ಉತ್ತರ ಕರ್ನಾಟಕದಲ್ಲಿ ಭಾರಿ ಮಳೆ: 3 ಸಾವು, 150 ಮನೆಗಳಿಗೆ ಹಾನಿ

Date:

ಉತ್ತರ ಕರ್ನಾಟಕದ ಹಲವೆಡೆ ಶನಿವಾರ ರಾತ್ರಿ ಸುರಿದ ಭಾರಿ ಮಳೆಗೆ ಮೂವರು ಸಾವನ್ನಪ್ಪಿದ್ದು, 150ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದೆ.

- Advertisement -

ಹವಾಮಾನ ಸಂಸ್ಥೆಗಳ ಮುನ್ಸೂಚನೆಯಂತೆ, ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಉಂಟಾಗುತ್ತಿರುವುದರಿಂದ ಉತ್ತರ ಕರ್ನಾಟಕದ ಹಲವಾರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ವಿಜಯನಗರ ಜಿಲ್ಲೆಯಲ್ಲಿ ಭಾನುವಾರ ಸಿಡಿಲು ಬಡಿದು ಶನಿವಾರ ಇಬ್ಬರು ಮೃತಪಟ್ಟಿದ್ದಾರೆ. ಮೃತಪಟ್ಟ ನಾರಪ್ಪ ಬಣಕಾರ (55) ಮತ್ತು ಪ್ರಶಾಂತ್ ಬಣಕಾರ (45) ಇಬ್ಬರೂ ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ದಾಸನಪುರ ಗ್ರಾಮದವರು. ದಾವಣಗೆರೆ ಜಿಲ್ಲೆಯಲ್ಲಿ ಶನಿವಾರ ತಡರಾತ್ರಿ ಮನೆ ಗೋಡೆ ಕುಸಿದು ಬಿದ್ದ ಪರಿಣಾಮ ಕುಳಗಟ್ಟೆ ಬಸವರಾಜಪ್ಪ (81) ಮೃತಪಟ್ಟಿದ್ದಾರೆ. ಘಟನೆಯಲ್ಲಿ ಅವರ ಮಗ ಮತ್ತು ಸೊಸೆ ಕೂಡ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಅವಿಭಜಿತ ಬಳ್ಳಾರಿ ಜಿಲ್ಲೆ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ಕೆಲವೇ ಗಂಟೆಗಳಲ್ಲಿ 130 ಮಿ.ಮೀ ಮಳೆ ಸುರಿದಿದ್ದು, ತೀವ್ರ ಪ್ರವಾಹ ಉಂಟಾಗಿದೆ ಎಂದು ಹವಾಮಾನ ಇಲಾಖೆ ಮೂಲಗಳು ತಿಳಿಸಿವೆ. ರಾಯಚೂರು, ಕೊಪ್ಪಳ, ಯಾದಗಿರಿ, ಕಲಬುರಗಿ ಜಿಲ್ಲೆಗಳಲ್ಲೂ ಭಾರಿ ಮಳೆಯಾಗಿದೆ.

ಪ್ರವಾಹದಲ್ಲಿ ಸಿಲುಕಿಕೊಂಡಿರುವ 55 ಗಣಿಗಾರಿಕೆ ಟ್ರಕ್‌ಗಳು

ಸಂಡೂರು ಗಣಿಗಾರಿಕೆ ಪ್ರದೇಶದಲ್ಲಿ 55ಕ್ಕೂ ಹೆಚ್ಚು ಗಣಿಗಾರಿಕೆ ಟ್ರಕ್‌ಗಳು ಪ್ರವಾಹದಲ್ಲಿ ಸಿಲುಕಿಕೊಂಡಿವೆ. ವಾಹನದೊಳಗೆ ಸಿಲುಕಿಕೊಂಡಿದ್ದ ಸುಮಾರು 25 ಟ್ರಕ್ ಚಾಲಕರನ್ನು ಸ್ಥಳೀಯರು ರಕ್ಷಿಸಿದ್ದಾರೆ. 9,000 ಹೆಕ್ಟೇರ್‌ ಪ್ರದೇಶದಲ್ಲಿ ಭತ್ತ, ಬಾಳೆ, ಮೆಣಸಿನಕಾಯಿ ಬೆಳೆಗಳು ಕೊಚ್ಚಿ ಹೋಗಿವೆ ಎಂದು ಜಿಲ್ಲಾಡಳಿತ ತಿಳಿಸಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಆರೋಪ-ಪ್ರತ್ಯಾರೋಪಗಳೆಷ್ಟು ಕಾಲ? ಆಡಳಿತ, ಅಭಿವೃದ್ಧಿ, ಕಲ್ಯಾಣಕ್ಕೆಷ್ಟು ಸಮಯ?

ಬಳ್ಳಾರಿ ಮತ್ತು ವಿಜಯನಗರ ಎರಡೂ ಜಿಲ್ಲೆಗಳಲ್ಲಿ ತೀವ್ರ ಹಾನಿ ಸಂಭವಿಸಿದ ಗ್ರಾಮಗಳಿಗೆ ಹಿರಿಯ ಅಧಿಕಾರಿಗಳು ದೌಡಾಯಿಸಿದ್ದಾರೆ. ಬಳ್ಳಾರಿ ಸಂಸದ ಇ ತುಕಾರಾಂ ಅವರು ಮಳೆ ಪೀಡಿತ ಪ್ರದೇಶಗಳನ್ನು ಪರಿಶೀಲಿಸಿದರು ಮತ್ತು ಅತಿವೃಷ್ಟಿ ವರದಿಯಾಗಿರುವ ಗ್ರಾಮಗಳಿಗೆ ಭೇಟಿ ನೀಡಿದರು.

ಗದಗ ಜಿಲ್ಲೆಯ ನರಗುಂದ ಹಾಗೂ ಸುತ್ತಮುತ್ತ ಶನಿವಾರ ರಾತ್ರಿ ಸುರಿದ ಭಾರಿ ಮಳೆಗೆ ರಸ್ತೆಗಳು ಮಿನಿ ನದಿಗಳಾಗಿ ಮಾರ್ಪಟ್ಟಿವೆ. ಈ ಪ್ರದೇಶದಲ್ಲಿ ಎರಡು ಗಂಟೆಗೂ ಹೆಚ್ಚು ಕಾಲ ಎಡೆಬಿಡದೆ ಮಳೆ ಸುರಿದಿದ್ದು, ಜನರು ನಿದ್ದೆಯಿಲ್ಲದ ರಾತ್ರಿ ಕಳೆಯಬೇಕಾಯಿತು. ಮಳೆ ನೀರು ಚರಂಡಿ ನೀರಿನೊಂದಿಗೆ ಸೇರಿ ಹಲವು ಮನೆಗಳಿಗೆ ನೀರು ನುಗ್ಗಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ SIR | ಅರ್ಹರ ಹೆಸರು ಡಿಲೀಟ್‌ ಮಾಡಲು ಬಿಜೆಪಿಗೆ ‘ಫಾರ್ಮ್‌-7’ ಟೂಲ್‌ಕಿಟ್; ಷಡ್ಯಂತ್ರ ಬಹಿರಂಗ

ರಾಜ್ಯದಲ್ಲಿ ನಡೆಯುತ್ತಿರುವ ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಬಿಜೆಪಿಗರು ‘ಫಾರ್ಮ್‌-7’ಅನ್ನು ದುರ್ಬಳಕೆ ಮಾಡಿಕೊಳ್ಳುತತಿದ್ದಾರೆ. ಈ...

SIR | ಮತ ಡಿಲೀಟ್‌ ಮಾಡಲು ಒಳಸಂಚು ಆರೋಪ : ಭಾಲ್ಕಿಯಲ್ಲಿ 32 ಜನರ ವಿರುದ್ಧ FIR

ಮತದಾರರ ಪಟ್ಟಿಯ ಸಮಗ್ರ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಯಾವುದೇ ಆಧಾರ...

ಮಂಗಳೂರು ಎಂಆರ್‌ಪಿಎಲ್ ದುರಂತ: ಮೃತ ಕಾರ್ಮಿಕನ ಕುಟುಂಬಕ್ಕೆ ₹1.20 ಕೋಟಿ ಪರಿಹಾರ ಘೋಷಣೆ

ಮಂಗಳೂರಿನ ಎಂಆರ್‌‌ಪಿಎಲ್ (MRPL) ಕಾರ್ಖಾನೆಯಲ್ಲಿ ನಡೆದ ದಾರುಣ ಅಪಘಾತದಲ್ಲಿ ಜೀವ ಕಳೆದುಕೊಂಡ...