ಅರಣ್ಯ ಚಿತ್ರೀಕರಣಕ್ಕೆ ಸರ್ಕಾರದ ಅನುಮತಿ ಕಡ್ಡಾಯ: ಸಚಿವರ ಆದೇಶ

Date:

ಅರಣ್ಯ ಪ್ರದೇಶದಲ್ಲಿ ಇನ್ನು ಮುಂದೆ ಸಿನಿಮಾ, ಸಾಕ್ಷ್ಯಚಿತ್ರ, ಧಾರಾವಾಹಿ ಸೇರಿದಂತೆ ಯಾವುದೇ ಚಿತ್ರೀಕರಣಕ್ಕೆ ಸರ್ಕಾರದ ಅನುಮತಿ ಪಡೆಯುವುದನ್ನು ಕಡ್ಡಾಯಗೊಳಿಸಿ ಆದೇಶ ಹೊರಡಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್‌ ಖಂಡ್ರೆ ಸೂಚನೆ ನೀಡಿದ್ದಾರೆ.

- Advertisement -

ಈ ಸಂಬಂಧ ಅರಣ್ಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯವರಿಗೆ ಸಚಿವರು ಸೂಚನೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಚಿತ್ರೀಕರಣದಿಂದ ಪರಿಸರ ಹಾಗೂ ಜೀವವೈವಿಧ್ಯಕ್ಕೂ ಧಕ್ಕೆ ತರುತ್ತದೆ. ಅರಣ್ಯ ಹಾಗೂ ವನ್ಯ ಜೀವಿಗಳನ್ನು ಸಂರಕ್ಷಿಸಿ ಮುಂದಿನ ಪೀಳಿಗೆಗೆ ಉತ್ತಮ ಪರಿಸರ, ಪ್ರಕೃತಿ ಹಸ್ತಾಂತರಿಸುವ ನಿಟ್ಟಿನಲ್ಲಿ ರಾಜ್ಯದ ಯಾವುದೇ ಅರಣ್ಯ ಪ್ರದೇಶದಲ್ಲಿ ಯಾವುದೇ ಬಗೆಯ ಚಿತ್ರೀಕರಣಕ್ಕೆ ಕಡ್ಡಾಯವಾಗಿ ಸರ್ಕಾರದ ವತಿಯಿಂದ ಅನುಮತಿ ಪಡೆಯಲು ಸೂಕ್ತ ಆದೇಶ ಹೊರಡಿಸಬೇಕು ಎಂದು ತಿಳಿಸಲಾಗಿದೆ.

‘ರಾಜ್ಯದ ಅರಣ್ಯ ಪ್ರದೇಶಗಳಲ್ಲಿ ಸಿನಿಮಾ, ಧಾರಾವಾಹಿ, ಸಾಕ್ಷ್ಯಚಿತ್ರ ಇತ್ಯಾದಿಗಳನ್ನು ಚಿತ್ರೀಕರಿಸಲು ಶುಲ್ಕ ಪಡೆದು ಅನುಮತಿಸಲಾಗುತ್ತಿದೆ. ಪ್ರಸ್ತುತ ಅರಣ್ಯ ಪ್ರದೇಶದ ಚಿತ್ರೀಕರಣಕ್ಕೆ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಅನುಮತಿ ನೀಡುತ್ತಿರುವುದು ಸರಿಯಷ್ಟೆ. ಇತ್ತೀಚಿನ ದಿನಗಳಲ್ಲಿ ಅರಣ್ಯ ಪ್ರದೇಶದ ಚಿತ್ರೀಕರಣದಿಂದಾಗಬಹುದಾದ ತೊಂದರೆಗಳು ಹಾಗೂ ಇದಕ್ಕೆ ಸಂಬಂಧಿಸಿದ ಅಪರಾಧಗಳ ಗಂಭೀರತೆ ಕುರಿತು ಮಾಧ್ಯಮಗಳಲ್ಲಿ ಸುದ್ದಿ ಪ್ರಚುರಗೊಂಡಿರುವುದನ್ನು ಗಮನಿಸಲಾಗಿದೆ’ ಎಂದು ತಿಳಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮೈಕ್ರೋ ಫೈನಾನ್ಸ್‌ಗೆ ಬಲಿಯಾಗುತ್ತಿರುವ ಬಡವರು; ಸತ್ತಂತಿರುವ ಸರ್ಕಾರ

‘ಅರಣ್ಯ ಪ್ರದೇಶಗಳಲ್ಲಿ ವಿವಿಧ ಬಗೆಯ ಚಿತ್ರೀಕರಣಕ್ಕೆ ಸ್ಥಳೀಯ ಮಟ್ಟದ ಅಧಿಕಾರಿಗಳು ಅನುಮತಿಯನ್ನು ನೀಡುತ್ತಿದ್ದಾರೆ. ಇದರಿಂದ ಅರಣ್ಯ ಪ್ರದೇಶದ ಗೌಪ್ಯ ಮಾಹಿತಿಯು ಹೊರ ಜಗತ್ತಿಗೆ ದೊರೆಯುವ ಸಂಭವವಿರುತ್ತದೆ. ಅರಣ್ಯ ಮತ್ತು ವನ್ಯಜೀವಿಗಳ ಸೂಕ್ಷ್ಮತೆಯ ಅರಿವಿಲ್ಲದೆ ಪರಿಸರ ಹಾಗೂ ಜೀವ ವೈವಿಧ್ಯಕ್ಕೆ ದಕ್ಕೆ ಉಂಟಾಗುವ ಸಂಭವವಿರುತ್ತದೆ’ ಎಂದು ಪ್ರಕಟಣೆಯಲ್ಲಿ ಹೇಳಲಾಗಿದೆ.

‘ಅರಣ್ಯ ಹಾಗೂ ವನ್ಯ ಜೀವಿಗಳನ್ನು ಸಂರಕ್ಷಿಸಿ. ಮುಂದಿನ ಪೀಳಿಗೆಗೆ ಉತ್ತಮ ಪರಿಸರ, ಅರಣ್ಯ ಹಾಗೂ ವನ್ಯಜೀವಿಗಳನ್ನು ಉಳಿಸುವ ಹಿತದೃಷ್ಟಿಯಿಂದ, ರಾಜ್ಯದ ಅರಣ್ಯ ಪ್ರದೇಶಗಳಲ್ಲಿ ಯಾವುದೇ ಬಗೆಯ ಚಿತ್ರೀಕರಣಕ್ಕೆ ಕಡ್ಡಾಯವಾಗಿ ಸರ್ಕಾರದ ವತಿಯಿಂದ ಅನುಮತಿ ಪಡೆಯಬೇಕು’ ಎಂದು ಸರ್ಕಾರ ಆದೇಶದಲ್ಲಿ ತಿಳಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡದಲ್ಲಿ ಮೃತ್ಯುಕೂಪವಾಗಿರುವ NH-66: RSS ವರ್ತಕರ ಆಟ ಮತ್ತು IRB ಕಂಪನಿ ಕಾಟ!

ಉತ್ತರ ಕನ್ನಡದ ಭಟ್ಕಳದಿಂದ ಕಾರವಾರದ ತನಕದ ಸುಮಾರು 160 ಕಿಮೀ ಚತುಷ್ಪಥ...

ರಾಜ್ಯಕ್ಕೆ ಬಾಕಿ ಅನುದಾನ: ಶೀಘ್ರದಲ್ಲೇ ‘ಸಿಹಿ ಸುದ್ದಿ’- ಡಿ.ಕೆ. ಶಿವಕುಮಾರ್

ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರಬೇಕಾದ ಹಳೆಯ ಬಾಕಿ ಅನುದಾನದ ಕುರಿತಂತೆ ಶೀಘ್ರದಲ್ಲೇ...

ಸರ್ಕಾರ ಬೀಳಿಸಲು ಬಂದಿಲ್ಲ, ಅಕ್ರಮ ಪ್ರಶ್ನಿಸಲು ಬಂದಿದ್ದೇನೆ: ಖ್ಯಾತ ಯೂಟ್ಯೂಬರ್ ಧೃವ್ ರಾಠಿ

"ನಾನು ಯಾವುದೇ ಸರ್ಕಾರವನ್ನು ಕೆಡವಲು ಅಥವಾ ಬದಲಾಯಿಸಲು ಇಲ್ಲಿಗೆ ಬಂದಿಲ್ಲ. ನನಗೆ...

ಪ್ರಜಾಪ್ರಭುತ್ವದ ಹಕ್ಕು ಕಿತ್ತುಕೊಳ್ಳಲು ಮೋದಿ ಸರ್ಕಾರ ಯತ್ನಿಸುತ್ತಿದೆ, ಜೆನ್-ಝೀಗಳು ಸಹಿಸುವುದಿಲ್ಲ: ಐಶೀ ಘೋಷ್

"ನಾವು ಪ್ರಸ್ತುತ ದೇಶದಲ್ಲಿ ಏನೇನು ನಡೆಯುತ್ತಿದೆ ಎಂಬುದನ್ನು ಚೆನ್ನಾಗಿ ತಿಳಿದುಕೊಂಡಿದ್ದೇವೆ. ದೇಶದ...