ಗದಗ | ಒಂದೇ ಕುಟುಂಬ ನಾಲ್ವರ ಕೊಲೆ ಪೂರ್ವ ನಿಯೋಜಿತ ಎಂದ ಎಸ್​​ಪಿ ಬಿ.ಎಸ್.ನೇಮಗೌಡ

Date:

ಗದಗದಲ್ಲಿ ಒಂದೇ ಕುಟುಂಬದ ನಾಲ್ವರನ್ನು ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಈ ಕೃತ್ಯ ಪೂರ್ವ ನಿಯೋಜಿತವಾಗಿದೆ ಎಂದು ಎಸ್​ಪಿ ಬಿ.ಎಸ್.ನೇಮಗೌಡ ಹೇಳಿದ್ದಾರೆ.

- Advertisement -

ಈ ಬಗ್ಗೆ ಗದಗದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, “ಈ ಕೃತ್ಯ ಪೂರ್ವನಿಯೋಜಿತವಾಗಿದ್ದು, ಕೌಟುಂಬಿಕ ಹಾಗೂ ವ್ಯವಹಾರಿಕ ಹಿನ್ನೆಲೆ ಈ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ʻಬಳ್ಳಾರಿ ಚಲೋʼ ಕಾಂಗ್ರೆಸ್‌ ಭದ್ರಕೋಟೆಯಲ್ಲಿ ಬಿಜೆಪಿ ಪಾದಯಾತ್ರೆ; ಲಾಭ...

ವಿಧಾನಸಭೆ ಚುನಾವಣೆಯಲ್ಲಿ ಜಿಲ್ಲೆಯ ಎಲ್ಲಾ ಐದು ವಿಧಾನಸಭಾ ಕ್ಷೇತ್ರಗಳನ್ನು ಗೆದ್ದು ಕಾಂಗ್ರೆಸ್‌ ಬಿಜೆಪಿ ಪಕ್ಷವನ್ನು ಸಂಪೂರ್ಣವಾಗಿ ಮಣಿಸಿತ್ತು. ಲೋಕಸಭಾ ಚುನಾವಣೆಯಲ್ಲಿಯೂ ಕಾಂಗ್ರೆಸ್‌ ತನ್ನ ಪ್ರಾಬಲ್ಯವನ್ನು ಮುಂದುವರಿಸಿತು. ಇತ್ತೀಚೆಗೆ ನಡೆದ ಸಂಡೂರು ವಿಧಾನಸಭಾ ಕ್ಷೇತ್ರದ...

ಬಾಹ್ಯಾಕಾಶದಲ್ಲಿ ಶಸ್ತ್ರಾಸ್ತ್ರ ಸಮರ: ಕಕ್ಷೆಯಲ್ಲಿ ಆಯುಧಗಳನ್ನು ಇರಿಸಿದ್ದನ್ನು ಒಪ್ಪಿಕೊಂಡ...

ಉಪಗ್ರಹವನ್ನು ಸ್ಫೋಟಿಸದಿದ್ದರೂ ಬಾಹ್ಯಾಕಾಶದಲ್ಲಿ ಜಾಮರ್‌ಗಳು ಸಹ ಅತ್ಯಂತ ಮಾರಕವಾಗಿ ಪರಿಣಮಿಸಬಹುದು. ಇಂದಿನ ದಿನಗಳಲ್ಲಿ ಸಂಪರ್ಕ, ಹವಾಮಾನ ಮುನ್ಸೂಚನೆ, ವಿಮಾನ ಮತ್ತು ಹಡಗುಗಳ ಜಿಪಿಎಸ್ (GPS), ತುರ್ತು ಸೇವೆಗಳು ಮತ್ತು ಆರ್ಥಿಕ ಜಾಲಗಳು ಸಂಪೂರ್ಣವಾಗಿ...

ಗಣೇಶೋತ್ಸವ ಕೋಮು ಸೌಹಾರ್ದದ ಸೇತುವಾಗಲಿ; ಮನುಜ ಸಂಬಂಧದ ತಂತು...

ಗಣೇಶೋತ್ಸವ ಸಂಭ್ರಮ, ಭಕ್ತಿಯಿಂದ ಜನರು ಒಂದೆಡೆ ಸೇರಿ ಆಚರಿಸುವ ಹಬ್ಬ. ಆದರೆ ಇದೇ ಹಬ್ಬದ ಸಂದರ್ಭದಲ್ಲಿ ಕೆಲವೆಡೆ ಕೋಮು ಸಂಘರ್ಷಗಳು ನಡೆಯುತ್ತಿರುವುದು ಮಾತ್ರ ವಿಷಾದನೀಯ. ಭಾರತದಂತಹ ವಿವಿಧ ಧರ್ಮ, ಭಾಷೆ, ಸಂಸ್ಕೃತಿಗಳನ್ನು ಹೊಂದಿರುವ...

“ಏ.19ರ ಮುಂಜಾನೆ 3 ಗಂಟೆಗೆ ಮನೆಯೊಳಗೆ ನುಗ್ಗಿದ ಐವರು ಆರೋಪಿಗಳು ಕೊಲೆ ಮಾಡಿ ಪರಾರಿಯಾಗಿದ್ದಾರೆ. ಕೊಲೆ ಮಾಡಿದವರ ಚಲನವಲನ ಸಿಸಿಟಿವಿವೊಂದರಲ್ಲಿ ಸೆರೆಯಾಗಿದೆ. ಆಸ್ತಿ ವಿಚಾರ, ವಯಕ್ತಿಕ ಕಾರಣಕ್ಕೆ ಕೊಲೆ ನಡೆದಿರುವ ಬಗ್ಗೆ ಸಂಶಯ ವ್ಯಕ್ತವಾಗಿದೆ” ಎಂದು ತಿಳಿಸಿದ್ದಾರೆ.

“ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲ ಆಯಾಮಗಳಲ್ಲಿಯೂ ತನಿಖೆ ನಡೆಸುತ್ತೇವೆ. ಒಟ್ಟು ಐದು ತಂಡ ರಚನೆ ಮಾಡಲಾಗಿದ್ದು, ಹಂತಕರಿಗಾಗಿ ಹುಡುಕಾಟ ನಡೆಸಿದ್ದೇವೆ. ಆರೋಪಿಗಳನ್ನು ಆದಷ್ಟು ಬೇಗ ಬಂಧಿಸುತ್ತೇವೆ” ಎಂದು ಹೇಳಿದ್ದಾರೆ.

ಏನಿದು ಪ್ರಕರಣ?

ಗದಗ-ಬೆಟಗೇರಿ ನಗರಸಭೆ ಉಪಾಧ್ಯಕ್ಷೆ ಸುನಂದಾ ಬಾಕಳೆ ಪುತ್ರ ಸೇರಿದಂತೆ ಮಲಗಿದಲ್ಲೇ ಒಂದೇ ಕುಟುಂಬದ ನಾಲ್ವರನ್ನು ದುಷ್ಕರ್ಮಿಗಳು ಭೀಕರವಾಗಿ ಕೊಲೆ ಮಾಡಿದ್ದ ಘಟನೆ ಏ.19ರ ರಾತ್ರಿ ನಡೆದಿತ್ತು.

ನಗರಸಭೆ ಉಪಾಧ್ಯಕ್ಷೆ ಸುನಂದಾ ಬಾಕಳೆ ಅವರ ಕುಟುಂಬ ಗದಗ ನಗರದ ದಾಸರ ಓಣಿಯಲ್ಲಿ ನೆಲೆಸಿದೆ. ಎಪ್ರಿಲ್ 17ರಂದು ಸುನಂದಾ ಬಾಕಳೆ ಮತ್ತು ಪ್ರಕಾಶ್ ಬಾಕಳೆ ಪುತ್ರ ಕಾರ್ತಿಕ ಬಾಕಳೆ ಅವರ ಮದುವೆ ನಿಶ್ಚಯವಾಗಿತ್ತು. ಈ ಹಿನ್ನೆಲೆ ನಿಶ್ಚಿತಾರ್ಥ ಕಾರ್ಯಕ್ರಮಕ್ಕೆ ಗದಗನಲ್ಲಿರುವ ಸುನಂದಾ ಬಾಕಳೆ ಅವರ ಮನೆಗೆ ಕೊಪ್ಪಳದಿಂದ ಸಂಬಂಧಿಗಳು ಆಗಮಿಸಿದ್ದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಗನ್ ಇಟ್ಕೊಂಡು ಸಿಎಂಗೆ ಹಾರ : ಪಿಎಸ್​ಐ ಸೇರಿ ನಾಲ್ವರು ಅಮಾನತು

ಕಾರ್ತಿಕ ಬಾಕಳೆ (28) ನಿಶ್ಚಿತಾರ್ಥ ಕಾರ್ಯ ಹಿನ್ನೆಲೆಯಲ್ಲಿ ಸಂಬಂಧಿಕರಾದ ಪರಶುರಾಮ ಕುಟುಂಬ ಕೊಪ್ಪಳದಿಂದ ಬಂದಿದ್ದರು. ಪರಶುರಾಮ, ಸುನಂದಾ ಬಾಕಳೆಯ ಪತಿ ಪ್ರಕಾಶ್ ಬಾಕಳೆ ಅವರ ಮೊದಲನೇ ಹೆಂಡತಿ ಸಹೋದರ. ಪರಶುರಾಮ ಹಾದಿಮನಿ (55) ಪತ್ನಿ ಲಕ್ಷ್ಮೀ (45) ಮತ್ತು ಪುತ್ರಿ ಆಕಾಂಕ್ಷಾ (16) ಸುನಂದಾ ಬಾಕಳೆ ಮನೆಗೆ ಬಂದಿದ್ದರು. ಏಪ್ರಿಲ್​ 19ರ ರಾತ್ರಿ ಪರಶುರಾಮ ಹಾದಿಮನಿ ಪುತ್ರಿ ಆಕಾಂಕ್ಷಾ ಹುಟ್ಟಿದ ಹಬ್ಬವನ್ನು ಸುನಂದಾ ಬಾಕಳೆ ಮನೆಯಲ್ಲಿಯೇ ಆಚರಿಸಿದ್ದರು.

ಹುಟ್ಟುಹಬ್ಬ ಆಚರಣೆ ಮಾಡಿದ ಎಲ್ಲರೂ ರಾತ್ರಿ ಸುನಂದಾ ಬಾಕಳೆ ಮನೆಯಲ್ಲಿ ಮಲಗಿದ್ದಾರೆ. ಪರಶುರಾಮ ಕುಟುಂಬ ಅಂದರೇ, ಪರಶುರಾಮ್, ಆತನ ಪತ್ನಿ ಲಕ್ಷ್ಮೀ ಹಾಗೂ ಪುತ್ರಿ ಆಕಾಂಕ್ಷಾ ಮೊದಲನೇ ಮಹಡಿಯ ಕೋಣೆಯಲ್ಲಿ ಮಲಗಿದ್ದರು.

ಏ.19ರ ಮನೆಗೆ ನುಗ್ಗಿದ ದುಷ್ಕರ್ಮಿಗಳು ಪರಶುರಾಮ ಕುಟುಂಬ ಮಲಗಿದ್ದ ಕೋಣೆಯ ಗಾಜಿನ ಕಿಟಕಿ ಒಡೆದು ಒಳ ನುಗ್ಗಿದ್ದಾರೆ. ಬಳಿಕ, ಮಾರಕಾಸ್ತ್ರಗಳಿಂದ ಮೂವರನ್ನು ಕೊಚ್ಚಿ ಕೊಲೆ ಮಾಡಿದ್ದಾರೆ.

ಕಿರಿಚಾಟದ ಶಬ್ದ ಕೇಳಿದ ಕೆಳಗಿನ ಕೋಣೆಯಲ್ಲಿ ಮಲಗಿದ್ದ ಕಾರ್ತಿಕ್ ಬಾಕಳೆ ನೋಡಲು ಮೇಲೆ ಹೋಗಿದ್ದಾರೆ. ಆಗ ದುಷ್ಕರ್ಮಿಗಳು ಆತನನ್ನೂ ಕೊಲೆ ಮಾಡಿದ್ದಾರೆ. ತೀವ್ರ ರಕ್ತಸ್ರಾವದಿಂದ ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಬಳಿಕ, ಮನೆಯ ಮಾಲೀಕ ಪ್ರಕಾಶ್ ಬಾಕಳೆ ಮತ್ತು ಪತ್ನಿ ಸುನಂದಾ ಬಾಕಳೆ ಅವರು ಮಲಗಿದ್ದ ಕೋಣೆಯ ಬಾಗಿಲನ್ನು ದುಷ್ಕರ್ಮಿಗಳು ತಟ್ಟಿದ್ದಾರೆ. ಆದರೆ, ದಂಪತಿ ಬಾಗಿಲು ತೆಗೆಯದೆ ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಈ ಬಗ್ಗೆ ತಿಳಿದ ಆರೋಪಿಗಳು ಹಿಂಬಾಗಿಲಿನಿಂದ ಪರಾರಿಯಾಗಿದ್ದಾರೆ. ಕೃತ್ಯಕ್ಕೆ ಬಳಸಿದ ಮಾರಕಾಸ್ತ್ರಗಳನ್ನು ದುಷ್ಕರ್ಮಿಗಳು ಚರಂಡಿಯಲ್ಲಿ ಬಿಸಾಡಿದ್ದರು.

ಕೊಲೆ ನಡೆದ ಪ್ರಕಾಶ್​ ಬಾಕಳೆ ಮನೆಗೆ ಸಚಿವ ಹೆಚ್.ಕೆ.ಪಾಟೀಲ್​​ ಭೇಟಿ ನೀಡಿ, ಕುಟುಂಬಕ್ಕೆ ಧೈರ್ಯ ಹೇಳಿದ್ದರು. ಕುಟುಂಬಸ್ಥರು ಕೊಲೆಗಾರರಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಆಗ್ರಹಿಸಿದರು.

ಸುದ್ದಿ ತಿಳಿದು ಶ್ವಾನದಳದೊಂದಿಗೆ ಘಟನಾ ಸ್ಥಳಕ್ಕೆ ಬಂದ ಸ್ಥಳೀಯ ಪೊಲೀಸರು ಪರಿಶೀಲನೆ ನಡೆಸಿದ್ದರು. ಇದೀಗ ಪ್ರಕರಣದ ಬೆನ್ನತ್ತಿರುವ ಪೊಲೀಸರು ಆರೋಪಿಗಳ ಬಂಧನಕ್ಕೆ ತೀವ್ರ ತನಿಖೆ ನಡೆಸುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಡು ಮುರಿದ ಕಾಂಗ್ರೆಸ್ಸನ್ನು ಮತ್ತೆ ಕಟ್ಟಬಲ್ಲರೇ ಹೊಸ ಅಧ್ಯಕ್ಷರು?

ಉತ್ತರ ಕನ್ನಡ ಅಹಿಂದ ಜಿಲ್ಲೆ. ಬುಡಕಟ್ಟು ಹಾಲಕ್ಕಿ ಒಕ್ಕಲಿಗರು, ದೀವರು, ವಿವಿಧ...

ಬಾಗಲಕೋಟೆ | ಕುರಿ ಸಂಗೋಪನೆ ಸಂಘಗಳಿಗೂ ಶೂನ್ಯ ಬಡ್ಡಿದರ ಸಾಲಕ್ಕೆ ಆಗ್ರಹ

ಕುರಿ ಸಂಗೋಪನೆ ಹಾಗೂ ಉಣ್ಣೆ ಉತ್ಪಾದಕ ಸಹಕಾರ ಸಂಘಗಳಿಗೆ ಸಾಲ ಸೇರಿದಂತೆ...

ರಾಯಚೂರು | ಅವ್ಯವಹಾರ ದೂರು ನೀಡಿದ್ದಕ್ಕೆ ಡಿಡಿಪಿಐ ಬೆದರಿಕೆ: ಚನ್ನಬಸವ ಅರೋಲಿ ಆರೋಪ

ಮಾನ್ವಿ ತಾಲೂಕಿನ ಅರೋಲಿ ಗ್ರಾಮದ ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ...

ಧಾರವಾಡ | ಪ್ರತಿಯೊಬ್ಬರು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಅರಿಯಬೇಕು: ಎಫ್.ಹೆಚ್.ಜಕ್ಕಪ್ಪನವರ

"ಪ್ರತಿಯೊಬ್ಬರು ಪ್ರಜಾಪ್ರಭುತ್ವದ ಮೌಲ್ಯಗಳು ಹಾಗೂ ಅದರ ಬೇರುಗಳನ್ನು ಅರ್ಥೈಸಿಕೊಳ್ಳುವ ನಿಟ್ಟಿನಲ್ಲಿ ಜಾಗೃತಿ...