ಸರ್ಕಾರದ ಜಾತಿ ಗಣತಿ ನಾಟಕ ಲೋಕಸಭೆ ಚುನಾವಣೆವರೆಗೂ ಮಾತ್ರ: ಎಚ್‌ಡಿ ಕುಮಾರಸ್ವಾಮಿ

Date:

ಲೋಕಸಭೆ ಚುನಾವಣೆವರೆಗೂ ಈ ಸರ್ಕಾರ ಜಾತಿಗಣತಿ ನಾಟಕವಾಡುತ್ತದೆ. ವರದಿಯನ್ನು ಇನ್ನೂ ನಾಲ್ಕು ತಿಂಗಳು ಅಧ್ಯಯನ ಮಾಡಲಾಗುವುದು ಎಂದು ಸರ್ಕಾರ ಹೇಳುತ್ತಿದೆ. ನನ್ನ ಪ್ರಕಾರ ಲೋಕಸಭೆ ಚುನಾವಣೆ ತನಕ ಇದು ಏನೂ ಆಗಲ್ಲ. ಈ ವಿಷಯದಲ್ಲಿ ಯಾರೂ ಗಾಬರಿ ಆಗಬೇಕಾದ ಅವಶ್ಯಕತೆ ಇಲ್ಲ. ಸರ್ಕಾರದ ಕೈಯಲ್ಲಿ ಏನೂ ಆಗಲ್ಲ ಎಂದು ಜೆಡಿಎಸ್ ಅಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಹೇಳಿದರು.

ರಾಮನಗರದಲ್ಲಿ ವಕೀಲರು ನಡೆಸುತ್ತಿದ್ದ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದೇ ಸಿದ್ದರಾಮಯ್ಯ ಅವರು 2018ರಲ್ಲಿ ಕಾಂತರಾಜ ವರದಿ ಕೊಡಲು ಬಂದಾಗ ಆ ವರದಿಯನ್ನು ಕುಮಾರಸ್ವಾಮಿ ಸ್ವೀಕರಿಸಿಲ್ಲ ಎಂದು ಹೇಳುತ್ತಿದ್ದಾರೆ. ಹಾಗಾದರೆ, ಆಗಲೇ ವರದಿ ಸಿದ್ದವಾಗಿತ್ತಲ್ವಾ? ನಿಮ್ಮ ಸರಕಾರ ಬಂದು 6 ತಿಂಗಳಾಗಿದೆ. ಇನ್ನೂ ಯಾಕೆ ವರದಿ ಸ್ವೀಕಾರ ಮಾಡಿಲ್ಲ ಎಂದು ಸಿದ್ದರಾಮಯ್ಯ ಅವರನ್ನು ಪ್ರಶ್ನಿಸಿದರು.

ಎಸಿ ಕೋರ್ಟ್ ಕನಕಪುರಕ್ಕೆ ವರ್ಗಾವಣೆಗೆ ವಿರೋಧ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ರಾಮನಗರ ಜಿಲ್ಲಾ ಕೇಂದ್ರದಲ್ಲಿ ಸಿವಿಲ್ ಪ್ರಕರಣಗಳನ್ನು ವಿಚಾರಣೆ ನಡೆಸುವ ಎಸಿ ಕೋರ್ಟ್ ಅನ್ನು ಕನಕಪುರಕ್ಕೆ ವರ್ಗಾವಣೆ ಮಾಡುವುದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಇದು ಮಕ್ಕಳಾಟವೇ ಎಂದು ಕಿಡಿಕಾರಿದ್ದಾರೆ.

ಈ ಸುದ್ದಿ ಓದಿದ್ದೀರಾ? ಡ್ರಗ್ಸ್ ಖರೀದಿಸಲು ಹೆತ್ತ ಮಕ್ಕಳನ್ನೆ ಮಾರಾಟ ಮಾಡಿದ ದಂಪತಿ

ಎಸಿ ಕೋರ್ಟ್ ಅನ್ನು ವಾರದಲ್ಲಿ ಒಂದು ದಿನ ಕನಕಪುರಕ್ಕೆ ತೆಗೆದುಕೊಂಡು ಹೋಗಿದ್ದೀರಿ. ಇದನ್ನು ಇಡೀ ರಾಜ್ಯದ ಪ್ರತಿ ತಾಲೂಕಿನಲ್ಲೂ ಮಾಡಿ. ಪ್ರತಿ ತಾಲೂಕಿಗೆ ಒಂದೊಂದು ಎಸಿ ಕೋರ್ಟ್ ಮಾಡಿ ಎಂದ ಅವರು, ಇದು ಸರ್ವಾಧಿಕಾರಿ ಧೋರಣೆ. ಕೋರ್ಟ್ ಸ್ಥಳಾಂತರಕ್ಕೆ ಅಂತಹ ತರಾತುರಿ ಏನಿದೆ? ಎಂದು ಆಕ್ರೋಶ ವ್ಯಕ್ತಪಡಿಸಿದರು.

ಹೆದರಿಸಿ, ಬೆದರಿಸಿ ಅಕ್ರಮವಾಗಿ ಬೇಲಿ ಹಾಕಿಕೊಂಡಿರುವ ಎಲ್ಲ ಭೂಮಿಗಳ ಪೋಡಿ ಮಾಡಿಸುವುದಕ್ಕೆ, ಲೂಟಿ ಮಾಡುವುದಕ್ಕೆ ಹೀಗೆ ಮಾಡುತ್ತಿದ್ದಾರೆ. ಅದೆಂತದ್ದೋ ಗ್ಲೋಬಲ್ ಸಿಟಿ ಮಾಡಲು, ಲೂಟಿ ಮಾಡೋಕೆ ಈ ಕೆಲಸಕ್ಕೆ ಕೈ ಹಾಕಿದ್ದಾರೆ ಎಂದು ಯಾರ ಹೆಸರನ್ನೂ ಹೇಳದೆ ಅವರು ಕಟುವಾಗಿ ಟೀಕಿಸಿದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜೂನ್ ಮೊದಲ ವಾರದಲ್ಲೇ ಏಕನಾಥ್‌ ಶಿಂದೆ ಸರ್ಕಾರ ಪತನ: ಎಂ ಬಿ ಪಾಟೀಲ್‌

ಲೋಕಸಭೆ ಚುನಾವಣೆಯ ಬಳಿಕ ಕರ್ನಾಟಕ ಸರಕಾರ ಉರುಳಿ ಬೀಳಲಿದೆ ಎನ್ನುತ್ತಿರುವ ಮಹಾರಾಷ್ಟ್ರದ...

ಕರ್ನಾಟಕದಲ್ಲಿ ಆಪರೇಶನ್ ಕಮಲ ಬಿಜೆಪಿಯ ಹಗಲುಗನಸು: ಸಿಎಂ ಸಿದ್ದರಾಮಯ್ಯ

ಯಾವ ಕಾರಣಕ್ಕೂ ನಮ್ಮ ಸರ್ಕಾರವನ್ನು ಆಪರೇಷನ್ ಕಮಲ ಮಾಡಲು ಸಾಧ್ಯವಿಲ್ಲ. ಏಕೆಂದರೆ...

ಮುಸ್ಲಿಮರ ಜನಸಂಖ್ಯೆ ತೋರಿಸಲು ಪಾಕಿಸ್ತಾನದ ಧ್ವಜ ಬಳಕೆ : ಸುವರ್ಣ ನ್ಯೂಸ್ ವಿರುದ್ಧ ಎಫ್‌ಐಆರ್

ಪ್ರಧಾನ ಮಂತ್ರಿಗಳ ಆರ್ಥಿಕ ಸಲಹಾ ಮಂಡಳಿಯು ಬಿಡುಗಡೆ ಮಾಡಿರುವ ಜನಸಂಖ್ಯಾ ವರದಿಯ...

ಸಂಸದ ಪ್ರಜ್ವಲ್‌ ರೇವಣ್ಣ ಸರ್ಕಾರಿ ನಿವಾಸಕ್ಕೆ ಎಫ್‌ಎಸ್ಎಲ್ ತಂಡ ಭೇಟಿ, ಸಾಕ್ಷಿಗಾಗಿ ಹುಡುಕಾಟ

ಜೆಡಿಎಸ್‌ ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿರುವ ಹಿನ್ನೆಲೆಯಲ್ಲಿ...