ಹಾಸನ | ಶಾಲೆಗೆ ನುಗ್ಗಿದ ಕೆಎಸ್‌ಆರ್‌ಟಿಸಿ ಬಸ್‌; ಓರ್ವ ಸಾವು

Date:

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಬಸ್‌, ಬ್ರೇಕ್ ಫೇಲಾಗಿ ಚಾಲಕನ ನಿಯಂತ್ರಣ ತಪ್ಪಿ ಶಾಲೆಯ ಕಾಂಪೌಂಡ್‌ ಮತ್ತು ಮನೆಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಪ್ರಯಾಣಿಕ ಸ್ಥಳದಲ್ಲೇ ಮೃತಪಟ್ಟ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಬಾಗೆ ಬಳಿಯಲ್ಲಿ ನಡೆದಿದೆ.

- Advertisement -

ಅಲ್ಲದೆ, ಬಸ್‌ನಲ್ಲಿದ್ದ ಹತ್ತಕ್ಕೂ ಹೆಚ್ಚು ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಗೊಂಡವರಲ್ಲಿ ಮೂವರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆಪಡೆಯುತ್ತಿದ್ದಾರೆ. ಚನ್ನರಾಯಪಟ್ಟಣ ತಾಲ್ಲೂಕಿನ ಉದಯಪುರ ಗ್ರಾಮದ ಅಮೃತ್‌ರಾಜ್ (34) ಮೃತ ವ್ಯಕ್ತಿ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಅಪಘಾತಕ್ಕೀಡಾದ ಕೆಎಸ್‌ಆರ್‌ಟಿಸಿ ಬಸ್ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ತೆರಳುತ್ತಿತ್ತು. ಸಕಲೇಶಪುರದ ಬಾಗೆ ಗ್ರಾಮಕ್ಕೆ ತಲುಪುತ್ತಿದ್ದಂತೆ ಬಸ್‌ನ ಆ್ಯಕ್ಸಲ್ ತುಂಡಾಗಿ ರಸ್ತೆ ಪಕ್ಕದ ಜಮೀನಿಗೆ ನುಗ್ಗಿ ಮನೆಗೆ ಡಿಕ್ಕಿಹೊಡೆದು, ಜೆಎಸ್ಎಸ್ ಶಾಲೆಯ ಕಾಂಪೌಂಡ್‌ಗೆ ಡಿಕ್ಕಿ ಹೊಡೆದಿದೆ.

ಈ ವೇಳೆ ಬಸ್‌ನ ಕಿಟಕಿ ಸೀಟ್‌ನಲ್ಲಿ ಕುಳಿತಿದ್ದ ಪ್ರಯಾಣಿಕ ಅಮೃತರಾಜ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹಲವು ಪ್ರಯಾಣಿಕರಿಗೆ ಗಾಯಗಳಾಗಿವೆ. ಗಾಯಾಳುಗಳನ್ನು ಸಕಲೇಶಪುರದ ಕ್ರಾಫರ್ಡ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಜಮೀನಿನಲ್ಲಿದ್ದ ಮನೆಗೂ ಬಸ್ ಡಿಕ್ಕಿ ಹೊಡೆದಿದ್ದು, ಅದೃಷ್ಟವಶಾತ್ ಮನೆಯಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಮತ್ತೊಂದು ವಿದ್ಯಾಸಂಸ್ಥೆಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ!

ಬಸ್‌ ಶಾಲಾ ಕೌಂಪಡ್‌ಗೂ ಢಿಕ್ಕಿ ಹೊಡೆದಿದ್ದು, ಶಾಲೆಯ ಕಟ್ಟಡಕ್ಕೆ ಹಾನಿಯಾಗಿದೆ. ಭಾನುವಾರ ಶಾಲೆಗೆ ರಜೆ ಇದ್ದ ಕಾರಣ ಭಾರೀ ಅನಾಹುತ ತಪ್ಪಿದಂತಾಗಿದೆ.

ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ನಾಳೆ ಜಿಲ್ಲಾ ಮಟ್ಟದ ಕಾರ್ಯಾಗಾರ

ಸಾವಯವ ಹಾಗೂ ನೈಸರ್ಗಿಕ ಕೃಷಿ ಪದ್ಧತಿಯನ್ನು ಉತ್ತೇಜಿಸುವ ಜೊತೆಗೆ ರೈತರು ಬೆಳೆಯುವ...

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...