ಯುವ ಮತದಾರರ ನೋಂದಣಿ ಪ್ರಮಾಣ ಹೆಚ್ಚಳ ಮಾಡಲು ಕ್ರಿಯಾಯೋಜನೆ ರೂಪಿಸಿ: ಉಮಾ ಮಹದೇವನ್

Date:

Advertisements

ಬೆಂಗಳೂರು ಕೇಂದ್ರ ವ್ಯಾಪ್ತಿಯಲ್ಲಿ ಬರುವ ಲಿಂಗ ಪ್ರಮಾಣ, ಚುನಾವಣಾ ಜನಸಂಖ್ಯೆ (ಇಪಿ) ಪ್ರಮಾಣ ಹಾಗೂ ಯುವ ಮತದಾರರ ನೋಂದಣಿ ಪ್ರಮಾಣವನ್ನು ಹೆಚ್ಚಳ ಮಾಡಲು ಕ್ರಿಯಾಯೋಜನೆ ರೂಪಿಸಿಕೊಳ್ಳಬೇಕು ಎಂದು ಬೆಂಗಳೂರು ಕೇಂದ್ರದ ಮತದಾರರ ಪಟ್ಟಿ ವೀಕ್ಷಕರು ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಉಮಾ ಮಹದೇವನ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು‌.

ಬೆಂಗಳೂರು ಕೇಂದ್ರ ವ್ಯಾಪ್ತಿಯಲ್ಲಿನ ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಯ ಪರಿಶೀಲನೆ ಕುರಿತು ನ.23 ರಂದು ರಾಜಕೀಯ ಪಕ್ಷದ ಪ್ರತಿನಿಧಿಗಳ ಜೊತೆ ಸಭೆ ನಡೆಯಿತು. ಈ ವೇಳೆ ಮಾತನಾಡಿದ ಅವರು, “ಬೆಂಗಳೂರು ಕೇಂದ್ರ ವ್ಯಾಪ್ತಿಯಲ್ಲಿ ಬರುವ 7 ವಿಧಾನಸಭಾ ಕ್ಷೇತ್ರ (ಆರ್‌.ಆರ್.ನಗರ, ಶಿವಾಜಿನಗರ, ಶಾಂತಿನಗರ, ಚಾಮರಾಜಪೇಟೆ, ಚಿಕ್ಕಪೇಟೆ, ಗಾಂಧಿನಗರ, ರಾಜಾಜಿನಗರ)ಗಳಲ್ಲಿ ಮತದಾರರ ಪ್ರಮಾಣ ಹೆಚ್ಚಳ ಮಾಡಲು ಅಗತ್ಯ ಕ್ರಮ ಕೈಗೊಳ್ಳಬೇಕು” ಎಂದು ಹೇಳಿದರು.

“ಬೆಂಗಳೂರು ಕೆಂದ್ರ ವ್ಯಾಪ್ತಿಯಲ್ಲಿ ಐಇಸಿ ಕಾರ್ಯಕ್ರಮಗಳನ್ನು ಹೆಚ್ಚಾಗಿ ಹಮ್ಮಿಕೊಂಡು ಮತದಾರರ ಪಟ್ಟಿಯಲ್ಲಿ ಹೆಚ್ಚು ಸಂಖ್ಯೆಯಲ್ಲಿ ಸೇರ್ಪಡೆಯಾಗುವ ನಿಟ್ಟಿನಲ್ಲಿ ಶಾಲಾ-ಕಾಲೇಜು, ಕಚೇರಿಗಳು, ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘ ಹಾಗೂ ಕೊಳಗೇರಿ ಪ್ರದೇಶಗಳಲ್ಲಿ ಹೆಚ್ಚು ಹೆಚ್ಚು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಜತೆಗೆ ಆಯಾ ವಾರ್ಡ್ ವ್ಯಾಪ್ತಿಯಲ್ಲಿ ವಿಶೇಷ ಅಭಿಯಾನ ಹಮ್ಮಿಕೊಳ್ಳುವುದರ ಜತೆಗೆ ಧ್ವನಿವರ್ಧಕಗಳ ಮೂಲಕ ಅರಿವು ಮೂಡಿಸುವ ಕೆಲಸ ಮಾಡಬೇಕು” ಎಂದು ತಿಳಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ವರದಕ್ಷಿಣೆ ಕಿರುಕುಳ; ನೇಣುಬಿಗಿದ ಸ್ಥಿತಿಯಲ್ಲಿ ಗೃಹಿಣಿಯ ಶವ ಪತ್ತೆ

“ಬೆಂಗಳೂರು ಕೇಂದ್ರ ವ್ಯಾಪ್ತಿಯಲ್ಲಿ ಮತದಾರರ ಪಟ್ಟಿಯಲ್ಲಿ ಮಹಿಳೆಯರು ಹೆಚ್ಚು ಸೇರ್ಪಡೆಯಾಗಬೇಕು. ಈ ಸಂಬಂಧ ಇದಕ್ಕೆ ಬೇಕಾದ ಅಗತ್ಯತೆಗಳನ್ನು ಮಾಡಿಕೊಂಡು ಸೂಕ್ತ ರೀತಿಯಲ್ಲಿ ಯೋಜನೆಗಳನ್ನು ರೂಪಿಸಿಕೊಂಡು ಮತದಾರರ ಪಟ್ಟಿಯಲ್ಲಿ ಮಹಿಳೆಯರ ಸಂಖ್ಯೆ ಹೆಚ್ಚಳವಾಗುವಂತೆ ಮಾಡಬೇಕು” ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಬೆಯಲ್ಲಿ ಬೆಂಗಳೂರು ಕೇಂದ್ರ ಚುನಾವಣಾ ಜಿಲ್ಲೆಯ ಹೆಚ್ಚುವರಿ ಜಿಲ್ಲಾ ಚುನಾವಣಾಧಿಕಾರಿ ಡಾ. ಕೆ ಹರೀಶ್ ಕುಮಾರ್, ಚುನಾವಣಾ ವಿಭಾಗದ ಸಹಾಯಕ ಆಯುಕ್ತರಾದ ಅಜಯ್ ಸೇರಿದಂತೆ ಚುನಾವಣಾ ವಿಭಾಗದ ಅಧಿಕಾರಿಗಳು, ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X