ರಾಜ್ಯದ ಜನತೆಗೆ 75ನೇ ಗಣರಾಜ್ಯೋತ್ಸವದ ಶುಭಾಶಯ ಕೋರಿದ ರಾಜ್ಯಪಾಲ ಥಾವರ ಚಂದ್ ಗೆಹ್ಲೋಟ್

Date:

ಕರ್ನಾಟಕ ರಾಜ್ಯದ ರಾಜ್ಯಪಾಲ ಥಾವರ್‌ಚಂದ್ ಗೆಹೋಟ್ ಅವರು ನಾಡಿನ ಸಮಸ್ತ ಜನತೆಗೆ 75ನೇ ಗಣರಾಜ್ಯೋತ್ಸವದ ಶುಭಾಶಯ ಕೋರಿದ್ದಾರೆ.

- Advertisement -

ಜನತೆಯನ್ನು ಉದ್ದೇಶಿಸಿ ಭಾಷಣ ಮಾಡಿದ ಅವರು, “ಸಂವಿಧಾನ ಅನುಷ್ಠಾನಗೊಂಡ 75ನೇ ವರ್ಷದಲ್ಲಿ ಕರ್ನಾಟಕ ಹಾಗೂ ಭಾರತವು ಅಭೂತಪೂರ್ವ ಪ್ರಗತಿಯನ್ನು ಸಾಧಿಸಿವೆ. ಇದು ನಾವು 1950ರಲ್ಲಿ ನಮ್ಮ ಅದ್ಭುತ ಲಿಖಿತ ಸಂವಿಧಾನವನ್ನು ಅಳವಡಿಸಿಕೊಂಡ ಕಾರಣದಿಂದಾಗಿ ಸಾಧ್ಯವಾಗಿದೆ. ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಅವರ ತಂಡದ ಸದಸ್ಯರ ದೂರದೃಷ್ಟಿಗೆ ನಾವು ಅಭಾರಿಯಾಗಿದ್ದೇವೆ. ಅವರು ನಮಗೆ ಪ್ರಗತಿಯ ದಾರಿಯಲ್ಲಿ ನಡೆಯುವುದಕ್ಕೆ ದಾರಿದೀಪವಾಗಿದ್ದಾರೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

“ಯುಗಯುಗಾಂತರಗಳಿಂದ ಮಾನವೀಯತೆ ನೆಲೆಸಿರುವ ರಾಷ್ಟ್ರ ನಮ್ಮ ಭಾರತ. ಇದು ವಿಭಿನ್ನ ಧರ್ಮ, ಸಮಾಜ, ಸಂಸ್ಕೃತಿ ಮತ್ತು ಭಾಷೆಗಳಿಂದ ಆಶೀರ್ವದಿಸಲ್ಪಟ್ಟಿರುವ ದೇಶವಾಗಿದೆ. ಎಲ್ಲವೂ ಪರಸ್ಪರ ಸೌಹಾರ್ದತೆಯಿಂದ ಪರಸ್ಪರ ಸಂಬಂಧ ಹೊಂದಿದೆ. ಇಡೀ ಜಗತ್ತಿಗೆ ‘ವಿವಿಧತೆಯಲ್ಲಿ ಏಕತೆ’ ಎಂಬ ಸಂದೇಶವನ್ನು ನೀಡುವ ಎಲ್ಲರ ನಡುವೆ ನಾವು ಶಾಂತಿ ಮತ್ತು ಸಾಮರಸ್ಯವನ್ನು ಸ್ಥಾಪಿಸಬೇಕು. ನಮ್ಮ ರಾಷ್ಟ್ರೀಯ ಏಕತೆಯ ಬಲವರ್ಧನೆ ಮತ್ತು ಐಕ್ಯಮತ್ಯಕ್ಕಾಗಿ ಶ್ರಮಿಸಬೇಕು. ಕರ್ನಾಟಕದ ಎಲ್ಲ ಕ್ಷೇತ್ರಗಳ ಸರ್ವಾಂಗೀಣ ಅಭಿವೃದ್ಧಿ ಮತ್ತು ಒಳಗೊಳ್ಳುವಿಕೆಗಾಗಿ ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡೋಣ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಣ್ಣ ಕುರುಬನೆಂದು ಗೌರವಿಸದೆ, ದೇಶಪ್ರೇಮಿಯೆಂದು ಸ್ಮರಿಸಿ: ಮುಖ್ಯಮಂತ್ರಿ ಸಿದ್ದರಾಮಯ್ಯ

“ಈ ಐತಿಹಾಸಿಕ ದಿನದಂದು ಭಾರತದ ಸಂವಿಧಾನವು ಜಾರಿಗೆ ಬಂದಿತು. ಸಂವಿಧಾನವು ಭಾರತದ ನಾಗರಿಕರಿಗೆ ನ್ಯಾಯ, ಸ್ವಾತಂತ್ರ್ಯ ಹಾಗೂ ಸಮಾನತೆಯ ಅವಕಾಶವನ್ನು ಒದಗಿಸುವುದರೊಂದಿಗೆ ದೇಶದ ಸಮಗ್ರತೆ, ಏಕತೆಯನ್ನು ಕಾಪಾಡುವ ಜತೆಗೆ ಸ್ವಾಭಿಮಾನದ ಜೀವನ ಒದಗಿಸುವ ಧ್ಯೇಯವನ್ನು ಹೊಂದಿದೆ. ಆ ಮೂಲಕ ನಾಗರಿಕರು ತಮ್ಮ ಏಳಿಗೆಯೊಂದಿಗೆ ರಾಷ್ಟ್ರದ ಅಭಿವೃದ್ಧಿಗೆ ಕೊಡುಗೆ ನೀಡಲು ಅವಕಾಶ ಕಲ್ಪಿಸಿದೆ. ಸಂವಿಧಾನದ ಈ ಆಶಯಗಳನ್ನು ಸಾಕಾರಗೊಳಿಸಲು ನನ್ನ ಸರ್ಕಾರ ಶ್ರಮಿಸುತ್ತಿದೆ” ಎಂದರು.

“ನನ್ನ ಸರ್ಕಾರವು ಐದು ಗ್ಯಾರಂಟಿಗಳನ್ನು ಜಾರಿಗೊಳಿಸುವುದಾಗಿ ಭರವಸೆ ನೀಡಿತ್ತು. ಅದರಂತೆ, ಎಲ್ಲ ಐದು ಗ್ಯಾರಂಟಿಗಳಾದ ಶಕ್ತಿ ಯೋಜನೆ, ಅನ್ನಭಾಗ್ಯ, ಗೃಹಜ್ಯೋತಿ, ಗೃಹಲಕ್ಷ್ಮಿ ಮತ್ತು ಯುವನಿಧಿ ಯೋಜನೆಗಳನ್ನು ನಾವು ರಾಜ್ಯದಲ್ಲಿ ಅನುಷ್ಠಾನಗೊಳಿಸಿದ್ದೇವೆ ಎಂದು ಹರ್ಷಿಸುತ್ತೇನೆ” ಎಂದು ತಿಳಿಸಿದರು.

“2023ರ ಜೂನ್ 11ರಂದು ಮಹತ್ವಾಕಾಂಕ್ಷಿ ಯೋಜನೆಯಾದ ‘ಶಕ್ತಿ ಯೋಜನೆ’ ಮಹಿಳೆಯರಿಗೆ ಉಚಿತ ಪ್ರಯಾಣವನ್ನು ಜಾರಿಗೊಳಿಸಿ ಮಹಿಳಾ ಸಬಲೀಕರಣದತ್ತ ಹೊಸ ಹೆಜ್ಜೆಯಿಟ್ಟಿದೆ. ರಾಜ್ಯದ 3.5 ಕೋಟಿ ಮಹಿಳೆಯರು ಈ ಯೋಜನೆಯ ಲಾಭ ಪಡೆಯುತ್ತಿದ್ದಾರೆ. ಈ ಯೋಜನೆ ಪ್ರಾರಂಭವಾದಂದಿನಿಂದ ಇಲ್ಲಿಯವರೆಗೆ 134.34 ಕೋಟಿ ಮಹಿಳಾ ಪ್ರಯಾಣಿಕರು ಶಕ್ತಿ ಯೋಜನೆಯಡಿ ಪ್ರಯಾಣ ಮಾಡಿದ್ದಾರೆ” ಎಂದು ಹೇಳಿದರು.

“ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾದ ಅನ್ನಭಾಗ್ಯ, ಗೃಹಜ್ಯೋತಿ, ಗೃಹಲಕ್ಷ್ಮಿ ಹಾಗೂ ಯುವನಿಧಿ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲಾಗಿದೆ” ಎಂದರು.

“ಡಾ. ಪುನೀತ್ ರಾಜ್‌ಕುಮಾರ್ ಹೃದಯ ಜ್ಯೋತಿ ಯೋಜನೆಯಡಿ ಸಾರ್ವಜನಿಕ ಸ್ಥಳಗಳಲ್ಲಿ ಹಠಾತ್ ಹೃದಯಾಘಾತದಿಂದ ಸಂಭವಿಸುವ ಮರಣಗಳನ್ನು ತಡೆಗಟ್ಟಲು ಸಾರ್ವಜನಿಕ ದಟ್ಟಣೆಯ ಸ್ಥಳ, ಬಸ್ ನಿಲ್ದಾಣ, ರೈಲು ನಿಲ್ದಾಣ ಮತ್ತು ಸರ್ಕಾರಿ ಕಚೇರಿಗಳಲ್ಲಿ ಎಇಡಿ ಅಟೋಮೇಟೆಡ್ ಸಾಧನಗಳನ್ನು ರೂಪಿಸಲಾಗುತ್ತಿದೆ” ಎಂದು ಹೇಳೀದರು.

“ಬೆಂಗಳೂರು ನಗರದ ಸರ್ವತೋಮುಖ ಅಭಿವೃದ್ಧಿ ಮತ್ತು ಬೆಂಗಳೂರನ್ನು ಜಾಗತಿಕ ಕೇಂದ್ರವನ್ನಾಗಿ ಮಾಡುವ ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ‘ಬ್ರಾಂಡ್ ಬೆಂಗಳೂರು’ ಸಾರ್ವಜನಿಕರ ಧ್ವನಿ ಸರ್ಕಾರದ ಧ್ವನಿ ಎಂಬ ಮನೋಭಾವದಿಂದ ರೂಪಿಸಲಾಗಿದೆ” ಎಂದರು.

“ಬೆಂಗಳೂರಿನ ಸಮಗ್ರ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ಸುಗಮ ಸಂಚಾರಕ್ಕೆ ಹೆಚ್ಚಿನ ಒತ್ತು ನೀಡಬೇಕಾದ ಅಗತ್ಯತೆಯನ್ನು ಮನಗಂಡು ಬೆಂಗಳೂರಿನ ಮುಖ್ಯ ರಸ್ತೆಗಳ ಸುಸ್ಥಿರ ಅಭಿವೃದ್ಧಿಗಾಗಿ ಸುಮಾರು 2,000 ರೂಪಾಯಿಗಳ ಯೋಜನೆಯನ್ನು ರೂಪಿಸಿ ಪ್ರಮುಖ ರಸ್ತೆಗಳ ವೈಟ್ ಟಾಪಿಂಗ್‌ಗಾಗಿ ಟೆಂಡರ್ ಕರೆಯುವ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ” ಎಂದರು.

“ರಾಜ್ಯದ ಎಲ್ಲ ಶಾಲೆಗಳಲ್ಲಿ ‘ಭಾರತ ಸಂವಿಧಾನ’ ಪೀಠಿಕೆ ವಿನ್ಯಾಸದ ಫೋಟೋವನ್ನು ತೂಗು ಹಾಕಲು ಹಾಗೂ ಪ್ರತಿನಿತ್ಯ ಪ್ರಾರ್ಥನಾ ಸಮಯದಲ್ಲಿ ಸಂವಿಧಾನ ಪೀಠಿಕೆಯನ್ನು ಓದಲು ಕ್ರಮವಹಿಸಲಾಗಿದೆ. ಪರಿಶಿಷ್ಟ ಜಾತಿಯ 69,190 ಪ್ರತಿಭಾವಂತ ವಿದ್ಯಾರ್ಥಿಗಳಿಗೆ ₹133.82 ಕೋಟಿ ಮೊತ್ತದ ಪ್ರೋತ್ಸಾಹ ಧನ ನೀಡಲಾಗಿದೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ನಿರುದ್ಯೋಗಿಗಳಿಗೆ ‘ಸ್ವಾವಲಂಬಿ ಸಾರಥಿ’ ಎಂಬ ಯೋಜನೆಯನ್ನು ಜಾರಿಗೆ ತಂದಿದ್ದು, ನಾಲ್ಕು ಚಕ್ರಗಳ ವಾಹನಗಳಿಗೆ ಶೇ.75 ರಷ್ಟು ಗರಿಷ್ಠ ₹4 ಲಕ್ಷಗಳ ಸಹಾಯಧನ ನೀಡಲು ಕ್ರಮವಹಿಸಲಾಗುತ್ತಿದೆ” ಎಂದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಭಾರತದಲ್ಲಿ ಮಹಿಳೆಯರ ಮೇಲೆ ನಿರಂತರ ದೌರ್ಜನ್ಯ; ಮಾವಳ್ಳಿ ಶಂಕರ್

ಚಿಕ್ಕಮಗಳೂರಿನ ಮಹಾರಾಜ ಗ್ರ್ಯಾಂಡ್ ಹೋಟೆಲ್ ನಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ...

ಹಾಸನ | ಪ್ರತಿಭಟನೆ ಹತ್ತಿಕ್ಕುವ ಪ್ರಜಾಪ್ರಭುತ್ವ ವಿರೋಧಿ ಕ್ರಮ ಖಂಡಿಸಿ ಜನಪರ ಒಕ್ಕೂಟ ಪ್ರತಿಭಟನೆ 

ಪ್ರತಿಭಟನೆಯನ್ನು ಹತ್ತಿಕ್ಕುವ ಪ್ರಜಾಪ್ರಭುತ್ವ ವಿರೋಧಿ ಕ್ರಮವನ್ನು ಖಂಡಿಸಿ ಹಾಸನದ ಹೇಮಾವತಿ ಪ್ರತಿಮೆಯ...

ಚಿಕ್ಕಮಗಳೂರು | SIR ವಿರೋಧ: ಫಾರಂ – 7ರಲ್ಲಿ ತಪ್ಪು ಮಾಹಿತಿ ನೀಡಿ, ಮತವಂಚಿಸಲಾಗಿದೆ; ಎದ್ದೇಳು ಕರ್ನಾಟಕ 

SIR ವಿರೋಧಿಸಿ, ಚುನಾವಣಾ ಆಯುಕ್ತರಾದ ಜ್ಞಾನೇಶ್‌ಕುಮಾರ್‌ರವರನ್ನು ವಜಾಗೊಳಿಸಲು ಮತ್ತು ಫಾರಂ ನಂ.7...

ಗದಗ | ಮಾಜಿ ಗ್ರಾ. ಪಂ ಸದಸ್ಯನ ಬರ್ಬರ ಹತ್ಯೆ

ಲಕ್ಕುಂಡಿ ಗ್ರಾಮದ ಹೊರವಲಯದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರೊಬ್ಬರನ್ನು ಬರ್ಬರವಾಗಿ ಹತ್ಯೆ...