ಫ್ರಿ ಬಸ್ | ತೀರ್ಥಯಾತ್ರೆ ನೆಪದಲ್ಲಿ ಮಹಿಳೆಯರು ಎಲ್ಲೆಲ್ಲೋ ಹೋಗ್ತಿದ್ದಾರೆ; ಬಿಜೆಪಿ ಪ್ರಚಾರಕಿ, ನಟಿ ಶೃತಿ ವಿವಾದಾತ್ಮಕ ಹೇಳಿಕೆ

Date:

ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಮಹಿಳೆಯರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ಬೆನ್ನಲ್ಲೇ, ಬಿಜೆಪಿ ಸ್ಟಾರ್ ಪ್ರಚಾರಕಿ, ನಟಿ ಶೃತಿ ಕೂಡ ವಿವಾದದ ಹೇಳಿಕೆ ನೀಡಿದ್ದಾರೆ. “ಫ್ರೀ ಬಸ್ ಬಿಟ್ಟ ತಕ್ಷಣ ಹೆಣ್ಣುಮಕ್ಕಳು ತೀರ್ಥಯಾತ್ರೆ ಹೋಗ್ತೇವೆಂದು ಹೇಳಿ, ಎಲ್ಲಿಗ್ ಹೋಗ್ತಿದ್ದಾರೆ ಅಂತ ಗೊತ್ತಾಗ್ತಿಲ್ಲ” ಎಂದು ಹೇಳಿರುವ ಶೃತಿ ಹೆಣ್ಣು ಮಕ್ಕಳಿಗೆ ಅಪಮಾನ ಮಾಡಿದ್ದಾರೆ.

ಉಡುಪಿ ಜಿಲ್ಲೆಯ ಬೈಂದೂರು ಕ್ಷೇತ್ರದಲ್ಲಿ ಶಕ್ತಿ ಸಿಂಧು ಮಹಿಳಾ ಸಮಾವೇಶದಲ್ಲಿ ಹೇಳಿಕೆ ನೀಡಿದ ಅವರು, “ದಿನ ನಿತ್ಯ ಗಂಡಸರು ಅಳತಾ ಇದ್ದಾರೆ. ನನ್ನ ಹೆಂಡತಿ ಎಲ್ಲಿ ಹೋದ್ಲು ಅಂತ, ಮಕ್ಕಳು ಮನೇಲಿ ಉಪವಾಸ ಬಿದ್ದಿದ್ದಾರೆ ಅಂತ ಗೋಳಾಡುತ್ತಿದ್ದಾರೆ. ಫ್ರೀ ಬಸ್‌ ಕೊಟ್ಟ ತಕ್ಷಣ ಮಹಿಳೆಯರು ಎಲ್ಲೆಲ್ಲೋ ಹೋಗುತ್ತಿದ್ದಾರೆ. ತೀರ್ಥಯಾತ್ರೆ ಹೋಗಬೇಕು ಅನ್ನುವ ನೆಪದಲ್ಲಿ ಎಲ್ಲಿಗೆ ಹೋಗಬೇಕು ಅನ್ನೋದು ಗೊತ್ತಿಲ್ಲ. ಗೊತ್ತು ಗುರಿಯಿಲ್ಲದೆ ಇರುವ ಹಾಗೇ ಮಾಡಿದ್ದಾರೆ” ಎಂದಿದ್ದಾರೆ.

”ಫ್ರೀ ಬಸ್‌ ಹೆಸರಿನಲ್ಲಿ ನಾವು ಯಾವತ್ತು ಸಂಸ್ಕೃತಿ ದಾಟಿದ್ದೆ ಇಲ್ಲ. ಹೆಣ್ಣು ಮಕ್ಕಳ ಮೇಲೆ ಯಾವಾಗಲೂ ಒಂದು ದೂಷಣೆ ಇದೆ. ಆದರೆ, ನಾವು ಹೆಣ್ಣು ಮಕ್ಕಳು ಜಗಳ ಆಡಿದ್ದು ಇತಿಹಾಸದಲ್ಲೇ ಇಲ್ಲ. ಆದರೆ ಕೆಲವರು ಸೀಟ್‌ಗೋಸ್ಕರ ಜುಟ್ಟು ಹಿಡಿದುಕೊಂಡು ಜಗಳ ಆಡೋ ಹಾಗೇ ಮಾಡಿದ್ದಾರೆ. ಆಟೋ ಓಡಿಸೊ ಜನರು ಕಣ್ಣೀರು ಹಾಕತಾ ಇದಾರೆ” ಎಂದು ಹೇಳಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

”ಯಾವುದೇ ಯೋಜನೆ ಕೊಟ್ಟರೂ ಅದು ಮಹಿಳೆಯರ ರಕ್ಷಣೆಗೆ ಕೊಡಬೇಕೇ ಹೊರತು ಕೇವಲ ಆಕರ್ಷಣೆಗೋಸ್ಕರ ಆಗಿರಬಾರದು. ಭಾರತದ ಸಂಸ್ಕೃತಿ, ಪರಂಪರೆಯ ಲಕ್ಷ್ಮಣ ರೇಖೆಯನ್ನ ನೀವು ದಾಟಿ ಹೋದರೇ, ಕಾಂಗ್ರೆಸ್‌ ಪಕ್ಷದವರು ನಿಮ್ಮನ್ನು ಅಪಹರಣ ಮಾಡುತ್ತಾರೆ” ಎಂಬ ವಿವಾದಾತ್ಮಕ ಹೇಳಿಕೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಲೋಕಸಭಾ ಚುನಾವಣೆ | ಊರಿಗೆ ಹೊರಟ ಮತದಾರರು; ಸುಲಿಗೆಗಿಳಿದ ಖಾಸಗಿ ಬಸ್‌ಗಳು

”ಯಾಕೆ ಕಾಂಗ್ರೆಸ್‌ ಅವರು ಕೇವಲ ಹೆಣ್ಣುಮಕ್ಕಳನ್ನು ಟಾರ್ಗೆಟ್‌ ಮಾಡಿ ಈ ರೀತಿಯ ಯೋಜನೆ ಕೊಡತಾ ಇದಾರೆ ಎಂಬ ಬಗ್ಗೆ ಯೋಚನೆ ಮಾಡಿ” ಎಂದರು.

ಬಿಜೆಪಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಬಿ ವೈ ರಾಘವೇಂದ್ರ, ಬೈಂದೂರು ಬಿಜೆಪಿ ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ ಈ ವೇಳೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಳೆಗಾಲ ಶುರು: ಹಾವುಗಳ ಬಗ್ಗೆ ಎಚ್ಚರಿಕೆ ವಹಿಸಲು ಬಿಬಿಎಂಪಿ ಮನವಿ

ಪೂರ್ವ ಮುಂಗಾರು ಮಳೆ ಶುರುವಾದ ಬೆನ್ನಲ್ಲೇ ಈಗ ಬೆಂಗಳೂರಿನ ಜನ ವಸತಿ...

ಕೊಪ್ಪಳ | ಜನಪರ ಚಳವಳಿಗಳ ಚೇತನವನ್ನು ನಾವು ಉಳಿಸಿಕೊಂಡಿಲ್ಲ : ಕೆ.ಫಣಿರಾಜ್

ದಶಕಗಳ ಹಿಂದೆ ನಡೆದಿರುವ ಜನಪರ ಚಳವಳಿಗಳ ಚೇತನವನ್ನು ನಾವು ಉಳಿಸಿಕೊಂಡಿಲ್ಲ. ಆದರೆ...

ರಾಯಚೂರು | ಕುರಿಗೆ ನೀರು ಕುಡಿಸಲು ನದಿಗೆ ತೆರಳಿದ್ದ ಬಾಲಕನ್ನು ಹೊತ್ತೊಯ್ದ ಮೊಸಳೆ

ಕೃಷ್ಣ ನದಿಯಲ್ಲಿ ಕುರಿಗಳಿಗೆ ನೀರು ಕುಡಿಸಲು ಹೋಗಿದ್ದ ವೇಳೆ ಬಾಲಕನ ಮೇಲೆ...

ಕೊಪ್ಪಳ | ಬಂಡವಾಳಶಾಹಿಗಳಿಂದ ಭೂಮಿ ಉಳಿಸಬೇಕಿದೆ: ರಾಕೇಶ್ ಟಿಕಾಯತ್

ಉದ್ಯಮಿಗಳಿಗೆ ರೈತರ ಜಮೀನು ಕಡಿಮೆ ದರದಲ್ಲಿ ಖರೀದಿಸಿ ಬಡಜನರ ಹೊಟ್ಟೆಗೆ ಬಟ್ಟೆ...