ಹಾಸನ | ಕಾರ್ಮಿಕರ ಮೇಲಿನ ಶೋಷಣೆ ತೊಲಗಿಸುವುದೇ ಸಿಐಟಿಯುನ ಸಾಂವಿಧಾನಿಕ ಹೋರಾಟ: ರಾಷ್ಟ್ರೀಯ ಅಧ್ಯಕ್ಷೆ ಹೇಮಲತಾ

Date:

ಸಿಐಟಿಯು ಈವರೆಗೆ ಕಾರ್ಮಿಕರ ಬೋನಸ್‌, ಹಕ್ಕುಗಳು, ತುಟ್ಟಿಭತ್ಯೆ ಹಾಗೂ ಕಾರ್ಮಿಕರ ಬೇಡಿಕೆ ಈಡೇರಿಕೆಗಾಗಿ ಹಲವಾರು ಹೋರಾಟಗಳನ್ನು ನಡೆಸಿದೆ. ಆದರೆ ಇದಷ್ಟೇ ಸಿಐಟಿಯು ಉದ್ದೇಶವಲ್ಲ. ಇವತ್ತಿನ ಶೋಷಣಾ ವ್ಯವಸ್ಥೆಯನ್ನು ತೊಲಗಿಸಬೇಕು ಎಂಬುದೇ ಸಿಐಟಿಯುನ ಸಾಂವಿಧಾನಿಕ ಹೋರಾಟವಾಗಿದೆ” ಎಂದು ಸಿಐಟಿಯು ರಾಷ್ಟ್ರೀಯ ಅಧ್ಯಕ್ಷೆ ಹೇಮಲತಾ ತಿಳಿಸಿದರು.

- Advertisement -

ಹಾಸನದಲ್ಲಿ 13, 14, 15 ಒಟ್ಟು ಮೂರು ದಿನಗಳ ಕಾಲ ಸಿಐಟಿಯು ವತಿಯಿಂದ 16ನೇ ರಾಜ್ಯ ಸಮ್ಮೇಳನ ನಡೆಯುತ್ತಿದ್ದು, ಇಂದು ಮೊದಲ ದಿನದ ಕಾರ್ಯಕ್ರಮವನ್ನು ಸಿಐಟಿಯು ರಾಷ್ಟ್ರೀಯ ಅಧ್ಯಕ್ಷೆ ಹೇಮಲತಾ ಅವರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಎಸ್‌ಐಆರ್‌ | 13 ಕೋಟಿ ಮತಗಳ ಮಾರಣಹೋಮ

ಭಾರತೀಯ ಪ್ರಜಾಸತ್ತಾತ್ಮಕ ವ್ಯವಸ್ಥೆಯ ಅತ್ಯಂತ ಪ್ರಮುಖ ಅಡಿಪಾಯವೇ ಮತದಾನದ ಹಕ್ಕು. ದೇಶದ ಪ್ರಜಾಪ್ರಭುತ್ವದ ಮೌಲ್ಯಗಳು ಉಳಿದುಕೊಂಡಿರುವುದೇ ಚುನಾವಣಾ ವ್ಯವಸ್ಥೆಯ ಮೇಲಿರುವ ಸಾರ್ವಜನಿಕರ ಅಪಾರ ನಂಬಿಕೆಯಿಂದ. ಆದರೆ, ಚುನಾವಣಾ ಆಯೋಗವು (ECI) ದೇಶಾದ್ಯಂತ ಜಾರಿಗೆ...

“ಶೋಷಣೆಯ ವ್ಯವಸ್ಥೆಯನ್ನು ನಾವು ಕೊನಾಗಾಣಿಸಬೇಕಾದರೆ ಇಂತಹ ಹೋರಾಟವನ್ನು, ಚಳವಳಿಗಳನ್ನು ಇನ್ನಷ್ಟು ಬೇರೆ ರೀತಿಯಲ್ಲಿ ಕೊಂಡೊಯ್ಯುವ ಹಂತದಲ್ಲಿದ್ದೇವೆ” ಎಂದರು.

ಕೆ ಹೇಮಲತಾ

“ನಿಮ್ಮೆಲ್ಲರಿಗೂ ಗೊತ್ತಿರುವಂತೆ 18ನೇ ಅಖಿಲ ಭಾರತ ಸಮ್ಮೇಳನ ಡಿಸೆಂಬರ್‌ನಿಂದ ಜನವರಿ 4ರವರೆಗೆ ರಾಷ್ಟ್ರ ಸಮ್ಮೇಳನ ನಡೆಯುತ್ತಿದೆ. ಅದರಂತೆ ಪ್ರತಿ ರಾಜ್ಯಗಳಲ್ಲಿಯೂ ನಡೆಯುತ್ತಿರುವ ರಾಜ್ಯ ಸಮ್ಮೇಳನಗಳ ಭಾಗವಾಗಿ ಇಂದು ಕರ್ನಾಟಕ ರಾಜ್ಯ ಸಮ್ಮೇಳನ ನಡೆಯುತ್ತಿದೆ” ಎಂದರು.

“ಕರ್ನಾಟಕದಲ್ಲಿಯೂ ಹಲವಾರು ಐತಿಹಾಸಿಕ ಹೋರಾಟಗಳನ್ನು ನಡೆಸಿರುವ ಅನುಭವವಿದೆ. ಪ್ಲಾಂಟೇಶನ್ ಕಾರ್ಮಿಕರು, ಅಂಗನವಾಡಿ ನೌಕರರು, ಗ್ರಾಮ ಪಂಚಾಯಿತಿ ನೌಕರರು, ಫ್ಯಾಕ್ಟರಿ ಕಾರ್ಮಿಕರು, ಬಿಸಿಯೂಟ ಕಾರ್ಮಿಕರು, ಗುತ್ತಿಗೆ ಹಾಗೂ ಹೊರಗುತ್ತಿಗೆ ಕಾರ್ಮಿಕರ ಹೋರಾಟ ಸೇರಿದಂತೆ ಅಸಂಘಟಿತ ಕಾರ್ಮಿಕರ‌ ಹೋರಾಟಗಳನ್ನು ನಡೆಸಲಾಗಿದೆ. ಈ ಹೋರಾಟಗಳಿಂದ ನಾವು ಏನ್ನು ಅರಿತಿದ್ದೇವೆ, ಈ ಹೋರಾಟಗಳು ಸಂವಿಧಾನಾತ್ಮಕವಾಗಿ ನಡೆದಿವೆಯೇ ಎಂಬುದನ್ನು ನಾವು ವಿಮರ್ಶೆ ಮಾಡಬೇಕಿದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಹಾಸನ | 13, 14, 15ರಂದು ಸಿಐಟಿಯು 16ನೇ ರಾಜ್ಯ ಸಮ್ಮೇಳನ: ಸರ್ವರಿಗೂ ಪ್ರೀತಿಯ ಕರೆಯೋಲೆ

ಪ್ಲಾಂಟೇಶನ್ ಕಾರ್ಮಿಕರು, ಅಂಗನವಾಡಿ ನೌಕರರು, ಗ್ರಾಮ ಪಂಚಾಯಿತಿ ನೌಕರರು, ಫ್ಯಾಕ್ಟರಿ ಕಾರ್ಮಿಕರು, ಬಿಸಿಯೂಟ ಕಾರ್ಮಿಕರು, ಗುತ್ತಿಗೆ ಹಾಗೂ ಹೊರಗುತ್ತಿಗೆ ಕಾರ್ಮಿಕರು ಸೇರಿದಂತೆ ಅಸಂಘಟಿತ ಕಾರ್ಮಿಕರ ನೇತೃತ್ವ ವಹಿಸಿರುವ ಮುಖ್ಯ ಅತಿಥಿಗಳಾದ ರಾಷ್ಟ್ರೀಯ ಕಾರ್ಯದರ್ಶಿ ಕೆ ಎನ್‌ ಉಮೇಶ್‌, ರಾಜ್ಯ ಉಪಾಧ್ಯಕ್ಷ ವಿಜೆಕೆ ನಾಯರ್‌, ರಾಜ್ಯ ಪ್ರಧಾನ ಕಾರ್ಯದರ್ಶಿ ಮೀನಾಕ್ಷಿ ಸುಂದರಂ, ಅಧ್ಯಕ್ಷತೆ ರಾಜ್ಯ ಅಧ್ಯಕ್ಷೆ ಎಸ್‌ ವರಲಕ್ಷ್ಮಿ, ಸ್ವಾಗತ ಎಚ್‌ ಎನ್‌ ಪರಮಶಿವಯ್ಯ ಸೇರಿದಂತೆ ಇತರ ಮುಖಂಡರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು ದಸರಾ: ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ ಅಧಿಕೃತ ಆಹ್ವಾನ

ಮೈಸೂರು ದಸರಾ ಮಹೋತ್ಸವದ ಉದ್ಘಾಟಕರಾಗಿ ಆಯ್ಕೆಯಾಗಿರುವ ಕೊಪ್ಪಳದ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ...

ಕೋಲಾರ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್ ವಜಾಕ್ಕೆ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್ ಅವರನ್ನು ವಜಾಗೊಳಿಸಬೇಕು, ಮತದಾರರ ಪಟ್ಟಿ...

ಬೆಂಗಳೂರು | ಆನೆ ದಾಳಿಗೆ ವಾಕಿಂಗ್ ತೆರಳಿದ್ದ ವ್ಯಕ್ತಿ ಬಲಿ

ಇಂದು ಮುಂಜಾನೆ ವಾಕಿಂಗ್ ತೆರಳಿದ್ದ ವ್ಯಕ್ತಿಯೊಬ್ಬರು ಆನೆ ದಾಳಿಗೆ ಮೃತಪಟ್ಟಿರುವ ಘಟನೆ...

ಮುಂಡಗೋಡ | ಮೊಬೈಲ್ ಅಂಗಡಿ ಕಳ್ಳತನ: ನಾಲ್ವರು ವಿದ್ಯಾರ್ಥಿಗಳ ಬಂಧನ

ಮೊಬೈಲ್ ಅಂಗಡಿಯ ಬೀಗ ಒಡೆದು ವಿವಿಧ ಎಲೆಕ್ಟ್ರಾನಿಕ್ ವಸ್ತುಗಳನ್ನು ಕಳವು ಮಾಡಿದ...