ಹಾವೇರಿ | ಭೀಕರ ರಸ್ತೆ ಅಪಘಾತ; ಸಂಭವನೀಯ ಕಾರಣಗಳನ್ನು ತಿಳಿಸಿದ ಅಲೋಕ್ ಕುಮಾರ್

Date:

ಪುನಾ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಜೂನ್ 28ರಂದು ಬೆಳಗಿನ ಜಾವ 4ಗಂಟೆಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಹಿಳೆಯರು, ಮಕ್ಕಳು ಸೇರಿದಂತೆ 13 ಜನ ಸಾವನ್ನಪ್ಪಿದ್ದಾರೆ. ಈ ಬಗ್ಗೆ ರಾಜ್ಯ ಸಂಚಾರ ಮತ್ತು ರಸ್ತೆ ಸುರಕ್ಷತೆ ವಿಭಾಗದ ಹೆಚ್ಚುವರಿ ಪೊಲೀಸ್​ ಮಹಾನಿರ್ದೇಶಕ ಅಲೋಕ್​ ಕುಮಾರ್ ಟ್ವೀಟ್ ಮಾಡಿ ಮೃತಪಟ್ಟ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ.

- Advertisement -

ಅಪಘಾತಕ್ಕೆ ಸಂಭವನೀಯ ಕಾರಣಗಳನ್ನು ತಿಳಿಸಿದ ಅವರು, “ತಪ್ಪಾದ ಸ್ಥಳದಲ್ಲಿ ಲಾರಿಯನ್ನು ಪಾರ್ಕಿಂಗ್ ಮಾಡಿರಬಹುದು, ತಪ್ಪಾಗಿ ಓವರ್‌ಟೇಕಿಂಗ್ ಮಾಡಿರಬಹುದು. ಅತಿಯಾದ ವೇಗ ಅಥವಾ ಚಾಲಕ ಆಯಾಸಗೊಂಡಿದ್ದರಿಂದ ಅಪಘಾತ ಸಂಭವಿಸಿರಬಹುದು” ಎಂದು ಅಂದಾಜಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಅಲ್ಲದೆ, ಅಪಘಾತ ಸ್ಥಳಕ್ಕೆ ಭೇಟಿ ನೀಡುವುದಾಗಿ ಮಾಹಿತಿ ನೀಡಿದ್ದಾರೆ. ಜಾಗರೂಕತೆಯಿಂದ ವಾಹನ ಚಲಾಯಿಸಿ, ಜೀವ ರಕ್ಷಿಸಿ ಎಂದು ಬರೆದುಕೊಂಡಿದ್ದಾರೆ.

ಭೀಕರ ಅಪಘಾತ

ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಶುಕ್ರವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 13 ಜನರು ಸಾವನ್ನಪ್ಪಿದ್ದಾರೆ.

ಮೃತರನ್ನು ಸುಭದ್ರಾ ಬಾಯಿ (65), ಪರಶುರಾಮ (45), ಭಾಗ್ಯ (40), ನಾಗೇಶ್ (50), ವಿಶಾಲಾಕ್ಷಿ (40), ಅರ್ಪಿತಾ (18), ಪುಣ್ಯ (50), ಮಂಜುಳಾ ಬಾಯಿ (62), ಆದರ್ಶ (23), ಮಾನಸ (24), ರೂಪಾ (40), ಮಂಜುಳಾ (50) ಎಂದು ಗುರುತಿಸಲಾಗಿದೆ. ಇನ್ನೂ ಅರ್ಪಿತಾ, ಅರುಣಾ, ಅನ್ನಪೂರ್ಣ ಎನ್ನುವ ಮೂವರು ಗಾಯಾಳುಗಳ ಚಿಕಿತ್ಸೆ ಪಡೆಯುತ್ತಿದ್ದಾರೆ.

ಶಿವಮೂಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಎಮ್ಮೆಹಟ್ಟಿ ಗ್ರಾಮದ ನಿವಾಸಿಗಳಾಗಿದ್ದ ನಾಗೇಶ್​ ಮತ್ತು ವಿಶಾಲಕ್ಷಿ ದಂಪತಿ ಪುತ್ರ ಆದರ್ಶ್ ಹೊಸ ಟಿಟಿ ವಾಹನ ಖರೀದಿ ಮಾಡಿದ್ದರು. ಹಾಗಾಗಿ, ಹೊಸ ಟಿಟಿ ವಾಹನಕ್ಕೆ ಪೂಜೆ ಮಾಡಿಸಲು ನಾಗೇಶ್​, ವಿಶಾಲಾಕ್ಷಿ ​ಮತ್ತು ಪುತ್ರ ಆದರ್ಶ್​ ಸೇರಿಂದತೆ 17 ಜನರು ಜೂ.24ರಂದು ಮಧ್ಯಾಹ್ನ 12 ಗಂಟೆಗೆ ಶಿವಮೊಗ್ಗದಿಂದ ಹೊರಟಿದ್ದಾರೆ.

ಮಹಾರಾಷ್ಟ್ರ ತಿವಾರಿ ಲಕ್ಷ್ಮೀ ದೇವಸ್ಥಾನ ತಲುಪಿ, ಅಲ್ಲಿ ವಾಹನ ಪೂಜೆ ಮಾಡಿಸಿದ್ದಾರೆ. ನಂತರ ತುಳಜಾಭವಾನಿ ದೇವಸ್ಥಾನಕ್ಕೆ ತೆರಳಿ ದೇವಿಯ ದರ್ಶನ ಪಡೆದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಹಾವೇರಿ | ಭೀಕರ ಅಪಘಾತ; ಮೃತರ ಕುಟುಂಬಕ್ಕೆ ತಲಾ ₹2 ಲಕ್ಷ ಪರಿಹಾರ ಘೋಷಿಸಿದ ಸಿಎಂ

ಕಲಬುರಗಿ ಜಿಲ್ಲೆಯ ಚಿಂಚೋಳಿಯ ಮಾಯಮ್ಮ ದೇವಸ್ಥಾನಕ್ಕೆ ಹೋಗಿ, ಅಲ್ಲಿಂದ ಬೆಳಗಾವಿ ಜಿಲ್ಲೆ ಸವದತ್ತಿ ರೇಣುಕಾ ಯಲ್ಲಮ್ಮನ ದರ್ಶನ ಪಡೆದು ಮರಳಿ ಊರಿಗೆ ತೆರಳುವಾಗ ನಸುಕಿನ ಜಾವ 4 ಗಂಟೆಗೆ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿಯ ಪುನಾ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಿಂತಿದ್ದ ಲಾರಿಗೆ ಟಿಟಿ ವಾಹನ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ನಾಗೇಶ್​, ವಿಶಾಲಾಕ್ಷಿ ಮತ್ತು ಆದರ್ಶ ಸೇರಿದಂತೆ 13 ಜನರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಾಯಗೊಂಡ ನಾಲ್ವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರ ಸಚಿವರಾದ ಪ್ರಲ್ಹಾದ್​​ ಜೋಶಿ, ಹೆಚ್​ಡಿ ಕುಮಾರಸ್ವಾಮಿ, ಬಸವರಾಜ ಬೊಮ್ಮಾಯಿ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಸಂತಾಪ ಸೂಚಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಂತಾಮಣಿ | ನಿಮ್ಮಕಾಯಲಹಳ್ಳಿ ದರ್ಗಾ ಅಭಿವೃದ್ಧಿಗೆ ಶಾಸಕ ಡಾ.ಎಂ.ಸಿ. ಸುಧಾಕರ್ ಅಭಯ:ಕಾಂಪೌಂಡ್,ಪಾರ್ಕಿಂಗ್‌ಗೆ ಭರವಸೆ

ಚಿಂತಾಮಣಿ ತಾಲೂಕಿನ ನಿಮ್ಮಕಾಯಲಹಳ್ಳಿಯ ದರ್ಗಾ ಉರುಸ್ ಪ್ರಯುಕ್ತ ಉನ್ನತ ಶಾಸಕರಾದ ಡಾ.ಎಂ.ಸಿ.ಸುಧಾಕರ್...

ಕೋಲಾರ | ಅಧಿಕಾರಿಗಳ ವಿರುದ್ಧ ದಾಖಲೆಗಳಿದ್ದರೆ ಕಾನೂನು ಹೋರಾಟ ನಡೆಸಲಿ ಮುಖಂಡರ ಅಗ್ರಹ

ಜಿಲ್ಲಾಧಿಕಾರಿ ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳ ವಿರುದ್ಧ ಯಾವುದೇ...

ರಂಗಭೂಮಿ ಅಭಿನಯ ಕಲಿಸುವುದಷ್ಟೇ ಅಲ್ಲ, ಬದುಕನ್ನೂ ಕಲಿಸುವ ಶಾಲೆ: ಶ್ರೀನಿವಾಸ ಪಾಲಹಳ್ಳಿ

ರಂಗಭೂಮಿ ಕೇವಲ ಅಭಿನಯ ಕಲಿಸುವ ವೇದಿಕೆಯಲ್ಲ. ಅದು ಬದುಕನ್ನು ಅರ್ಥಮಾಡಿಕೊಳ್ಳುವ, ಮಾನವೀಯ...

SIR ಅಕ್ರಮ ಆರೋಪ: ಎಸ್‌ಐಟಿ ತನಿಖೆಗೆ ಎಸ್‌ಡಿಪಿಐ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ...