ರಾಜ್ಯಾದ್ಯಂತ ಎಲ್ಲ ಪೊಲೀಸ್​ ಸಿಬ್ಬಂದಿಗೆ ಹೆಲ್ಮೆಟ್ ಕಡ್ಡಾಯ : ಅಲೋಕ್ ಕುಮಾರ್ ಆದೇಶ

Date:

ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಎಲ್ಲ ಕಡೆ ಪೊಲೀಸರು ದ್ವಿಚಕ್ರ ವಾಹನಗಳಲ್ಲಿ ಸಂಚರಿಸುವಾಗ ಕಡ್ಡಾಯವಾಗಿ ಹೆಲ್ಮೆಟ್‌ ಧರಿಸಬೇಕು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಮೋಟಾರು ವಾಹನ ಕಾಯ್ದೆ ಕಲಂ 129(ಎ) ಮತ್ತು (ಬಿ) ಅಡಿ ಅಧಿಕಾರಿಗಳು ಹಾಗೂ ಸಿಬ್ಬಂದಿ ದ್ವಿಚಕ್ರ ವಾಹನ ಸಂಚಾರದ ವೇಳೆ ಪೊಲೀಸ್​ ಸಿಬ್ಬಂದಿ ಕಡ್ಡಾಯವಾಗಿ ಹೆಲ್ಮೆಟ್​ ಧರಿಸುವಂತೆ ಬುಧವಾರ ಸಂಚಾರ ಮತ್ತು ರಸ್ತೆ ಸುರಕ್ಷತಾ ಎಡಿಜಿಪಿ ಅಲೋಕ್ ಕುಮಾರ್ ಸುತ್ತೋಲೆ ಹೊರಡಿಸಿದ್ದಾರೆ.

ರಾಜ್ಯದ ನಾನಾ ಘಟಕಗಳಲ್ಲಿ ಅಪಘಾತ ಘಟನೆಗಳು ವರದಿಯಾಗುತ್ತಿವೆ. ಅದರಲ್ಲಿಯೂ ಹೆಲ್ಮೆಟ್ ಇಲ್ಲದೇ ಅಧಿಕಾರಿ ಮತ್ತು ಸಿಬ್ಬಂದಿ ರಸ್ತೆ ಅಪಘಾತ‌‌ದಲ್ಲಿ ಕೆಲವರಿಗೆ ಗಾಯಗಳಾದರೆ ಇನ್ನೂ ಕೆಲವರು ಮೃತಪಟ್ಟಿದ್ದಾರೆ. ಹೀಗಾಗಿ, ಮತ್ತೆ ಈ ರೀತಿಯ ಅಪಘಾತಗಳು ಮರು ಕಳುಹಿಸದಂತೆ ಕ್ರಮಕೈಗೊಂಡಿದ್ದು, ರಾಜ್ಯಾದ್ಯಂತ ಎಲ್ಲ ಪೊಲೀಸ್​ ಸಿಬ್ಬಂದಿಗೆ ಕಡ್ಡಾಯ ಹೆಲ್ಮೆಟ್ ಆದೇಶ ಹೊರಡಿಸಲಾಗಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಅಪಘಾತದಿಂದ ಆಗುವ ಸಾವು–ನೋವುಗಳನ್ನು ತಪ್ಪಿಸಲು ಇನ್ನು ಮುಂದೆ ರಾಜ್ಯಾದ್ಯಂತ ಎಲ್ಲ ಘಟಕಗಳಲ್ಲಿ (ಬೆಂಗಳೂರು ನಗರ ಒಳಗೊಂಡಂತೆ) ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸ್‌ ಅಧಿಕಾರಿ ಮತ್ತು ಸಿಬ್ಬಂದಿ ತಮ್ಮ ದ್ವಿಚಕ್ರ ವಾಹನಗಳಲ್ಲಿ ಸಂಚರಿಸುವಾಗ ಮೋಟಾರು ವಾಹನ ಕಾಯ್ದೆಯಡಿಯಲ್ಲಿ ಕಲಂ 129(ಎ) (ಬಿ) ರಲ್ಲಿ ನಮೂದಿಸಿರುವಂತೆ ಕಡ್ಡಾಯವಾಗಿ ಸುರಕ್ಷಿತ ಹೆಲ್ಮೆಟ್‌ ಅನ್ನು ಧರಿಸಬೇಕು. ಹೆಲ್ಮೆಟ್‌ ಭದ್ರವಾಗಿ ಕಟ್ಟಿಕೊಳ್ಳಬೇಕು ಎಂದು ಹೇಳಿದೆ.

ಈ ಸುದ್ದಿ ಓದಿದ್ದೀರಾ? ಆಂಧ್ರ ಪ್ರದೇಶ | 1.4 ಲಕ್ಷ ಮನೆಗಳ ಬಾಗಿಲಿಗೆ ಉಚಿತ ಔಷಧಿ ವಿತರಣೆ

ಅಲ್ಲದೇ, ತಮ್ಮ ವ್ಯಾಪ್ತಿಯ ಪೊಲೀಸರು ಕಡ್ಡಾಯವಾಗಿ ಹೆಲ್ಮೆಟ್‌ ಧರಿಸುವಂತೆ ನೋಡಿಕೊಳ್ಳುವ ಬಗ್ಗೆ ಹಿರಿಯ ಅಧಿಕಾರಿಗಳು ನಿರ್ದೇಶನ ನೀಡಬೇಕು ಎಂದು ತಿಳಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಲಿತ ಯುವಕರ ದಾರಿ ತಪ್ಪಿಸುತ್ತಿದೆ ಕೋಮುವಾದಿ ಸಂಘಟನೆ; ಮುತ್ತು ಬಿಳಿಯಲಿ ಆರೋಪ

ಗದಗ ಜಿಲ್ಲಾಧಿಕಾರಿ ಕಚೇರಿ ಮುಂದೆ 'ದಲಿತ ಮಿತ್ರ ಮೇಳ ಗದಗ' ಎಂಬ...

ಕಲಬುರಗಿ | ಭಿಕ್ಷೆ ಬೇಡಿ ಬದುಕುತ್ತಿರುವ ಅಲೆಮಾರಿ ಸಮುದಾಯಕ್ಕಿಲ್ಲ ನೆಲೆ

ಅಲೆಮಾರಿ ಸಮುದಾಯದ 40 ಕುಟುಂಬಗಳ ಜನರು ಜೇವರ್ಗಿ ಪಟ್ಟಣದ ಕೊಳ್ಳಕೂರು ಕ್ರಾಸ್...

ಮಂಗಳೂರು | ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾಗಿ ಉಮರ್ ಯು ಹೆಚ್ ಅಧಿಕಾರ ಸ್ವೀಕಾರ

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ನೂತನ ಅಧ್ಯಕ್ಷರಾಗಿ ಇತ್ತೀಚೆಗಷ್ಟೇ ನೇಮಕಗೊಂಡಿದ್ದ ಉಮರ್...

ರೇಣುಕಸ್ವಾಮಿ ಕೊಲೆ | ಅಧಿಕಾರಿಗಳು ಪ್ರಾಮಾಣಿಕ ತನಿಖೆ ನಡೆಸಬೇಕು: ಬಸವರಾಜ ಬೊಮ್ಮಾಯಿ

ರೇಣುಕಸ್ವಾಮಿ ಕೊಲೆ ಗಂಭೀರ ಪ್ರಕರಣವಾಗಿದ್ದು ಈ ಪ್ರಕರಣದಲ್ಲಿ ಆರೋಪಿಗಳಿಗೆ ಕಠಿಣ ಶಿಕ್ಷೆ...