ಮುಂದಿನ ಏಳು ದಿನ ರಾಜ್ಯದ ಹಲವೆಡೆ ಭಾರೀ ಮಳೆ ಸಾಧ್ಯತೆ; ಹವಾಮಾನ ಇಲಾಖೆ

Date:

ಕರ್ನಾಟಕದಲ್ಲಿ ಮುಂಗಾರು ಮಳೆಯ ನಿರೀಕ್ಷೆ ಹೆಚ್ಚಾಗಿದ್ದು, ಮುಂದಿನ ಏಳು ದಿನ ರಾಜ್ಯದ ಹಲವೆಡೆ ಗುಡುಗು ಸಹಿತ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

- Advertisement -

ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಹಲವೆಡೆ ಮೇ 31ರಂದು ಮಳೆಯಾಗಲಿದೆ. ಉಳಿದಂತೆ ಬೆಂಗಳೂರು, ಮೈಸೂರು ಸೇರಿ 12 ಜಿಲ್ಲೆಗಳಲ್ಲಿ ಮಳೆ ಬೀಳಲಿದೆ. ಉಳಿದೆಡೆ ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ʼಹಿಂದೆ ಸರಿಯುವ ಮಾತೇ ಇಲ್ಲʼ; ದೆಹಲಿ ಬೀದಿಗಳಲ್ಲಿ ಅಬ್ಬರಿಸುತ್ತಿರುವ...

ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮತ್ತು CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಬ್ಲಾಕ್ ಸಂಸತ್ ಸದಸ್ಯರು ದೆಹಲಿ ಬೀದಿಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಯುವಕರು...

ಜೂನ್ 1ರಂದು ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೊಡಗು, ಕೋಲಾರ, ಮೈಸೂರು, ರಾಮನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ. ಜತೆಗೆ, 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಂಭವವಿದೆ ಎಂದು ಹೇಳಿದೆ.

ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಹಾಸನ, ಮಂಡ್ಯ, ಶಿವಮೊಗ್ಗ, ತುಮಕೂರು, ವಿಜಯನಗರ, ದಕ್ಷಿಣ ಕನ್ನಡ, ಉಡುಪಿ, ಧಾರವಾಡ, ಗದಗ, ಕೊಪ್ಪಳ, ರಾಯಚೂರು, ಯಾದಗಿರಿ, ಬಾಗಲಕೋಟೆ, ಬೆಳಗಾವಿ, ಬೀದರ್, ಹಾವೇರಿ, ಕಲಬುರ್ಗಿ, ವಿಜಯಪುರ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಆಂತರಿಕ ಕರ್ನಾಟಕದ ಎಲ್ಲ ಜಿಲ್ಲೆಗಳ ಮೇಲೆ (40-50 kmph) ವೇಗದ ಗಾಳಿ ಬೀಸುವ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಲ್ಲಿ ಒಣ ಹವೆಯಿರುವ ಸಾಧ್ಯತೆಯಿದೆ. ಜೂನ್‌ 6ರವರೆಗೂ ರಾಜ್ಯದ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ಮುಂದಿನ ಮೂರು ದಿನ ರಾಜ್ಯದಲ್ಲಿ ಗರಿಷ್ಠ ತಾಪಮಾನದಲ್ಲಿ ಯಾವುದೇ ದೊಡ್ಡ ಬದಲಾವಣೆಯಾಗುವುದಿಲ್ಲ. ರಾಜ್ಯದಾದ್ಯಂತ 2-3 ಡಿಗ್ರಿ ಸೆಲ್ಸಿಯಸ್‌ನಷ್ಟು ಕ್ರಮೇಣ ತಾಪಮಾನ ಕುಸಿಯುತ್ತದೆ ಎಂದು ತಿಳಿಸಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಫಾರ್ಮ್‌ಹೌಸ್‌ನಲ್ಲಿ ರೇವ್ ಪಾರ್ಟಿ; ಹೆಚ್ಚಿನ ಜನರಿಗೆ ನೋಟಿಸ್ ಜಾರಿ ಮಾಡಿದ ಸಿಸಿಬಿ

ಮುಂದಿನ ಎರಡು ದಿನ ಬೆಂಗಳೂರು ನಗರದ ಕೆಲವೆಡೆ ಮೋಡಕವಿದ ವಾತಾವರಣ ಇರಲಿದೆ. ಕೆಲವು ನಿರ್ದಿಷ್ಟ ಪ್ರದೇಶಗಳಲ್ಲಿ ಗುಡುಗು ಮಿಂಚು ಸಹಿತ ಸಾಧಾರಣ ಮಳೆಯಾಗಬಹುದು. ಕೆಲವೊಮ್ಮೆ ಮೇಲ್ಮೈ ಗಾಳಿಯು ಪ್ರಬಲವಾಗಿರುವ ಸಾಧ್ಯತೆಯಿದೆ. ಗರಿಷ್ಠ ತಾಪಮಾನವು 34 ಡಿಗ್ರಿ ಸೆಲ್ಶಿಯಸ್ ಕನಿಷ್ಠ 23 ಡಿಗ್ರಿ ಸೆಲ್ಶಿಯಸ್ ಇರಬಹುದು ಎಂದು ಹೇಳಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮೇವಿನ ಬಿತ್ತನೆ ಬೀಜ ಉಚಿತ ಪೂರೈಕೆ; ರೈತರಿಂದ ಅರ್ಜಿ ಆಹ್ವಾನ

ಪ್ರಸಕ್ತ ಸಾಲಿನಲ್ಲಿ ರಾಜ್ಯದಲ್ಲಿ ಮಳೆಯ ಪ್ರಮಾಣ ತೀರಾ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ...

ಉಡುಪಿ | ಅ.11ರಿಂದ 21ರವರೆಗೆ ಉಚ್ಚಿಲ ದಸರಾ: ಅ.12ರಂದು ಮಹಿಳಾ ದಸರಾ ಉದ್ಘಾಟಿಸಲಿರುವ ಸಿಎಂ

ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ವ್ಯವಸ್ಥಾಪನೆಯ ಉಚ್ಚಿಲ ಶ್ರೀ ಮಹಾಲಕ್ಷ್ಮೀ...

ಮೋಶಾ ಜೋಡಿ ಪ್ರಜಾಪ್ರಭುತ್ವದ ಹತ್ಯೆಗೆ ಸಂಚು ರೂಪಿಸಿದೆ; ಅಭಿಜೀತ್ ದೀಪ್ಕೆ

ಕೇಂದ್ರದ ಬಿಜೆಪಿ ಸರ್ಕಾರ ಹಾಗೂ ಚುನಾವಣಾ ಆಯೋಗವು ಸೇರಿ ದೇಶದಲ್ಲಿ...

ಎಸ್‌ಐಆರ್ ವಿರುದ್ಧದ ಹೋರಾಟ ಜನರ ಹಕ್ಕಿನ ಹೋರಾಟ: ಪ್ರಕಾಶ್ ರಾಜ್

“ಕಳೆದ ಒಂದು ವರ್ಷದಿಂದ ಕರ್ನಾಟಕದ ನಾಗರಿಕ ಸಂಘಟನೆಗಳು ಎಸ್‌ಐಆರ್ ವಿರುದ್ಧ ನಡೆಸುತ್ತಿರುವ...