಾಗೂ ಮೌಲ್ಯಾಂಕನ ಮಂಡಳಿಯು ಈ ಬಾರಿಯ ಪ್ರಥಮ ಪಿಯುಸಿ ಪರೀಕ್ಷೆಗಳನ್ನು ಫೆಬ್ರವರಿ 12 ರಿಂದ 27 ರವರೆಗೆ ನಡೆಸಿತ್ತು. ಕರ್ನಾಟಕದಲ್ಲಿ ಏಕಕಾಲಕ್ಕೆ ಪ್ರಥಮ ಪಿಯುಸಿಯ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಪರೀಕ್ಷೆಗಳನ್ನು ಎದುರಿಸಿದ್ದರು. ಇದೀಗ, ಮಾರ್ಚ್‌ 30ರಂದು ಫಲಿತಾಂಶ ಪ್ರಕಟವಾಗಲಿದೆ. ಅನುತ್ತೀರ್ಣರಾದವರಿಗೆ ಮೇ ತಿಂಗಳಲ್ಲಿ ಪೂರಕ ಪರೀಕ್ಷೆ ನಡೆಸಲಾಗುತ್ತದೆ.

Advertisements

ಮಂಡಳಿ ವತಿಯಿಂದ ಈಗಾಗಲೇ ಪೂರಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟಿಸಲಾಗಿದ್ದು, ಅನುತ್ತೀರ್ಣರಾದ ವಿದ್ಯಾರ್ಥಿಗಳು ಪೂರಕ ಪರೀಕ್ಷೆಗೆ ನೋಂದಾಯಿಸಿಕೊಳ್ಳಬಹುದಾಗಿದೆ. ಈ ಪರೀಕ್ಷೆಗೆ ಶುಲ್ಕ ತುಂಬಲು ಏಪ್ರಿಲ್‌ 20ರವರೆಗೆ ಅವಕಾಶ ಮಾಡಿಕೊಡಲಾಗಿದೆ.

ಪರೀಕ್ಷೆಗಳ ಮೌಲ್ಯಮಾಪನ ಮುಗಿದಿದ್ದು, ಫಲಿತಾಂಶ ಪ್ರಕಟ ಮಾಡಲು ಮಂಡಳಿ ಮುಂದಾಗಿದೆ. ಮಂಡಳಿಯ ವೆಬ್‌ಸೈಟ್‌ನಲ್ಲಿಯೇ ಫಲಿತಾಂಶಗಳು ಲಭ್ಯವಾಗಲಿದ್ದು, ಮಾರ್ಚ್‌ 30ರಂದು ಮೊಬೈಲ್‌ ಮೂಲಕ ಇಲ್ಲವೇ ಇಂಟರ್‌ನೆಟ್‌ ಸೆಂಟರ್‌ಗಳು ಇಲ್ಲವೇ ಮನೆಯಲ್ಲಿಯೇ ಕುಳಿತು ನೆಟ್‌ನಲ್ಲಿ ವೀಕ್ಷಿಸಲು ಅವಕಾಶವಿದೆ.

ರಿಸಲ್ಟ್‌ ನೋಡುವುದು ಹೇಗೆ?

karresults.nic.in ನಲ್ಲಿ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ನಿಮ್ಮ ನೋಂದಣಿ ಸಂಖ್ಯೆ (Register number) ಮತ್ತು ಜನ್ಮ ದಿನಾಂಕವನ್ನು(DOB) ಭರ್ತಿ ಮಾಡಿ ನಿಮ್ಮ ಪ್ರಥಮ ಪಿಯುಸಿ ಫಲಿತಾಂಶ 2024 ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ.

ಪೂರಕ ಪರೀಕ್ಷೆ

ಪ್ರಥಮ ಪಿಯುಸಿ ವಾರ್ಷಿಕ ಮತ್ತು ಸಪ್ಲಿಮೆಂಟರಿ ಪರೀಕ್ಷೆಗಳನ್ನು ಜಿಲ್ಲಾಮಟ್ಟದಲ್ಲಿ ಶಿಕ್ಷಣ ಇಲಾಖೆ ನಡೆಸಿಕೊಂಡು ಬರುತ್ತಿದೆ. ಪರೀಕ್ಷೆಯಲ್ಲಿ ಅನುತ್ತೀರ್ಣರಾದ ಅಥವಾ ಪರೀಕ್ಷೆಯನ್ನು ಬರೆಯಲಾರದೆ ಬಿಟ್ಟ ವಿದ್ಯಾರ್ಥಿಗಳಿಗೆ ಮತ್ತೊಂದು ಅವಕಾಶ ಕೊಡಲು ಮೇ ತಿಂಗಳಿನಲ್ಲಿ ಸಪ್ಲಿಮೆಂಟರಿ ಪರೀಕ್ಷೆಯನ್ನು ನಡೆಸಲಾಗುತ್ತಿದೆ.

ಸಪ್ಲಿಮೆಂಟರಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಶುಲ್ಕವನ್ನು ಪಾವತಿಸಲು ಇದೇ ಏಪ್ರಿಲ್ 20ರವರೆಗೆ ಅವಕಾಶ ಮಾಡಿಕೊಡಲಾಗುತ್ತದೆ ಎಂದು ಮಂಡಳಿಯ ಅಧಿಕಾರಿಗಳು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಲೋಕಸಭಾ ಚುನಾವಣೆ | ವಿಪಕ್ಷಗಳ ಮೇಲೆ ಮೋ-ಶಾ ಪ್ರಯೋಗಿಸುತ್ತಿರುವ ಅಸ್ತ್ರಗಳಿವು

ಪೂರಕ ಪರೀಕ್ಷೆ ವೇಳಾಪಟ್ಟಿ

  • 20-05-2024: ಕನ್ನಡ, ಅರೇಬಿಕ್
  • 21-05-2024: ಇತಿಹಾಸ / ಭೌತಶಾಸ್ತ್ರ
  • 22-05-2024: ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ
  • 23-05-2024: ಇಂಗ್ಲಿಷ್
  • 24-05-2024:  ಗಣಿತ, ಶಿಕ್ಷಣಶಾಸ್ತ್ರ, ಭೂಗೋಳಶಾಸ್ತ್ರ, ಜೀವಶಾಸ್ತ್ರ
  • 25-05-2024: ಅರ್ಥಶಾಸ್ತ್ರ
  • 27-05-2024: ಭೂಗೋಳಶಾಸ್ತ್ರ, ಮನಃಶಾಸ್ತ್ರ, ರಸಾಯನಶಾಸ್ತ್ರ, ಮೂಲಗಣಿತ, ಗೃಹ ವಿಜ್ಞಾನ
  • 28-05-2024: ಜೀವಶಾಸ್ತ್ರ, ಸಮಾಜಶಾಸ್ತ್ರ, ಭೂಗರ್ಭ ಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ
  • 29-05-2024: ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ
  • 30-05-2024: ಹಿಂದಿ
  • 31-05-2024: ತಮಿಳು, ತೆಲುಗು, ಮಲಯಾಳಂ, ಮರಾಠಿ, ಅರೆಬಿಕ್, ಫ್ರೆಂಚ್
  • 31-05-2024: ಹಿಂದೂಸ್ತಾನಿ ಸಂಗೀತ, ಮಾಹಿತಿ ತಂತ್ರಜ್ಞಾನ, ರೀಟೈಲ್, ಆಟೋಮೊಬೈಲ್, ಬ್ಯೂಟಿಮೊಬೈಲ್, ಬ್ಯೂಟಿ ಅಂಡ್ ವೆಲ್‌ನೆಸ್‌

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

Download Eedina App Android / iOS

X