ಹೋಗಿ ಬನ್ನಿ ನಾರಿಮನ್ ಸಾಬ್, ಕನ್ನಡಿಗರ ಮನಸ್ಸಿನಲ್ಲಿ ನಿಮ್ಮ ನೆನಪು ಸದಾ ಹಸಿರು: ಸಿದ್ದರಾಮಯ್ಯ

Date:

ಸುಪ್ರೀಂಕೋರ್ಟ್‌ನ ಹಿರಿಯ ನ್ಯಾಯವಾದಿ ಫಾಲಿ ಎಸ್ ನಾರಿಮನ್ ಅವರ ನಿಧನದ ಸುದ್ದಿ ಕೇಳಿ ಆಘಾತವಾಯಿತು. ನಾರಿಮನ್ ಅವರ ಅಗಲಿಕೆಯ ದುಃಖದಲ್ಲಿರುವ ಅವರ ಕುಟುಂಬ ವರ್ಗ ಮತ್ತು ಅಭಿಮಾನಿಗಳಿಗೆ ನನ್ನ ಸಂತಾಪಗಳು. ‌ಅವರ ಆತ್ಮಕ್ಕೆ ಶಾಂತಿ ಕೋರುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ನಾರಿಮನ್‌ ನಿಧನಕ್ಕೆ ಸಂತಾಪ ಸೂಚಿಸಿ ಎಕ್ಸ್‌ ತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು, “ದೇಶದ ಅತ್ಯಂತ ಶ್ರೇಷ್ಠ ನದಿ ನೀರಿನ ವಿವಾದ ತಜ್ಞರಾಗಿದ್ದ ನಾರಿಮನ್ ಅವರು ದಶಕಗಳ ಕಾಲ ಕರ್ನಾಟಕವನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರತಿನಿಧಿಸಿದ್ದರು. ಕೃಷ್ಞಾ, ಕಾವೇರಿ ನದಿಗಳ ಜಲಹಂಚಿಕೆ ವಿವಾದಗಳಲ್ಲಿ ಕರ್ನಾಟಕದ ರೈತರಿಗೆ ನ್ಯಾಯ ಸಿಕ್ಕಿದ್ದರೆ ಅದರಲ್ಲಿ ನಾರಿಮನ್ ಅವರ ದೊಡ್ಡ ಕೊಡುಗೆ ಇದೆ” ಎಂದು ಸ್ಮರಿಸಿದ್ದಾರೆ.

“ಸುಪ್ರೀಂಕೋರ್ಟ್‌ನ ನ್ಯಾಯಪೀಠದ ಗೌರವಾದರಗಳಿಗೆ ಪಾತ್ರರಾಗಿದ್ದ ನಾರಿಮನ್ ಅವರಂತಹವರು ನ್ಯಾಯವಾದಿಯಾಗಿ ಸಿಕ್ಕಿದ್ದು ಕರ್ನಾಟಕದ ಪಾಲಿನ ಭಾಗ್ಯವಾಗಿತ್ತು. ವಕೀಲಿ ವೃತ್ತಿಯಿಂದ ಬಂದ ನನಗೆ ಅವರ ಬಗ್ಗೆ ವಿಶೇಷವಾದ ಅಭಿಮಾನ ಇತ್ತು” ಎಂದಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ದೇಶದ ಖ್ಯಾತ ಮತ್ತು ಪ್ರತಿಭಾವಂತ ವಕೀಲರಾಗಿದ್ದ ನಾರಿಮನ್ ಅವರ ಜೊತೆಗೆ ನನ್ನದು ದೀರ್ಘಕಾಲದ ಒಡನಾಟ. ನೀರಾವರಿಗೆ ಸಂಬಂಧಿಸಿದ ಎಂತಹ ಜಟಿಲ ಸಮಸ್ಯೆಗಳು ಎದುರಾದರೂ ಉದ್ವೇಗಗೊಳ್ಳದೆ ಪರಿಹಾರದ ಕ್ರಮಗಳನ್ನು ಸೂಚಿಸುತ್ತಿದ್ದ ಅವರ ಕಸುಬುಗಾರಿಕೆ ಅನನ್ಯವಾದುದು. ಆಂತರಿಕವಾದ ಸಭೆಯಲ್ಲಿ ಅವರು ನೀಡುತ್ತಿದ್ದ ಸಲಹೆಗಳು ಮತ್ತು ನ್ಯಾಯಾಲಯದಲ್ಲಿ ಮಂಡಿಸುತ್ತಿದ್ದ ವಾದಗಳಿಂದ ನೀರಾವರಿ ವಿಷಯದಲ್ಲಿ ನನ್ನ ಜ್ಞಾನವೃದ್ಧಿಯಾಗಿದೆ ಎನ್ನುವುದನ್ನು ಕೃತಜ್ಞತೆಯಿಂದ ನೆನಪು ಮಾಡಿಕೊಳ್ಳುತ್ತೇನೆ” ಎಂದು ಅವರ ಜೊತಿಇನ ಒಡನಾಟ ಮೆಲುಕು ಹಾಕಿದ್ದಾರೆ.

“ಹೋಗಿ ಬನ್ನಿ ನಾರಿಮನ್ ಸಾಬ್, ಕನ್ನಡಿಗರ ಮನಸ್ಸಿನಲ್ಲಿ ನಿಮ್ಮ ನೆನಪು ಸದಾ ಹಸಿರಾಗಿರುತ್ತದೆ” ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.‌

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪದವೀಧರರಿಗೆ ಹೆಂಡ ಕುಡಿಸಿ ಚಟಗಳ ದಾಸರನ್ನಾಗಿಸುತ್ತಿರುವ ಬಿಜೆಪಿ: ಕಾಂಗ್ರೆಸ್‌ ಕಿಡಿ

ಕಾಂಗ್ರೆಸ್ ಪಕ್ಷ ಪದವೀಧರರಿಗೆ ಯುವನಿಧಿ ಯೋಜನೆ ನೀಡಿದೆ, ಉದ್ಯೋಗ ಸೃಷ್ಟಿಸಲು ಶ್ರಮಿಸುತ್ತಿದೆ,...

ಬೀದರ್‌ | ಸಿಪಿಐ ಮೇಲೆ ಮಾರಣಾಂತಿಕ ಹಲ್ಲೆ; ರೌಡಿಶೀಟರ್‌ ಕಾಲಿಗೆ ಗುಂಡೇಟು

ಪೊಲೀಸ್ ಠಾಣೆಯಿಂದ ಚಿಕಿತ್ಸೆ ಕೊಡಿಸಲು ಆಸ್ಪತ್ರೆಗೆ ಕರೆದೊಯ್ಯುವಾಗ ತಪ್ಪಿಸಿಕೊಳ್ಳುವ ಸಲುವಾಗಿ‌ ರೌಡಿಶೀಟರ್‌...

ಬೀದರ್‌ | ʼಜೈಶ್ರೀರಾಮ್‌ʼ ಹಾಡು ಹಾಕಿದಕ್ಕೆ ಹಿಂದೂ-ಮುಸ್ಲಿಂ ವಿದ್ಯಾರ್ಥಿಗಳ ನಡುವೆ ಗಲಾಟೆ

ಧರ್ಮವೊಂದಕ್ಕೆ ಸಂಬಂಧಿಸಿದ ಗೀತೆಗೆ ನೃತ್ಯ ಮಾಡುತ್ತಿರುವಾಗ ಎರಡು ಸಮುದಾಯದ ವಿದ್ಯಾರ್ಥಿಗಳು ಪರಸ್ಪರ...

ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ತಿರಸ್ಕರಿಸಿದ ಕೋರ್ಟ್: ವಿದೇಶದಿಂದ ಬಂದ ಕೂಡಲೇ ಬಂಧನ?

ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಹೊತ್ತಿರುವ ಹಾಸನ ಜೆಡಿಎಸ್ ಸಂಸದ ಪ್ರಜ್ವಲ್...