ಪೆನ್‌ಡ್ರೈವ್ ಪ್ರಕರಣ| ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು

Date:

Advertisements

ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದ್ದಂತೆ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್‌ ಪಕ್ಷದಿಂದ ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.

ನೂರಾರು ಮಹಿಳೆಯರ ಮೇಲೆ ಪ್ರಜ್ವಲ್ ರೇವಣ್ಣ ದೌರ್ಜನ್ಯ ಎಸಗಿದ್ದಾರೆ ಎನ್ನಲಾದ ವಿಡಿಯೋಗಳು ಸಾಮಾಜಿಕ ಜಾಲತಾಣ ಮತ್ತು ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿವೆ. ಪಕ್ಷದ ಘನತೆ ಮತ್ತು ಗೌರವಗಳಿಗೆ ಹಾಗೂ ಮುಖಂಡತ್ವಕ್ಕೆ ಸಾಕಷ್ಟು ಧಕ್ಕೆ ಉಂಟಾಗಿರುತ್ತದೆ ಎಂದು ಜೆಡಿಎಸ್‌ ಹೇಳಿದೆ.

ಇದನ್ನು ಓದಿದ್ದೀರಾ?  ಪೆನ್‌ಡ್ರೈವ್‌ ಕೇಸು| ಮಹತ್ವದ ತಿರುವು: ಬಿಜೆಪಿ ನಾಯಕನ ವಿರುದ್ಧ ಎಚ್‌ಡಿಕೆ ಆರೋಪ

Advertisements

ಅಮಾನತು ಆದೇಶ ಹೊರಡಿಸಿರುವ ಜೆಡಿಎಸ್‌ ಮಹಾಕಾರ್ಯದರ್ಶಿ ಕೆ.ಆರ್ ಶಿವಕುಮಾರ್, “ಮಹಿಳೆಯರ ಮೇಲೆ ದೌರ್ಜನ್ಯ ಎಸಲಾಗಿದೆ ಎಂದು ಹೇಳಲಾಗಿರುವ ಚಿತ್ರಗಳು ಮತ್ತು ವಿಡಿಯೋಗಳ ಬಗ್ಗೆ ತನಿಖೆ ನಡೆಸಲು ರಾಜ್ಯ ಕಾಂಗ್ರೆಸ್ ಸರ್ಕಾರ ಎಸ್‌ಐಟಿ ತಂಡವನ್ನು ರಚಿಸಿದ್ದು, ಈ ತಂಡವು ಈಗಾಗಲೇ ಕಾರ್ಯ ಆರಂಭಿಸಿದೆ. ಈ ಕಾರಣದಿಂದಾಗಿ ಜನತಾದಳ (ಜಾತ್ಯತೀತ) ಪಕ್ಷದ ಸಂವಿಧಾನ ಮತ್ತು ನಿಯಮಾವಳಿಗಳ ಅಡಿಯಲ್ಲಿ ಹಾಸನ ಲೋಕಸಭಾ ಕ್ಷೇತ್ರದ ಸದಸ್ಯರಾದ ಪ್ರಜ್ವಲ್ ರೇವಣ್ಣರವರನ್ನು ತತ್‌ಕ್ಷಣದಿಂದ ಜಾರಿಗೆ ಬರುವಂತೆ ಪಕ್ಷದಿಂದ ಅಮಾನತುಗೊಳಿಸಲಾಗಿದೆ” ಎಂದು ತಿಳಿಸಿದ್ದಾರೆ.

ಇನ್ನು ಸೋಮವಾರ ಸುದ್ದಿ ಸಂಸ್ಥೆ ಎಎನ್‌ಐ ಜೊತೆ ಮಾತನಾಡಿದ ಎಚ್‌ ಡಿ ಕುಮಾರಸ್ವಾಮಿ “ಚುನಾವಣೆಗೂ ಮುನ್ನ ಬಿಜೆಪಿ ನಾಯಕರೊಬ್ಬರು ಸೇರಿದಂತೆ ವಿರೋಧ ಪಕ್ಷದ ನಾಯಕರು ಹಾಸನದಲ್ಲಿ ತಾವು ಗೆಲ್ಲಲು ಸಾಧ್ಯವಿಲ್ಲ ಎಂದು ತಿಳಿದ ಬಳಿಕ ಪೆನ್‌ಡ್ರೈವ್‌ ಅನ್ನು ಹಂಚಿದ್ದಾರೆ” ಎಂಬ ಗಂಭೀರ ಆರೋಪ ಮಾಡಿದ್ದಾರೆ. ಕುಮಾರಸ್ವಾಮಿಯವರು ರಾಷ್ಟ್ರೀಯ ಸುದ್ದಿಸಂಸ್ಥೆಗೆ ನೀಡಿರುವ ಈ ಹೇಳಿಕೆಯಿಂದ ಬಿಜೆಪಿ ಜೊತೆಗಿನ ಮೈತ್ರಿಯಲ್ಲಿ ಬಿರುಕು ಉಂಟಾಗುವ ಸಾಧ್ಯತೆ ಕಂಡು ಬಂದಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025ಕ್ಕೆ ವಿಧಾನ ಪರಿಷತ್ತಿನಲ್ಲೂ ಅಂಗೀಕಾರ

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025 ಕ್ಕೆ ವಿಧಾನ ಪರಿಷತ್ತಿನಲ್ಲಿ...

Download Eedina App Android / iOS

X