ಫುಟ್‌ಪಾತ್‌ ಒತ್ತುವರಿ ತೆರವು ವಿಚಾರ | ಬಿಬಿಎಂಪಿ ಕಾರ್ಯ ವೈಖರಿಯ ಬಗ್ಗೆ ಹೈಕೋರ್ಟ್‌ ತೀವ್ರ ಅಸಮಾಧಾನ

Date:

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಫುಟ್‌ಪಾತ್‌ ಒತ್ತುವರಿ ತೆರವು ವಿಚಾರವಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕಾರ್ಯ ವೈಖರಿಯ ಬಗ್ಗೆ ಹೈಕೋರ್ಟ್‌ ತೀವ್ರ ಅಸಮಾಧಾನ ಹೊರಹಾಕಿದ್ದು, ಕ್ರಮ ಕೈಗೊಳ್ಳದ ಪಾಲಿಕೆಗೆ ಹೈಕೋರ್ಟ್ ತರಾಟೆ ತೆಗೆದುಕೊಂಡಿದೆ. ಅಲ್ಲದೇ, ನಗರದಲ್ಲಿರುವ ಎಲ್ಲ ಫುಟ್ ಪಾತ್‌ಗಳ ಒತ್ತುವರಿ ತೆರವು ಮಾಡಬೇಕು ಎಂದು ಆದೇಶ ನೀಡಿದೆ.

- Advertisement -

ಹೈಕೋರ್ಟ್‌ನ ಹಂಗಾಮಿ ಸಿಜೆ‌ ಪಿ.ಎಸ್.ದಿನೇಶ್ ಕುಮಾರ್ ಮತ್ತು ನ್ಯಾಯಮೂರ್ತಿ ಟಿ.ಜಿ.ಶಿವಶಂಕರೇಗೌಡರಿದ್ದ ಪೀಠ ವಿಚಾರಣೆ ಕೈಗೆತ್ತಿಕೊಂಡು ಆದೇಶ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

“ನಗರದಲ್ಲಿ ಜನರು ಉತ್ತಮವಾದ ರಸ್ತೆ ಮತ್ತು ಫುಟ್‌ಪಾತ್ ನಿರ್ಮಾಣ ಮಾಡಲು ತೆರಿಗೆ ಕಟ್ಟುತ್ತಾರೆ. ಆದರೆ, ಬಿಬಿಎಂಪಿ ರಸ್ತೆ ಮತ್ತು ಫುಟ್‌ಪಾತ್ ಸಮಸ್ಯೆ ಸುಧಾರಿಸಲು ಮುಂದಾಗುತ್ತಿಲ್ಲ. ಒತ್ತುವರಿ ತೆರವಿಗೆ ಸ್ವಯಂಪ್ರೇರಿತ ಪಿಐಎಲ್‌ ದಾಖಲಿಸುತ್ತೇವೆ” ಎಂದು ಪೀಠ ಪಾಲಿಕೆಗೆ ಎಚ್ಚರಿಕೆ ನೀಡಿದೆ.

ಈ ಸುದ್ದಿ ಓದಿದ್ದೀರಾ? ಅಧಿಕಾರ ಕೇಂದ್ರೀಕರಣ ಪ್ರಜಾಪ್ರಭುತ್ವಕ್ಕೆ ಮಾರಕ: ಡಾ. ಮುಖ್ಯಮಂತ್ರಿ ಚಂದ್ರು

“ಅಲ್ಲದೇ, ಕೆಲವರು ನಗರದಲ್ಲಿರುವ ಫುಟ್‌ಪಾತ್‌ಗಳನ್ನು ವಾಹನ ನಿಲುಗಡೆ ಸ್ಥಳವಾಗಿ ಬಳಕೆ ಮಾಡುತ್ತಿದ್ದಾರೆ. ಎಲ್ಲ ಫುಟ್‌ಪಾತ್‌ಗಳ ಒತ್ತುವರಿಗಳನ್ನು ತೆರವುಗೊಳಿಸಬೇಕು. ಇನ್ನು ಫೆಬ್ರವರಿ 1ರಂದು ಬಿಬಿಎಂಪಿ ಮುಖ್ಯ ಆಯುಕ್ತರು ಖುದ್ದು ಹೈಕೋರ್ಟ್‌ಗೆ ಹಾಜರಾಗಿ ವಿವರಣೆ ನೀಡಬೇಕು” ಎಂದು ಹೈಕೋರ್ಟ್ ಸೂಚನೆ ನೀಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅ.4ರಿಂದ ವಿಜಯಪುರ – ತಿರುಪತಿ ದಸರಾ ಎಕ್ಸ್‌ಪ್ರೆಸ್ ರೈಲು ಸೇವೆ ಆರಂಭ

ದಸರಾ ಹಬ್ಬದ ಹಿನ್ನೆಲೆಯಲ್ಲಿ ತಿರುಪತಿ–ವಿಜಯಪುರ ನಡುವೆ ಪ್ರಯಾಣಿಕರ ಅನುಕೂಲಕ್ಕಾಗಿ ಸಾಪ್ತಾಹಿಕ ವಿಶೇಷ...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ ಮತ್ತು ಮೇಕೆ

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು...

ವಿಜಯಪುರ | ರೂ. 2,500 ಸಬ್ಸಿಡಿಗೆ ವಿರೋಧ: ಸರ್ಕಾರಕ್ಕೆ ದೇಣಿಗೆ ಸಂಗ್ರಹಿಸಿ ಕೊಟ್ಟ ರೈತರು!

ಭೀಕರ ಬರದಿಂದ ನಲುಗಿರುವ ರೈತರಿಗೆ ರಾಜ್ಯ ಸರ್ಕಾರ ಘೋಷಿಸಿರುವ ₹2,500 ಇನ್‌ಪುಟ್...

ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು, ಪಿತೃಪ್ರಧಾನತೆಯ ಭೀತಿ ಮೀರಿ, ಲಕ್ಷ್ಮಣ ರೇಖೆ ದಾಟಿ: ಆರ್ ಸುನಂದಮ್ಮ

ಮಹಿಳೆಯರು ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು. ಪಿತೃಪ್ರಧಾನತೆಯ ಭೀತಿ ಮೀರಿ,...