ಹಾಸನ | ಬಿಜೆಪಿ ಸರ್ಕಾರ ಧರ್ಮವನ್ನು ಮುಂದೆ ತಂದು ಕಾರ್ಮಿಕರ ನಡುವೆ ಒಡೆದಾಳುವ ನೀತಿ ಅನುಸರಿಸುತ್ತಿದೆ: ಸಿಐಟಿಯು ಕೆ ಹೇಮಲತಾ

Date:

ಒಗ್ಗಟ್ಟಾಗುವ ಕಾರ್ಮಿಕರನ್ನು ಚದುರಿಸುವ ಕೆಲಸ ಮಾಡುತ್ತಿದೆ. ಆರ್‌ಎಸ್‌ಎಸ್‌ನ ಮಾರ್ಗದರ್ಶನದಲ್ಲಿ ನಡೆಯುತ್ತಿರುವ ಬಿಜೆಪಿ ಸರ್ಕಾರ ಧರ್ಮವನ್ನು ಮುಂದೆ ತಂದು ಕಾರ್ಮಿಕರ ನಡುವೆ ಒಡೆದಾಳುವ ನೀತಿಯನ್ನು ಅನುಸರಿಸುತ್ತಿದೆ ಎಂದು ಸಿಐಟಿಯು ರಾಷ್ಟ್ರೀಯ ಅಧ್ಯಕ್ಷೆ ಕೆ ಹೇಮಲತಾ ಹೇಳಿದರು.

- Advertisement -

ಹಾಸನ ನಗರದಲ್ಲಿ ನಡೆದ ಸಿಐಟಿಯು 16ನೇ ರಾಜ್ಯ ಸಮ್ಮೇಳನದ ಮೂರನೇ ದಿನದ ಬಹಿರಂಗ ಸಭೆಯಲ್ಲಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಅಂಗನವಾಡಿ, ಕಾರ್ಮಿಕರು, ಆಶಾ ಕಾರ್ಯಕರ್ತೆಯರು, ಬೀಡಿಕಾರ್ಮಿಕರು ಸೇರಿದಂತೆ ಸ್ವಚ್ಛತೆ ಕಾರ್ಮಿಕರ ವೇತನದ ಹಕ್ಕು, ಸಮಯದ ಹಕ್ಕುಗಳನ್ನು ಕಿತ್ತುಕೊಳ್ಳಲಾಗಿದೆ. ಎಲ್ಲ ಕಾರ್ಮಿಕರ ಬವಣೆಗಳನ್ನು ಚರ್ಚಿಸಲಾಗಿದೆ. ಇದರ ಪರಿಹಾರಕ್ಕೆ ಯಾವ ರೀತಿಯ ಕ್ರಮಗಳನ್ನು ಕೈಗೊಳ್ಳಬೇಕು ಎಂಬುದನ್ನು ಕಂಡುಕೊಳ್ಳಬೇಕು ಎನ್ನುವ ಚಿಂತನೆಯನ್ನು ನಡೆಸಿದ್ದೇವೆ ಎಂದು ಹೇಳಿದರು.

“ಮೂರು ದಿನಗಳ ಕಾಲ ನಿರಂತರ ಚರ್ಚೆ ಮಾಡಿ, ಕಾರ್ಮಿಕ ವರ್ಗದ ಮೇಲೆ, ದುಡಿಯುವ ಜನರ ಮೇಲೆ ನಡೆಯುತ್ತಿರುವ ದಬ್ಬಾಳಿಕೆಯನ್ನು ತಡೆಗಟ್ಟಲು, ಸ್ಥಿತಿ ಗತಿಯನ್ನು ಕುರಿತು ಒಟ್ಟು ಕಾರ್ಮಿಕ ವರ್ಗದ ಅನುಭವಗಳನ್ನು ತಿಳಿದುಕೊಂಡಿದ್ದು, ನಾವು ವರದಿಯನ್ನು ಅಂಗೀಕಾರ ಮಾಡಿಕೊಂಡಿದ್ದೇವೆ” ಎಂದು ಹೇಳಿದರು.

ಸಿಐಟಿಯು ಬಹಿರಂಗ ಸಭೆ 1

“ಇಡೀ ರಾಜ್ಯಗಳು ಸೇರಿದಂತೆ ದೇಶಾದ್ಯಂತ ಕಾರ್ಮಿಕ ವರ್ಗದಲ್ಲಿ ಐಕ್ಯತೆಯನ್ನು ಮೂಡಿಸಬೇಕು. ಜನರನ್ನು ಒಗ್ಗೂಡಿಸಬೇಕು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಅನುಸರಿಸುತ್ತಿರುವ ಕಾರ್ಮಿಕ ವಿರೋಧಿ ನೀತಿಗಳ ಬಗ್ಗೆ ಜಾಗೃತಿ ಮೂಡಿಸಬೇಕು” ಎಂದು ಹೇಳಿದರು.

“ಈ ಸಿಐಟಿಯು ಸಮ್ಮೇಳನ ವಿಶಾಖಪಟ್ಟಣಂನಲ್ಲಿ ನಡೆಯುತ್ತಿರುವ ಅಖಿಲ ಭಾರತ ಸಮ್ಮೇಳನಕ್ಕೆ ಪೂರ್ವಭಾವಿಯಾಗಿದೆ. ಇಂತಹ ಹೋರಾಟಗಳಲ್ಲಿ ರೈತ ಕಾರ್ಮಿಕರ ವಿರೋಧಿ ನೀತಿಗಳನ್ನು ಖಂಡಿಸಲಾಗುವುದು. ಅಖಿಲ ಭಾರತ ಸಮ್ಮೇಳನಕ್ಕೆ ಹೋಗುವಷ್ಟರಲ್ಲಿ ಕಟ್ಟಡ ಕಾರ್ಮಿಕರು, ಅಸಂಘಟಿತ ಕಾರ್ಮಿಕರು ಸೇರಿದಂತೆ ಎಲ್ಲ ಕಾರ್ಮಿಕ ಕೂಡ ಹೋರಾಟವನ್ನು ತೀವ್ರಗೊಳಿಸಬೇಕು. ಈ ಮೂಲಕ ಸರ್ಕಾರಗಳನ್ನು ಬಡಿದೆಚ್ಚರಿಸುವ ಕೆಲಸ ಮಾಡಬೇಕು” ಎಂದು ಹೇಳಿದರು.

ಸಿಐಟಿಯು ಬಹಿರಂಗ ಸಭೆ 2

“ವಿದೇಶಗಳಲ್ಲಿರುವ ಅಮೇಜಾನ್‌ ಎನ್ನುವಂತಹ ಒಂದು ದೊಡ್ಡ ಸಂಸ್ಥೆಯ ಕಾರ್ಮಿಕರೇ ಒಗ್ಗಾಟ್ಟಾಗುತ್ತಿದ್ದಾರೆ. ಹಾಗಾಗಿ ನಮ್ಮ ದೇಶದ ಕಾರ್ಮಿಕರೂ ಕೂಡ ಒಗ್ಗಾಟ್ಟಾಗಬೇಕು. ಈ ಮೂಲಕ ತಮ್ಮ ಹಕ್ಕುಗಳನ್ನು ಗಟ್ಟಿಗೊಳಿಸಿಕೊಳ್ಳಬೇಕು” ಎಂದರು.

“ನ್ಯೂಯಾರ್ಕ್‌ನಲ್ಲಿ ಆಯ್ಕೆಯಾಗಿರುವಂತಹ ಮೇಯರ್‌ ಅವರು ಜನಪರವಾದ ನೀತಿಗಳನ್ನು ಘೋಷಣೆ ಮಾಡಿದ ಕೂಡಲೇ, ಅಧ್ಯಕ್ಷ ಡ್ರೊನಾಲ್ಡ್‌ ಟ್ರಂಪ್‌ ಆ ದೇಶಕ್ಕೆ ಸೇರಬೇಕಾದ ಅನುದಾನವನ್ನು ಕಡಿತಗೊಳಿಸುವುದಾಗಿ ಹೇಳಿದ್ದಾರೆ. ಇಂತಹ ನೀತಿಗಳನ್ನು ನಮ್ಮ ದೇಶದಲ್ಲಿಯೂ ಜಾರಿಗೊಳಿಸಲು ಹೊರಟಿದ್ದಾರೆ. ಹಲವು ಹೋರಾಟಗಳನ್ನು ಮಾಡುವ ಮೂಲಕ ವೇತನ ಹೆಚ್ಚಳ ಸೇರಿದಂತೆ ಹಲವು ಅನುಕೂಲಗಳನ್ನು ಪಡೆದಿದ್ದೇವೆ. ಆದರೂ ಕೂಡ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕಾರ್ಮಿಕರ ಹಕ್ಕುಗಳನ್ನು ಕಸಿಯುತ್ತಿವೆ. ಉದ್ಯೋಗ ನೀಡುವುದನ್ನು ನಿಲ್ಲಿಸಿವೆ. ನಿರುದ್ಯೋಗಿಗಳನ್ನಾಗಿ ಮಾಡುತ್ತಿವೆ” ಎಂದು ಆರೋಪಿಸಿದರು.

ಈ ಸುದ್ದಿ ಓದಿದ್ದೀರಾ? ದೇವರ ಹಿಪ್ಪರಗಿ | ವಿವಿಧತೆಯಲ್ಲಿ ಏಕತೆ ಸಂದೇಶ ಸಾರಿದ ಅಂತರ್ ಧಾರ್ಮಿಕ ಸಮ್ಮೇಳನ

“ಬಂಡವಾಳಶಾಹಿ ವ್ಯವಸ್ಥೆಯಲ್ಲಿ ಕಾರ್ಮಿಕರ ಹಕ್ಕುಗಳನ್ನು ಹೇಗೆ ಕಸಿಯಲಾಗುತ್ತಿದೆ ಎಂಬುದನ್ನು ನಾವೆಲ್ಲರೂ ಕಂಡುಕೊಂಡಿದ್ದೇವೆ. ಇಂತಹ ಕಾರ್ಮಿಕ ವರ್ಗವನ್ನು ಒಡೆದಾಳುವ ನೀತಿಯನ್ನು ಕೇಂದ್ರ ಬಿಜೆಪಿ ಸರ್ಕಾರ ನಡೆಸುತ್ತಿದೆ. ದಲಿತರು, ಮಹಿಳೆಯರು, ಅಲ್ಪಸಂಖ್ಯಾತರ ಮೇಲಿನ ದಾಳಿಗಳನ್ನು ಹತ್ತಿಕ್ಕುವಂತಹ ಕೆಲವು ನಿರ್ಣಯಗಳನ್ನು ಅಂಗೀಕರಿಸಿದ್ದೇವೆ. ಜತೆಗೆ ನಮ್ಮ ನೆರೆಯ ರಾಜ್ಯವಾದ ಕೇರಳದಲ್ಲಿ ಎಡಪಂಥೀಯ ಸರ್ಕಾರ ಆಡಳಿತದಲ್ಲಿದ್ದು, ಅಲ್ಲಿಯ ನೀತಿಗಳನ್ನು ದೇಶಾದ್ಯಂತ ಜಾರಿಗೊಳಿಸಬೇಕು” ಎಂದು ಆಗ್ರಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | 12 ತಾಸು ವಿದ್ಯುತ್ ಪೂರೈಕೆಗೆ ಆಗ್ರಹ: ಜೆಸ್ಕಾಂ ಕಚೇರಿಗೆ ರೈತರ ಮುತ್ತಿಗೆ

ರೈತರಿಗೆ 12 ತಾಸು ವಿದ್ಯುತ್ ಪೂರೈಸಬೇಕು, ಬೆಳೆಗಳು ಒಣಗುತ್ತಿವೆ ಎಂದು ಆಕ್ರೋಶ...

ಕಲಬುರಗಿ | ಅವಹೇಳನಕಾರಿ ಪೋಸ್ಟ್, ಜೀವ ಬೆದರಿಕೆ ಆರೋಪ; ಶಿವಸೇನಾ ನಾಯಕರ ವಿರುದ್ಧ ಎಫ್‌ಐಆರ್ ದಾಖಲು

ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಹಾಗೂ ಮಾನಹಾನಿಕರ ಪೋಸ್ಟ್‌ಗಳನ್ನು ಪ್ರಕಟಿಸಿ, ಪತ್ರಿಕಾಗೋಷ್ಠಿಯಲ್ಲಿ ನಿಂದನಾತ್ಮಕ...

ಕಲಬುರಗಿ | ಹಳೆಯ ದ್ವೇಷಕ್ಕೆ ಪಂಪ್ ಆಪರೇಟರ್ ಬಲಿ; ಚಾಕು ಇರಿದು ಬರ್ಬರ ಹತ್ಯೆ

ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿ ಪಂಪ್ ಆಪರೇಟರ್‌ ಒಬ್ಬರ ಮೇಲೆ ಮಾರಕಾಸ್ತ್ರದಿಂದ ದಾಳಿ...

ಕಲಬುರಗಿ | ನಾಪತ್ತೆಯಾಗಿದ್ದ ಹೋಟೆಲ್‌ ವ್ಯಾಪಾರಿ ಶವವಾಗಿ ಪತ್ತೆ; ಕೊಲೆ ಶಂಕೆ

ಕಳೆದ ಶುಕ್ರವಾರದಿಂದ ನಾಪತ್ತೆಯಾಗಿದ್ದ ನಗರದ ಹೋಟೆಲ್‌ ವ್ಯಾಪಾರಿಯೊಬ್ಬರು ನಗರದ ಹೊರವಲಯದಲ್ಲಿ ಶವವಾಗಿ...